Ripponpete | ಅತಿಯಾದ ಮೊಬೈಲ್ ಬಳಕೆಯಿಂದ ಮಾನಸಿಕ, ದೈಹಿಕ ಮತ್ತು ಸಾಮಾಜಿಕ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ : ಆದರ್ಶ ಗೌಡ ಪಿ ಎನ್

Ripponpete | ಅತಿಯಾದ ಮೊಬೈಲ್ ಬಳಕೆಯಿಂದ ಮಾನಸಿಕ, ದೈಹಿಕ ಮತ್ತು ಸಾಮಾಜಿಕ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ : ಆದರ್ಶ ಗೌಡ ಪಿ ಎನ್


ರಿಪ್ಪನ್‌ಪೇಟೆ : ಅತಿಯಾದ ಮೊಬೈಲ್ ಬಳಕೆಯಿಂದ   ಮಾನಸಿಕ, ದೈಹಿಕ ಮತ್ತು ಸಾಮಾಜಿಕ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ ಎಂದು ಆದರ್ಶ ಗೌಡ ಪಿ ಎನ್ ಹೇಳಿದರು.

ಸರ್ಕಾರಿ ಪ್ರಥಮ ದರ್ಜೆ ಕಾಲೇಜು ರಿಪ್ಪನ್ ಪೇಟೆ ಯುವ ರೆಡ್ ಕ್ರಾಸ್  ಘಟಕ ಹಾಗೂ  ಸಿಮ್ಖಾನ್ ಫೌಂಡೇಶನ್ ಮತ್ತು ಸೋಶಿಯಲ್ ವೆಲ್ಫೇರ್  ಟ್ರಸ್ಟ್ ವತಿಯಿಂದ ನಡೆದ ಅತಿಯಾದ ಮೊಬೈಲ್ ಬಳಕೆಯಿಂದ ಆಗುವ ದುಷ್ಪರಿಣಾಮಗಳ ಜಾಗೃತಿ  ಕಾರ್ಯಗಾರದಲ್ಲಿ ಮಾತನಾಡುತ್ತಾ ಮೊಬೈಲ್ ನ ಅತಿಯಾದ ಬಳಕೆಯಿಂದ ಅನೇಕ ರೀತಿಯ ಮಾನಸಿಕ,ದೈಹಿಕ ಮತ್ತು  ಸಾಮಾಜಿಕ ಸಮಸ್ಯೆಗಳನ್ನು  ಎದುರಿಸಬೇಕಾಗುತ್ತದೆ.

ವ್ಯಕ್ತಿಯೊಬ್ಬ ಮೊಬೈಲ್ ಬಳಸುವಾಗ, ಹೆಚ್ಚಿನ ಬಿಸಿ   ತಲೆಯ  ಭಾಗದಲ್ಲಿ ಕಾಣಿಸಿಕೊಳ್ಳುತ್ತದೆ ಇದರಿಂದ ರಕ್ತ ಪರಿಚಲನೆ ವ್ಯತ್ಯಾಸವಾಗಿ ದೇಹದ ತಾಪಮಾನ ಹೆಚ್ಚಾಗುತ್ತದೆ   ಇದು ಮೆದುಳಿನ ಆರೋಗ್ಯಕ್ಕೆ ಹಾನಿಕಾರಕ. ಮೊಬೈಲ್ ಸರಿಯಾಗಿ ಬಳಸದಿದ್ದರೆ ಕ್ಯಾನ್ಸರ್ ಗೆ ತುತ್ತಾಗಬೇಕಾಗುತ್ತದೆ ಎಂದು ತಿಳಿಸಿದರು.ಮೊಬೈಲ್  ಇಂದು ಅತ್ಯಾವಶ್ಯಕ ಸಾಧನ ಆದರೂ ಅದನ್ನು ಇತಿಮಿತಿಯಿಂದ ಬಳಸಿದರೆ ಒಳಿತು ಎಂದು  ವಿದ್ಯಾರ್ಥಿಗಳಿಗೆ ಕಿವಿಮಾತು ತಿಳಿಸಿದರು. ನಾವೆಲ್ಲರೂ ಶಿಕ್ಷಣದಲ್ಲಿ ಮಾತ್ರ ವಿದ್ಯಾವಂತರಾಗಿದ್ದೇವೆ ಆದರೆ ಮೊಬೈಲ್ ಬಳಕೆಯಲ್ಲಿ ಅವಿದ್ಯಾವಂತರು ಎಂದು ತಿಳಿಸಿದರು. ವಿದ್ಯಾರ್ಥಿಗಳು ತಮ್ಮ ಶೈಕ್ಷಣಿಕ ಅಭಿವೃದ್ಧಿಗೆ ಸೀಮಿತಗೊಳಿಸಿ ಮೊಬೈಲ್ ಬಳಸಬೇಕೆಂದು ಕರೆ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಾಂಶುಪಾಲರಾದ ಚಂದ್ರಶೇಖರ್  ಟಿ. ವಹಿಸಿದ್ದರು ಸಂಪನ್ಮೂಲ ವ್ಯಕ್ತಿಗಳಾಗಿ ಸಿಮ್ ಖಾನ್ ಫೌಂಡೇಶನ್ ನಿರ್ದೇಶಕರಾದ ಆದರ್ಶ ಗೌಡ ಪಿ ಎನ್ ರವರು   ಆಗಮಿಸಿದ್ದರು.

ಕಾರ್ಯಕ್ರಮದಲ್ಲಿ  ಐಕ್ಯೂಎಸಿ ಸಂಚಾಲಕರಾದ ರಾಜು ಆರ್. ಕೆ.   ಇಂಗ್ಲಿಷ್ ವಿಭಾಗದ   ಮುಖ್ಯಸ್ಥರಾದ ರಾಜು ಬಿ ಎಲ್  ಯುವ ರೆಡ್ ಕ್ರಾಸ್ ಘಟಕದ ಸಂಚಾಲಕರಾದ ಹರ್ಷ ಕುಮಾರ್ ಕೆ ಆರ್  ಹಾಗೂ ಕಾಲೇಜಿನ  ಬೋಧಕ ಮತ್ತು ಬೋಧಕೇತರ ಸಿಬ್ಬಂದಿ, ವಿದ್ಯಾರ್ಥಿ ವೃಂದ ಭಾಗವಹಿಸಿದ್ದರು.
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಕಸ್ತೂರಿರಂಗನ್ ವರದಿ ವಿರೋಧಿ ಹೋರಾಟದಲ್ಲಿ ಬಿಜೆಪಿ ವಿರುದ್ಧ ಕಾಂಗ್ರೆಸ್ ನಾಯಕರ ತೀವ್ರ ವಾಗ್ದಾಳಿ

ಕಸ್ತೂರಿರಂಗನ್ ವರದಿ ವಿರೋಧಿ ಹೋರಾಟದಲ್ಲಿ ಬಿಜೆಪಿ ವಿರುದ್ಧ ಕಾಂಗ್ರೆಸ್ ನಾಯಕರ ತೀವ್ರ ವಾಗ್ದಾಳಿ Former Education Minister Kimmane Ratnakar…

1 hour ago

ಪಟಗುಪ್ಪ ಸೇತುವೆ ಬಳಿಯ ಹಿನ್ನೀರಿನಲ್ಲಿ ಅನಾಮಧೇಯ ವ್ಯಕ್ತಿಯ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆ

ಪಟಗುಪ್ಪ ಸೇತುವೆ ಬಳಿಯ ಹಿನ್ನೀರಿನಲ್ಲಿ ಅನಾಮಧೇಯ ವ್ಯಕ್ತಿಯ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆ An unidentified man’s partially decomposed…

2 hours ago

ಬಸ್‌-ಬೈಕ್ ಭೀಕರ ಅಪಘಾತ; 27 ವರ್ಷದ ಯುವಕ ಸ್ಥಳದಲ್ಲೇ ಸಾವು

ಬಸ್‌-ಬೈಕ್ ಭೀಕರ ಅಪಘಾತ; 27 ವರ್ಷದ ಮೆಕ್ಯಾನಿಕ್ ಸ್ಥಳದಲ್ಲೇ ಸಾವು A 27-year-old mechanic was killed in a…

5 hours ago

ಅಕ್ರಮ ವಿದ್ಯುತ್‌ ಬೇಲಿಗೆ ಸಿಲುಕಿ ಮೂರು ವರ್ಷದ ಕರಡಿ ಸಾವು – ತೋಟದ ಮಾಲೀಕನ ಬಂಧನ

ಅಕ್ರಮ ವಿದ್ಯುತ್‌ ಬೇಲಿಗೆ ಸಿಲುಕಿ ಮೂರು ವರ್ಷದ ಕರಡಿ ಸಾವು - ತೋಟದ ಮಾಲೀಕನ ಬಂಧನ A three-year-old male…

5 hours ago

ಶಿವಮೊಗ್ಗದಲ್ಲಿ ರೌಡಿಶೀಟರ್ ‘ಕುಳ್ಳಿ ಕಿರಣ್’ ಬರ್ಬರ ಹತ್ಯೆ; ಪ್ರಮುಖ ಆರೋಪಿ ಉಮೇಶ್ ಮೇಲೆ ಪೊಲೀಸ್ ಫೈರಿಂಗ್

ಶಿವಮೊಗ್ಗದಲ್ಲಿ ರೌಡಿಶೀಟರ್ ‘ಕುಳ್ಳಿ ಕಿರಣ್’ ಬರ್ಬರ ಹತ್ಯೆ; ಪ್ರಮುಖ ಆರೋಪಿ ಉಮೇಶ್ ಮೇಲೆ ಪೊಲೀಸ್ ಫೈರಿಂಗ್ Shivamogga rowdy sheeter…

9 hours ago

ಜಂಬಳ್ಳಿ ಅರಣ್ಯದಲ್ಲಿ ಕಾರು ಬಿಟ್ಟು ನಾಪತ್ತೆಯಾಗಿದ್ದ ಕುಡುಮಲ್ಲಿಗೆ ಸೊಸೈಟಿ ಸಿಇಒ ಮದನ್ ಸುರಕ್ಷಿತ ಪತ್ತೆ

ಜಂಬಳ್ಳಿ ಅರಣ್ಯದಲ್ಲಿ ಕಾರು ಬಿಟ್ಟು ನಾಪತ್ತೆಯಾಗಿದ್ದ ಕುಡುಮಲ್ಲಿಗೆ ಸೊಸೈಟಿ ಸಿಇಒ ಮದನ್ ಸುರಕ್ಷಿತ ಪತ್ತೆ Kudumallige Society CEO Madan,…

9 hours ago