Ripponpete | ಅನ್ಯ ಭಾಷೆಯ ವ್ಯಾಮೂಹ ಸಲ್ಲ – ವೀರೇಶ್ ಆಲುವಳ್ಳಿ

ಅನ್ಯ ಭಾಷೆಯ ವ್ಯಾಮೂಹ ಸಲ್ಲ – ವೀರೇಶ್ ಆಲುವಳ್ಳಿ
ರಿಪ್ಪನ್‌ಪೇಟೆ : ಕನ್ನಡ ನಾಡಿನ ಭಾಷೆ  ಮತ್ತು ನಮ್ಮ ಸಂಸ್ಕೃತಿ ಎಲ್ಲರನ್ನು ಆಕರ್ಷಿಸುವಂತಹದ್ದು.ಅದರೆ ನಾವುಗಳು ಅನ್ಯ ಭಾಷೆಯ ವ್ಯಾಮೂಹದಿಂದಾಗಿ ನಮ್ಮ ಮಾತೃ ಭಾಷೆ ಕನ್ನಡವನ್ನು ಮಾತನಾಡದೇ ಬೇರೆ ಭಾಷೆಯನಾಡುತ್ತಾ ಮಕ್ಕಳಿಗೆ ಅದನ್ನು ಕಲಿಸುತ್ತಿರುವುದರ ಬಗ್ಗೆ ತಾಲ್ಲೂಕ್ ಪಂಚಾಯ್ತಿ ಮಾಜಿ ಅಧ್ಯಕ್ಷ ವೀರೇಶ್ ಅಲುವಳ್ಳಿ ಕಳವಳ ವ್ಯಕ್ತ ಪಡಿಸಿದರು.

ರಿಪ್ಪನ್‌ಪೇಟೆಯ ಕಲಾಕೌಸ್ತೂಭ ಕನ್ನಡ ಸಂಘದ 30 ನೇ ವರ್ಷದ ವಾರ್ಷೀಕೋತ್ಸವ ಮತ್ತು ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿ ಕನ್ನಡ ಕಲಿತು ಬಳಸುವಂತಾದರೆ ಕನ್ನಡದ ಏಳಿಗೆ ತನಗೆ ತಾನೆ ಅಗುತ್ತದೆ.ಇಂಗ್ಲಿಷ್ ಜೀವನಕ್ಕೆ ಬೇಕು.ಅದನ್ನು ಕಲಿಯಿರಿ. ಅದರೆ ನಮ್ಮ ದಿನನಿತ್ಯದ ಆಡುಭಾಷೆಯಾಗಿ ಕನ್ನಡವನ್ನು ಬಳಸಿ ಅದು ನಮ್ಮ ಭಾವ ಭಾಷೆ ಅದ್ದರಿಂದ ಯುವ ಜನರು ಕನ್ನಡ ಬಳಸಬೇಕು ಎಂದು ಕರೆ ನೀಡಿದರು.

ಇದೇ ಸಂದರ್ಭದಲ್ಲಿ ಇಲ್ಲಿನ ಶಾರದಾ ರಾಮಕೃಷ್ಣ ವಿದ್ಯಾಲಯದ ವಿದ್ಯಾರ್ಥಿಗಳು ರಾಜ್ಯಮಟ್ಟದ ಕಬ್ಬಡಿ ಪಂದ್ಯಾವಳಿಯಲ್ಲಿ ಪ್ರಥಮ ಸ್ಥಾನ ಗಳಿಸುವುದರೊಂದಿಗೆ ರಾಷ್ಟಮಟ್ಟಕ್ಕೆ ಆಯ್ಕೆಯಾಗುವ ಮೂಲಕ ಊರಿನ ಗೌರವವನ್ನು ಉತ್ತುಂಗಕ್ಕೆ ಏರಿಸಿ ಸಾಧನೆ ಮಾಡಿದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಅಭಿನಂದಿಸಿ ಗೌರವಿಸಲಾಯಿತು.

ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಲಾಕೌಸ್ತುಭ ಕನ್ನಡ ಸಂಘದ ಅಧ್ಯಕ್ಷೆ ಲೀಲಾ ಉಮಾಶಂಕರ ವಹಿಸಿದ್ದರು.

ಕಾರ್ಯಕ್ರಮದಲ್ಲಿ ಕಲಾಕೌಸ್ತುಭ ಕನ್ನಡ ಸಂಘದ ಪ್ರಧಾನ ಕಾರ್ಯದರ್ಶಿ ಶೈಲಾ ಆರ್.ಪ್ರಭು,ಗ್ರಾಮ ಪಂಚಾಯ್ತಿ ಆಧ್ಯಕ್ಷೆ ಧನಲಕ್ಷಿ,ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಆರ್.ಎ.ಚಾಬುಸಾಬ್, ಎಂ.ಸುರೇಶ್‌ಸಿಂಗ್, ಆರ್.ಟಿ.ಗೋಪಾಲ ,ಈಶ್ವರಶೆಟ್ಟಿ, ದೀಪಾಸುದೀರ್, ಅಶ್ವಿನಿ ರವಿಶಂಕರ್,ವಿನೋಧ,ಸುಂದರೇಶ್,ದಾನಮ್ಮ,ಪದ್ಮಸುರೇಶ್, ಉಮಾಸುರೇಶ್, ಗೀತಾ.ರೇಖಾ ರವಿ,ಅಶ್ವಿನಿ, ಮಂಜುಳಕೇತಾರ್ಜಿರಾವ್, ತಾಲ್ಲೂಕ್ ಪಂಚಾಯ್ತಿ ಮಾಜಿ ಅಧ್ಯಕ್ಷೆ ನಾಗರತ್ನ ದೇವರಾಜ್,ರಂಜನ,ವನಮಾಲ,ಲಕ್ಷಿö್ಮ ಶ್ರೀನಿವಾಸ್‌, ತ.ಮ.ನರಸಿಂಹ,ಜಿ.ಆರ್.ಗೋಪಾಲಕೃಷ್ಣ, ಮಹಮದ್ ಅಲಿ, ಮುರುಳಿ,ಸುದೀರ್, ರಾಮುಬಳೆಗಾರ್, ರಾಜುಭಂಡಾರಿ,ಮಂಜುನಾಥ ಗವಟೂರು,ಇನ್ನಿತರರು ಹಾಜರಿದ್ದರು.
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಈದ್ ಮಿಲಾದ್ ಮೆರವಣಿಗೆ: ಪಾನೀಯ, ಕೇಕ್ ವಿತರಿಸಿ ಸೌಹಾರ್ದತೆ ಮೆರೆದ ಹಿಂದೂ ಸಂಘಟನೆ ಕಾರ್ಯಕರ್ತರು

ಈದ್ ಮಿಲಾದ್ ಮೆರವಣಿಗೆ: ಪಾನೀಯ, ಕೇಕ್ ವಿತರಿಸಿ ಸೌಹಾರ್ದತೆ ಮೆರೆದ ಹಿಂದೂ ಸಂಘಟನೆ ಕಾರ್ಯಕರ್ತರು ರಿಪ್ಪನ್ ಪೇಟೆ : ಬಾಳಿನ…

13 hours ago

ಸೆ.5ರ ಶಿಕ್ಷಕರ ದಿನಾಚರಣೆಗೆ ಗೈರು; ಶಾಸಕ ಬೇಳೂರು ಗೋಪಾಲಕೃಷ್ಣ ವಿರುದ್ಧ ಬಿಜೆಪಿ ಆರೋಪ

ಸೆ.5ರ ಶಿಕ್ಷಕರ ದಿನಾಚರಣೆಗೆ ಗೈರು; ಶಾಸಕ ಬೇಳೂರು ಗೋಪಾಲಕೃಷ್ಣ ವಿರುದ್ಧ ಬಿಜೆಪಿ ಆರೋಪ BJP leaders in Sagar have…

13 hours ago

ಈದ್ ಮಿಲಾದ್ ಮೆರವಣಿಗೆಯಲ್ಲಿ ಮಾದಕ ವ್ಯಸನ ವಿರುದ್ಧ ಸಮರ: ‘ಗಾಂಜಾ ಬೇಡ ಬ್ರೋ’ ಅಭಿಯಾನಕ್ಕೆ ಭರ್ಜರಿ ಸ್ಪಂದನೆ

ಯುವಶಕ್ತಿಯೇ ಎಚ್ಚೆತ್ತುಕೋ: ಈದ್ ಮಿಲಾದ್ ಸಂಭ್ರಮದಲ್ಲಿ ಮೊಳಗಿದ ‘ನಶಾಮುಕ್ತ ಭಾರತ’ ಸಂದೇಶ Ripponpete Police launched an anti-drug awareness…

19 hours ago

ಅಂಗವಿಕಲ ಯುವಕನ ಸೈಟ್ ತೆರವಿಗೆ ಅರಣ್ಯ ಇಲಾಖೆ ಯತ್ನ – ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಆಕ್ರೋಶ, ಹೈಡ್ರಾಮಾ

ಅಂಗವಿಕಲ ಯುವಕನ ಸೈಟ್ ತೆರವಿಗೆ ಅರಣ್ಯ ಇಲಾಖೆ ಯತ್ನ – ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಆಕ್ರೋಶ, ಹೈಡ್ರಾಮಾ High drama…

2 days ago

ರಿಪ್ಪನ್ ಪೇಟೆ ಸಮೀಪದ ಅರಣ್ಯದಲ್ಲಿ ಕುಡುಮಲ್ಲಿಗೆ ಸೊಸೈಟಿ ಸಿಇಒ ನಾಪತ್ತೆ ರಹಸ್ಯವೇನು? ಅನಾಹುತವೋ, ಪಲಾಯನವೋ? ಮುಂದುವರಿದ ತೀವ್ರ ಶೋಧ!

ರಿಪ್ಪನ್ ಪೇಟೆ ಸಮೀಪದ ಅರಣ್ಯದಲ್ಲಿ ಕುಡುಮಲ್ಲಿಗೆ ಸೊಸೈಟಿ ಸಿಇಒ ನಾಪತ್ತೆ ರಹಸ್ಯವೇನು? ಅನಾಹುತವೋ, ಪಲಾಯನವೋ? ಮುಂದುವರಿದ ತೀವ್ರ ಶೋಧ! An…

2 days ago

ರಿಪ್ಪನ್‌ಪೇಟೆಯಲ್ಲಿ ಅರಣ್ಯಾಧಿಕಾರಿಗಳ ದಾಳಿ : 21 ಕೆ.ಜಿ. ಜಿಂಕೆ ಮಾಂಸ ವಶ, ಆರೋಪಿಗಳು ಪರಾರಿ

ರಿಪ್ಪನ್‌ಪೇಟೆಯಲ್ಲಿ ಅರಣ್ಯಾಧಿಕಾರಿಗಳ ದಾಳಿ : 21 ಕೆ.ಜಿ. ಜಿಂಕೆ ಮಾಂಸ ವಶ, ಆರೋಪಿಗಳು ಪರಾರಿ Forest Flying Squad officials…

2 days ago