Ripponpete | ಗವಟೂರಿನಲ್ಲಿ ಕಾರು ಮತ್ತು ಸ್ಕೂಟಿ ನಡುವೆ ಅಪಘಾತ – ಮಹಿಳೆಯ ಕಾಲು ಮುರಿತ
ರಿಪ್ಪನ್‌ಪೇಟೆ : ಇಲ್ಲಿನ ಗವಟೂರಿನಲ್ಲಿ ಕಾರು ಹಾಗೂ ಸ್ಕೂಟಿ ನಡುವೆ ಭೀಕರ ಅಪಘಾತವಾಗಿ ಸ್ಕೂಟಿಯಲ್ಲಿದ್ದ ಮಹಿಳೆಯ ಕಾಲು ಮುರಿತವಾದ ಘಟನೆ ನಡೆದಿದೆ.
ಹೊಸನಗರ ಕಡೆಯಿಂದ ಬರುತ್ತಿದ್ದ ಮಾರುತಿ ಸ್ವಿಫ್ಟ್ ಕಾರು ಹಾಗೂ ಹಳಿಯೂರು ರಸ್ತೆಯಿಂದ ಮುಖ್ಯ ರಸ್ತೆಗೆ ಬಂದ ಸ್ಕೂಟಿಗೆ ಡಿಕ್ಕಿಯಾಗಿದೆ.
ಬೈಕ್ ನಲ್ಲಿ ದೊಡ್ಡಿನಕೊಪ್ಪ ಗ್ರಾಮದ ಚಂದ್ರಬಾಬು ಮತ್ತು ಲಕ್ಷ್ಮಿ ದಂಪತಿಗಳು ಪ್ರಯಾಣಿಸುತಿದ್ದು ಘಟನೆಯಲ್ಲಿ ಲಕ್ಷಿ ರವರ ಬಲಗಾಲು ಮುರಿತವಾಗಿದೆ.
ತಕ್ಷಣ ಸ್ಥಳೀಯರು ಗಾಯಾಳುವನ್ನು ರಿಪ್ಪನ್‌ಪೇಟೆ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆದೊಯ್ದು ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗಕ್ಕೆ ಕರೆದೊಯ್ದಿದ್ದಾರೆ. ಘಟನೆಯಲ್ಲಿ ಕಾರಿನ ಮುಂಭಾಗ ಮತ್ತು ಸ್ಕೂಟಿ ನಜ್ಜುಗುಜ್ಜಾಗಿದೆ.
ರಿಪ್ಪನ್‌ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.