ಚಿಕ್ಕಜೇನಿ ಸರ್ಕಾರಿ ಪ್ರೌಢಶಾಲೆ ವಿದ್ಯಾರ್ಥಿಯ ಪರಿಸರ ಸ್ನೇಹಿ ಸೋಲಾರ್ ಹುಲ್ಲು ಕಟಾವ್ ಯಂತ್ರ ರಾಷ್ಟ್ರ ಮಟ್ಟಕ್ಕೆ ಆಯ್ಕೆ
ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಚಿಕ್ಕಜೇನಿ ಸರಕಾರಿ ಪ್ರೌಡಶಾಲೆಯ 9ನೇ ತರಗತಿಯ ವಿದ್ಯಾರ್ಥಿ ಅಭಿಷೇಕ್ ಸಿದ್ಧಪಡಿಸಿರುವ ಪರಿಸರ ಸ್ನೇಹಿ ಸೌರ ಆಧಾರಿತ ಹುಲ್ಲು ಕಟಾವ್ ಯಂತ್ರ ರಾಷ್ಟ್ರಮಟ್ಟದ ವಿಜ್ಞಾನ ವಸ್ತು ಪ್ರದರ್ಶನಕ್ಕೆ ಆಯ್ಕೆಯಾಗಿದೆ.
ಬುಧವಾರ ದೊಡ್ಡಬಳ್ಳಾಪುರದಲ್ಲಿ ನಡೆದ ರಾಜ್ಯಮಟ್ಟದ ವಿಜ್ಞಾನ ವಸ್ತು ಪ್ರದರ್ಶನದಲ್ಲಿ ಅಭಿಷೇಕ್ ಸಿದ್ದಪಡಿಸಿರುವ ಸೋಲಾರ್ ಹುಲ್ಲು ಕಟಾವ್ ಯಂತ್ರ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದೆ.
ಜನವರಿ 27 ರಂದು ಹೈದರಾಬಾದ್ ನ ವಿಜಯವಾಡದಲ್ಲಿ ನಡೆಯಲಿರುವ ರಾಷ್ಟ್ರಮಟ್ಟದ ವಿಜ್ಞಾನ ವಸ್ತು ಪ್ರದರ್ಶನದಲ್ಲಿ ಅಭಿಷೇಕ್ ಕರ್ನಾಟಕವನ್ನು ಪ್ರತಿನಿಧಿಸಲಿದ್ದಾರೆ.
ಮನೆಯಲ್ಲಿಯೇ ಲಭ್ಯವಿದ್ದ ಸೋಲಾರ್ ಪ್ಲೇಟ್,ಕಟ್ ಪೀಸ್ ಕಬ್ಬಿಣದ ಸಹಾಯದಿಂದ ಒಂದು ಸಾವಿರ ರೂ. ಖರ್ಚಿನಲ್ಲಿ ಈ ಯಂತ್ರವನ್ನು ಸಿದ್ಧಪಡಿಸಲಾಗಿದ್ದು,ವಿಜ್ಞಾನದ ಶಿಕ್ಷಕ ಮಹೇಶ್ ವಿದ್ಯಾರ್ಥಿ ಅಭಿಷೇಕ್ ಗೆ ಮಾರ್ಗದರ್ಶನ ನೀಡಿದ್ದಾರೆ.ಮನೆಯ ಸುತ್ತಮುತ್ತ ಬೆಳೆದಂತಹ ಹುಲ್ಲುಗಳನ್ನು ಕಡಿಮೆ ವೆಚ್ಚದ ಈ ಪರಿಸರ ಸ್ನೇಹಿ ಸೋಲಾರ್ ಯಂತ್ರದ ಮೂಲಕ ಕಟಾವ್ ಕಾರ್ಯಕ್ಕೆ ಬಳಸಬಹುದಾಗಿದೆ.
ಕಾರಕ್ಕಿ ನಿವಾಸಿಗಳಾದ ಸತೀಶ್ ಹಾಗೂ ಆಶಾ ದಂಪತಿಗಳ ಪುತ್ರನಾದ ಅಭಿಷೇಕ್ 9ನೇ ತರಗತಿಯಲ್ಲಿ ವ್ಯಾಸಾಂಗ ಮಾಡುತಿದ್ದಾನೆ.
ಗ್ರಾಮೀಣ ಭಾಗದ ಸರ್ಕಾರಿ ಶಾಲೆಯ ಪ್ರತಿಭೆ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿರುವುದು ಹೆಮ್ಮೆಯ ಸಂಗತಿಯಾಗಿದ್ದು ಇವರಿಗೆ ಪೋಸ್ಟ್ ಮ್ಯಾನ್ ನ್ಯೂಸ್ ಬಳಗವು ಅಭಿನಂದನೆಗಳನ್ನು ಸಲ್ಲಿಸುತ್ತದೆ.