Headlines

Ripponpete | ಗೃಹಿಣಿ ಆತ್ಮಹತ್ಯೆ ಪ್ರಕರಣ – ಅನುಮಾನಸ್ಪದ ಸಾವು ಎಂದು‌ ಕುಟುಂಬಸ್ಥರ ಆರೋಪ : ಮೃತದೇಹ ಮೆಗ್ಗಾನ್ ಗೆ ರವಾನೆ

Ripponpete | ಗೃಹಿಣಿ ಆತ್ಮಹತ್ಯೆ ಪ್ರಕರಣ – ಅನುಮಾನಸ್ಪದ ಸಾವು ಎಂದು‌ ಕುಟುಂಬಸ್ಥರ ಆರೋಪ : ಮೃತದೇಹ ಮೆಗ್ಗಾನ್ ಗೆ ರವಾನೆ


ರಿಪ್ಪನ್‌ಪೇಟೆ : ತೀರ್ಥಹಳ್ಳಿ ರಸ್ತೆಯ ಮನೆಯೊಂದರಲ್ಲಿ ಗೃಹಿಣಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬಗ್ಗೆ ಕುಟುಂಬಸ್ಥರು ಸಂಶಯ ವ್ಯಕ್ತಪಡಿಸಿದ್ದಾರೆ.

ಕವನಾ (24) ಮೃತಪಟ್ಟ ಗೃಹಿಣಿಯಾಗಿದ್ದು,ತೀರ್ಥಹಳ್ಳಿ ರಸ್ತೆಯ ಹಳೆಯ ಚಿತ್ರಮಂದಿರದ ಮುಂಭಾಗದಲ್ಲಿ ಬಾಡಿಗೆ ಮನೆಯ ಅಡುಗೆ ಕೋಣೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು.


ಸಾವಿನ ಬಗ್ಗೆ ಸಂಶಯ ವ್ಯಕ್ತಪಡಿಸಿರುವ ಕುಟುಂಬಸ್ಥರು ಮೇತದೇಹವನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಕರೆದೊಯ್ದಿದ್ದಾರೆ.

ಈ ಬಗ್ಗೆ ರಿಪ್ಪನ್‌ಪೇಟೆ ಪೊಲೀಸ್ ಠಾಣೆಯಲ್ಲಿ ಅನುಮಾನಾಸ್ಪದ ಸಾವು ಎಂದು ಪ್ರಕರಣ ದಾಖಲಾಗಿದ್ದು ತನಿಖೆ ಕೈಗೊಂಡಿದ್ದಾರೆ.

ಕುಟುಂಬಸ್ಥರ ಆರೋಪವೇನು..??

ಆತ್ಮಹತ್ಯೆ ಮಾಡಿಕೊಂಡ ಗೃಹಿಣಿ ಕವನ ರವರ ಮೊಬೈಲ್ ಇನ್ನೂ ಪತ್ತೆಯಾಗಿಲ್ಲ ,ಬಾಗಿಲು ತೆರೆದಿಟ್ಟದು ಯಾರು..?? ಮನೆಯಲ್ಲಿ ಬಿರಿಯಾನಿ ,ಕಬಾಬ್ ತಂದಿಟ್ಟದ್ದು ಯಾರು..?? ಇದೆಲ್ಲಾ ಗಮನಿಸಿದರೆ ಮೇಲ್ನೋಟಕ್ಕೆ ಈ ಆತ್ಮಹತ್ಯೆ ಬಗ್ಗೆ ಅನುಮಾನ ವ್ಯಕ್ತವಾಗುತ್ತಿದೆ ಆ ಹಿನ್ನಲೆಯಲ್ಲಿ ಮೃತದೇಹವನ್ನು ಶಿವಮೊಗ್ಗದಲ್ಲಿ ಮರಣೋತ್ತರ ಪರೀಕ್ಷೆ ನಡೆಸಲು ಕರೆತಂದಿದ್ದೇವೆ ಎಂದು ಕುಟುಂಬಸ್ಥರು ಹೇಳುತ್ತಾರೆ. 

ಪೊಲೀಸರು ಈ ಬಗ್ಗೆ ಸೂಕ್ತ ತನಿಖೆ ನಡೆಸುವ ಮೂಲಕ ನ್ಯಾಯ ಕೊಡಿಸುವಂತೆ ಕುಟುಂಬಸ್ಥರು ಒತ್ತಾಯಿಸಿದ್ದಾರೆ.

ಲವ್ ಮ್ಯಾರೇಜ್ ಆಗಿದ್ದ ಕವನ…. 

ಕಳೆದ ಆರು ವರ್ಷಗಳ ಹಿಂದೆ ಶಿಕಾರಿಪುರದ ರುದ್ರೇಶ್ ಎಂಬುವವರನ್ನು ಅಂತರ್ ಜಾತಿ ವಿವಾಹವಾಗಿದ್ದ ಕವನ ರವರಿಗೆ ಐದು ವರ್ಷದ ಮಗನಿದ್ದು ತಾಯಿ ಮನೆಯಲ್ಲಿ ಬಿಟ್ಟಿದ್ದಾರೆ. ಕಳೆದ ಎರಡು ವರ್ಷಗಳಿಂದ ದಾಂಪತ್ಯ ಕಲಹ ಹಿನ್ನಲೆಯಲ್ಲಿ ದಂಪತಿಗಳು ದೂರವಾಗಿದ್ದು 6 ತಿಂಗಳ ಹಿಂದೆ ವಿಚ್ಚೇದನಕ್ಕೂ ಅರ್ಜಿ ಸಲ್ಲಿಸಿದ್ದರು.

ಜೀವನೋಪಾಯಕ್ಕಾಗಿ ಪಟ್ಟಣದ ಹೆಬ್ಬಾರ್ ಶಾಪಿಂಗ್ ಮಾಲ್ ನಲ್ಲಿ ಕೆಲಸ ಮಾಡುತಿದ್ದ ಕವನ ತನ್ನ ತಂಗಿಯೊಂದಿಗೆ ಬಾಡಿಗೆ ಮನೆಯಲ್ಲಿ ವಾಸಿಸುತಿದ್ದಳು.

ಮಂಗಳವಾರ ರಾತ್ರಿ ಮನೆಯಲ್ಲಿ ಯಾರು ಇಲ್ಲದ ವೇಳೆಯಲ್ಲಿ
ಮನೆಯ ಅಡುಗೆ ಕೋಣೆಯಲ್ಲಿ ನೇಣು ಬಿಗಿದು ಕೊಂಡಿದ್ದಾರೆ. ನಿನ್ನೆಯಿಂದ ಫೋನ್ ಕರೆ ಸ್ವೀಕರಿಸದ ಹಿನ್ನಲೆಯಲ್ಲಿ ಅವರ ಸ್ನೇಹಿತೆಯರು ಇಂದು ಮನೆಯ ಬಳಿ ನೋಡಲು ಹೋದಾಗ ನೇಣು ಬಿಗಿದುಕೊಂಡಿರುವ ವಿಚಾರ ಗೊತ್ತಾಗಿದೆ.ತಕ್ಷಣ ಪೊಲೀಸರಿಗೆ ಮಾಹಿತಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *