Ripponpete | ಗ್ರಾಮೀಣ ಜನತೆಯ ಆರೋಗ್ಯ ಜಾಗೃತಿಗೆ ಶಿಬಿರಗಳು ಸಹಕಾರಿ – ಪಿಎಸ್‌ಐ ಪ್ರವೀಣ್

ಗ್ರಾಮೀಣ ಜನತೆಯ ಆರೋಗ್ಯ ಜಾಗೃತಿಗೆ ಶಿಬಿರಗಳ ಸಹಕಾರಿ – ಪಿಎಸ್‌ಐ ಪ್ರವೀಣ್
ರಿಪ್ಪನ್‌ಪೇಟೆ : ಗ್ರಾಮೀಣ ಜನರ ಆರೋಗ್ಯ ಜಾಗೃತಿಗೆ ಉಚಿತ ಆರೋಗ್ಯ ಶಿಬಿರಗಳು ಸಹಕಾರಿಯಾಗಿವೆ. ಬಡ ಜನತೆ ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ತೋರದೆ ತಜ್ಞ ವೈದ್ಯರು ಲಭ್ಯವಿದ್ದಾಗ ಶಿಬಿರದಲ್ಲಿ ಪಾಲ್ಗೊಂಡು ಆರೋಗ್ಯ ಶಿಬಿರದ ಸದುಪಯೋಗ ಪಡೆದುಕೊಳ್ಳಬೇಕು ಎಂದು ರಿಪ್ಪನ್‌ಪೇಟೆ ಪಿಎಸ್‌ಐ ಪ್ರವೀಣ್ ಎಸ್ ಪಿ ಹೇಳಿದರು.

ಪಟ್ಟಣದ ಭೂಪಾಳಂ ಚಂದ್ರಶೇಖರಯ್ಯ ಹಿಂದೂ ಮಹಾಸಭಾ ಪ್ರಾಂಗಣದಲ್ಲಿ ಕೆ ಎಸ್. ಹೆಗ್ಡೆ ಆಸ್ಪತ್ರೆ,ಮಂಗಳೂರು ಹಾಗೂ ಸಾಗರದ ನವಚೇತನ ವೇದಿಕೆ (ರಿ.) ಇವರ ಜಂಟಿ ಆಶ್ರಯದಲ್ಲಿ ಆಯೋಜಿಸಿದ್ದ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡಿ ಈ ಹಿಂದಿನ ದಿನಗಳಲ್ಲಿ ನಮ್ಮಲ್ಲಿವಾಂತಿ-ಬೇದಿ, ಟೈಫಾಯಿಡ್‌, ಕ್ಷಯ,  ಕಾಲಾರದಂತಹ ರೋಗಗಳು ಸಾಮಾನ್ಯವಾಗಿದ್ದವು.ಆದರೆ ಇತ್ತೀಚಿನ ದಿನಗಳಲ್ಲಿ ಪ್ರತಿಯೊಬ್ಬರಿಗೂ ಬಿಪಿ, ಶುಗರ್‌, ಹೃದ್ರೋಗ ಹಾಗೂ ಕಿಡ್ನಿ ಕಾಯಿಲೆಗಳು ಸಾಮಾನ್ಯವಾಗಿವೆ. ಇವು ಶ್ರೀಮಂತ ಖಾಯಿಲೆಗಳಾಗಿದ್ದು, ಬಡಜನರು ಆರ್ಥಿಕವಾಗಿ   ಭರಿಸಲು ಅಸಾಧ್ಯ. ಗ್ರಾಮೀಣ ಭಾಗದ ಹಾಗೂ ನಗರ ಪ್ರದೇಶದ ಬಡ ಜನರಿಗೆ ಇಂತಹ ಉಚಿತ ಶಿಬಿರಗಳ ಮೂಲಕವೇ ಚಿಕಿತ್ಸೆಗೊಳಪಡಿಸಿದಾಗ ಮಾತ್ರ ಅವರನ್ನು ಸಂಕಷ್ಟದಿಂದ ಪಾರು ಮಾಡಲು ಸಾಧ್ಯ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ನವಚೇತನ ವೇದಿಕೆಯ ಪ್ರಶಾಂತ್ ಕೆ ಜಿ ಶಿವಪ್ಪ ಗ್ರಾಮೀಣ ಭಾಗದ ಬಡವರ,ಸಾಮಾನ್ಯರ ಪಾಲಿಗೆ ಇಂತಹ ವೈದ್ಯಕೀಯ ಶಿಬಿರವು ಉಪಯುಕ್ತವಾಗಿದೆ. ಕೋವಿಡ್ ನಂತರ ಆರೋಗ್ಯ ಸೇವೆಯಲ್ಲಿ ಅನೇಕ ಬದಲಾವಣೆಗಳನ್ನು ಕಂಡಿದ್ದೇವೆ. ಮುಂದಿನ ದಿನಗಳಲ್ಲಿ ಇಂತಹ ಉಚಿತ ಆರೋಗ್ಯ ಶಿಬಿರವನ್ನು ಹೆಚ್ಚೆಚ್ಚು ಮಾಡುವ ಸದುದ್ದೇಶವಿದೆ. ಆರೋಗ್ಯದಲ್ಲಿ ಮುಂದೆ ಬರಬಹುದಾದ ಸವಾಲುಗಳಿಗೆ ಇಂದೇ ಸೂಕ್ತ ಪರಿಹಾರ ಕಂಡುಕೊಳ್ಳಲು ಇಂತಹ  ಶಿಬಿರ ಸಹಕಾರಿಯಾಗಿದೆ ಸಾವ೯ಜನಿಕರು ಸದುಪಯೋಗ ಪಡೆದುಕೊಳ್ಳಬೇಕು ಎಂದರು.
ಈ ಸಂಧರ್ಭದಲ್ಲಿ ಗ್ರಾಪಂ ಅಧ್ಯಕ್ಷೆ ಧನಲಕ್ಷ್ಮಿ ಗಂಗಾಧರ್ , ಉಪಾಧ್ಯಕ್ಷ ಸುಧೀಂದ್ರ ಪೂಜಾರಿ , ಮುಖಂಡರಾದ ಆರ್ ಟಿ ಗೋಪಾಲ್ ,ಆರ್ ಎನ್ ಮಂಜುನಾಥ್ ,ಗ್ರಾಪಂ ಸದಸ್ಯರಾದ ಆಸೀಫ಼್ ಭಾಷಾ , ನಿರೂಪ್ ಕುಮಾರ್ , ದೇವಸ್ಥಾನ ಸಮಿತಿ ಅಧ್ಯಕ್ಷ ಈಶ್ವರ್ ಶೆಟ್ಟಿ ,ಪ್ರಶಾಂತ್ ತಳಲೆ , ಪ್ರವೀಣ್ ಆಚಾರ್ , ಸಂದೇಶ್ ,ಶಿಬಿರ ಸಂಯೋಜಕ ಅಜಿತ್  ಹಾಗೂ ಜೈಸನ್ ಇದ್ದರು.

250 ಕ್ಕೂ ಹೆಚ್ಚು ರೋಗಿಗಳು ತಪಾಸಣೆಯಲ್ಲಿ ಭಾಗವಹಿಸಿದ್ದರು. ಉಚಿತವಾಗಿ ಔಷಧ ವಿತರಿಸಲಾಯಿತು.

ಈ ಶಿಬಿರದಲ್ಲಿ ಖ್ಯಾತ ವೈದ್ಯರುಗಳಾದ ಡಾ| ವಾಧೀಶ ಭಟ್ (ಕಿವಿ ಮೂಗು ಗಂಟಲು ತಜ್ಞರು) ಡಾ| ಶ್ರೀಧೀಶ್ ಕೆ. (ಎಲುಬು ಮತ್ತು ಕೀಲು ತಜ್ಞರು)ಡಾ। ನೇಹಾಲ್ ಕೆ. ಎಮ್ (ವೈದ್ಯಕೀಯ ತಜ್ಞರು)
ಡಾ| ಡಾನಿಯ ಹಮೀದ್ (ಮಕ್ಕಳ ತಜ್ಞರು) ಡಾ ಸಂಜಿತಾ ಕಾಮತ್ (ಶಸ್ತ್ರಚಿಕಿತ್ಸಾ ತಜ್ಞರು) ಇದ್ದರು.
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಚಾಲಕನ ನಿಯಂತ್ರಣ ತಪ್ಪಿ ಶಾಲಾ ಬಸ್ ಅಪಘಾತ – ತಪ್ಪಿದ ಭಾರಿ ಅನಾಹುತ

ಚಾಲಕನ ನಿಯಂತ್ರಣ ತಪ್ಪಿ ಶಾಲಾ ಬಸ್ ಅಪಘಾತ – ತಪ್ಪಿದ ಭಾರಿ ಅನಾಹುತ A school bus lost control…

4 hours ago

ಶಿಕ್ಷಕರ ಗೌರವದ ಹೆಸರಿನಲ್ಲಿ ರಾಜಕೀಯ ಬೇಡ; ಬಿಜೆಪಿ ವಿರುದ್ಧ ಕಾಂಗ್ರೆಸ್ ವಾಗ್ದಾಳಿ

ಶಿಕ್ಷಕರ ಗೌರವದ ಹೆಸರಿನಲ್ಲಿ ರಾಜಕೀಯ ಬೇಡ; ಬಿಜೆಪಿ ವಿರುದ್ಧ ಕಾಂಗ್ರೆಸ್ ವಾಗ್ದಾಳಿ Congress leaders in Sagar have hit…

5 hours ago

ಶಿಕ್ಷಣ ಸೇವೆಗೆ ಸಂದ ಪ್ರತಿಷ್ಠಿತ ಗೌರವ; ಅರಸಾಳಿನ ಸುಮಾ ಎಸ್.ಗೆ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕಿ ಪ್ರಶಸ್ತಿ

ಶಿಕ್ಷಣ ಸೇವೆಗೆ ಸಂದ ಪ್ರತಿಷ್ಠಿತ ಗೌರವ; ಅರಸಾಳಿನ ಸುಮಾ ಎಸ್.ಗೆ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕಿ ಪ್ರಶಸ್ತಿ Summa S.…

9 hours ago

ರಿಪ್ಪನ್‌ಪೇಟೆ ಸುತ್ತಮುತ್ತ ನಾಳೆ ಕರೆಂಟ್ ಇಲ್ಲ! ಯಾವೆಲ್ಲ ಪ್ರದೇಶಗಳಿಗೆ ವಿದ್ಯುತ್ ವ್ಯತ್ಯಯ? ಈ ಸುದ್ದಿ ನೋಡಿ

ರಿಪ್ಪನ್‌ಪೇಟೆ ಸುತ್ತಮುತ್ತ ನಾಳೆ ಕರೆಂಟ್ ಇಲ್ಲ! ಯಾವೆಲ್ಲ ಪ್ರದೇಶಗಳಿಗೆ ವಿದ್ಯುತ್ ವ್ಯತ್ಯಯ? ಈ ಸುದ್ದಿ ನೋಡಿ Power outage in…

13 hours ago

ಹಿರಿಯ ನಾಗರಿಕರಿಂದ ನಿವೃತ್ತ ಸರ್ಕಾರಿ ನೌಕರರಿಗೆ ವಿಶೇಷ ಸನ್ಮಾನ

ಹಿರಿಯ ನಾಗರಿಕರಿಂದ ನಿವೃತ್ತ ಸರ್ಕಾರಿ ನೌಕರರಿಗೆ ವಿಶೇಷ ಸನ್ಮಾನ Retired government employees were specially honoured by senior…

15 hours ago

ದೇಶದ ಅಭಿವೃದ್ಧಿಯಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಮಹತ್ವದ್ದು: ಶಾಸಕ ಬೇಳೂರು ಗೋಪಾಲಕೃಷ್ಣ

ದೇಶದ ಅಭಿವೃದ್ಧಿಯಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಮಹತ್ವದ್ದು: ಶಾಸಕ ಬೇಳೂರು ಗೋಪಾಲಕೃಷ್ಣ ಶಾಲೆ ಬಿಟ್ಟ ಮಕ್ಕಳನ್ನು ಮರಳಿ ಕರೆತಂದರೆ ₹10…

1 day ago