Ripponpete | ಪಡಿತರ ದಾಸ್ತಾನುವಿನಲ್ಲಿ ಅವ್ಯವಹಾರ – ನ್ಯಾಯಬೆಲೆ ಅಂಗಡಿಯ ಪರವಾನಗಿ ಅಮಾನತ್ತುಗೊಳಿಸಿ ಆದೇಶ

Ripponpete | ಪಡಿತರ ದಾಸ್ತಾನುವಿನಲ್ಲಿ ಅವ್ಯವಹಾರ – ಅಂಗಡಿಯ ಪರವಾನಗಿ ಅಮಾನತ್ತುಗೊಳಿಸಿ ಆದೇಶ

ರಿಪ್ಪನ್‌ಪೇಟೆ : ಇಲ್ಲಿನ ಗ್ರಾಪಂ ಹಿಂಭಾಗದ ವಿಎಸ್ ಎಸ್ ಎನ್ ನ್ಯಾಯಬೆಲೆ ಅಂಗಡಿಯಲ್ಲಿ ಪಡಿತರ ದಾಸ್ತಾನುವಿನಲ್ಲಿ ಲೋಪ ಕಂಡು ಬಂದಿರುವ ಹಿನ್ನಲೆಯಲ್ಲಿ ಪ್ರಾಧಿಕಾರ ನಂ: 03/2017-18 ನ್ನು ವಿಚಾರಣೆಗೆ ಕಾಯ್ದಿರಿಸಿ, ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತ್ತುಪಡಿಸಿ ಜಿಲ್ಲಾ ಆಹಾರ ಉಪ ನಿರ್ದೇಶಕ ಆರ್ ಅವಿನ್ ಆದೇಶಿಸಿದ್ದಾರೆ.

ದಿನಾಂಕ 16-12-2023 ರಂದು ಜಿಲ್ಲಾ ಆಹಾರ ಉಪ ನಿರ್ದೇಶಕರು
ನ್ಯಾಯಬೆಲೆ ಅಂಗಡಿಗೆ ಖುದ್ದು ಭೇಟಿ ನೀಡಿ, ನ್ಯಾಯಬೆಲೆ ಅಂಗಡಿಯ ದಾಸ್ತಾನಿನ ಪರಿಶೀಲನೆ ನಡೆಸಲಾಗಿ ಭೌತಿಕ ದಾಸ್ತಾನಿಗೂ ಆನ್ ಲೈನ್ ದಾಸ್ತಾನಿಗೂ ವ್ಯತ್ಯಾಸವಿರುವುದು ಕಂಡುಬಂದಿರುತ್ತದೆ , ದರ ದಾಸ್ತಾನು ಫಲಕದಲ್ಲಿ ದಾಸ್ತಾನು ವಿವರ ನಮೂದಿಸಿರುವುದಿಲ್ಲ , ನ್ಯಾಯಬೆಲೆ ಅಂಗಡಿಯಲ್ಲಿ ಜಾಗೃತಿ ಸಮಿತಿ ಸದಸ್ಯರ ಪಟ್ಟಿ ಪ್ರದರ್ಶಿಸಿರುವುದಿಲ್ಲ, ನ್ಯಾಯಬೆಲೆ ಅಂಗಡಿಯಲ್ಲಿ ತನಿಖಾ ಪುಸ್ತಕ ಇಲ್ಲದೇ ಇರುವಂತಹ ನ್ಯೂನತೆಗಳು ಕಂಡುಬಂದಿರುತ್ತವೆ.

ವಿತರಣಾ ಪದ್ಧತಿ (ನಿಯಂತ್ರಣಾ) ಆದೇಶ -2016 ಕ್ಲಾಸ್ 4(3) ರಡಿ ಪಡೆದ ಪ್ರಾಧಿಕಾರ ಸಾಮಾನ್ಯ ಷರತ್ತು ಸಂಖ್ಯೆ: 5 7, 8, ಮತ್ತು 9, ಹಾಗೂ ಕ್ಲಾಸ್ 14, 16 ಗಳನ್ನು ಸ್ಪಷ್ಟವಾಗಿ ಉಲ್ಲಂಘಿಸಿರುವುದು ಮೇಲ್ನೋಟಕ್ಕೆ ಸ್ಪಷ್ಟವಾಗಿ ಕಂಡು ಬಂದಿರುವುದರಿಂದ ನಿಯಮಾನುಸಾರ ಸದರಿ ನ್ಯಾಯಬೆಲೆ ಅಂಗಡಿ ಪ್ರಾಧಿಕಾರವನ್ನು ಅಮಾನತ್ತುಪಡಿಸಿದ್ದಾರೆ.

ನ್ಯಾಯಬೆಲೆ ಲೈಸೆನ್ಸ್ ಅಮಾನತಾಗಿರುವ ಹಿನ್ನಲೆಯಲ್ಲಿ ಪಡಿತರ ಚೀಟಿದಾರರ ಹಿತದೃಷ್ಟಿಯಿಂದ ಸಮೀಪದ ನ್ಯಾಯಬೆಲೆ ಅಂಗಡಿಗೆ ಕೂಡಲೇ ಪರ್ಯಾಯ ವ್ಯವಸ್ಥೆ ಮಾಡಿ ವರದಿ ಸಲ್ಲಿಸಲು ತಹಶೀಲ್ದಾರ್‌, ಹೊಸನಗರ ತಾಲ್ಲೂಕು ಇವರಿಗೆ ಸೂಚಿಸಿದೆ.
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

RIPPONPETE | ಶಿಕ್ಷಣ ಕ್ಷೇತ್ರಕ್ಕೆ ಹೊಸ ಕೊಡುಗೆ – ಕಣಬಂದೂರಿನಲ್ಲಿ ಶ್ರೀ ಶಿವ ರಾಮಕೃಷ್ಣ ಸ್ಕೂಲ್ ನೂತನ ಕಟ್ಟಡಕ್ಕೆ ಅಡಿಗಲ್ಲು

RIPPONPETE | ಶಿಕ್ಷಣ ಕ್ಷೇತ್ರಕ್ಕೆ ಹೊಸ ಕೊಡುಗೆ - ಕಣಬಂದೂರಿನಲ್ಲಿ ಶ್ರೀ ಶಿವ ರಾಮಕೃಷ್ಣ ಸ್ಕೂಲ್ ನೂತನ ಕಟ್ಟಡಕ್ಕೆ ಅಡಿಗಲ್ಲು…

41 minutes ago

ಕಸ್ತೂರಿರಂಗನ್ ವರದಿ ವಿರೋಧಿ ಹೋರಾಟದಲ್ಲಿ ಬಿಜೆಪಿ ವಿರುದ್ಧ ಕಾಂಗ್ರೆಸ್ ನಾಯಕರ ತೀವ್ರ ವಾಗ್ದಾಳಿ

ಕಸ್ತೂರಿರಂಗನ್ ವರದಿ ವಿರೋಧಿ ಹೋರಾಟದಲ್ಲಿ ಬಿಜೆಪಿ ವಿರುದ್ಧ ಕಾಂಗ್ರೆಸ್ ನಾಯಕರ ತೀವ್ರ ವಾಗ್ದಾಳಿ Former Education Minister Kimmane Ratnakar…

3 hours ago

ಪಟಗುಪ್ಪ ಸೇತುವೆ ಬಳಿಯ ಹಿನ್ನೀರಿನಲ್ಲಿ ಅನಾಮಧೇಯ ವ್ಯಕ್ತಿಯ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆ

ಪಟಗುಪ್ಪ ಸೇತುವೆ ಬಳಿಯ ಹಿನ್ನೀರಿನಲ್ಲಿ ಅನಾಮಧೇಯ ವ್ಯಕ್ತಿಯ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆ An unidentified man’s partially decomposed…

3 hours ago

ಬಸ್‌-ಬೈಕ್ ಭೀಕರ ಅಪಘಾತ; 27 ವರ್ಷದ ಯುವಕ ಸ್ಥಳದಲ್ಲೇ ಸಾವು

ಬಸ್‌-ಬೈಕ್ ಭೀಕರ ಅಪಘಾತ; 27 ವರ್ಷದ ಮೆಕ್ಯಾನಿಕ್ ಸ್ಥಳದಲ್ಲೇ ಸಾವು A 27-year-old mechanic was killed in a…

6 hours ago

ಅಕ್ರಮ ವಿದ್ಯುತ್‌ ಬೇಲಿಗೆ ಸಿಲುಕಿ ಮೂರು ವರ್ಷದ ಕರಡಿ ಸಾವು – ತೋಟದ ಮಾಲೀಕನ ಬಂಧನ

ಅಕ್ರಮ ವಿದ್ಯುತ್‌ ಬೇಲಿಗೆ ಸಿಲುಕಿ ಮೂರು ವರ್ಷದ ಕರಡಿ ಸಾವು - ತೋಟದ ಮಾಲೀಕನ ಬಂಧನ A three-year-old male…

6 hours ago

ಶಿವಮೊಗ್ಗದಲ್ಲಿ ರೌಡಿಶೀಟರ್ ‘ಕುಳ್ಳಿ ಕಿರಣ್’ ಬರ್ಬರ ಹತ್ಯೆ; ಪ್ರಮುಖ ಆರೋಪಿ ಉಮೇಶ್ ಮೇಲೆ ಪೊಲೀಸ್ ಫೈರಿಂಗ್

ಶಿವಮೊಗ್ಗದಲ್ಲಿ ರೌಡಿಶೀಟರ್ ‘ಕುಳ್ಳಿ ಕಿರಣ್’ ಬರ್ಬರ ಹತ್ಯೆ; ಪ್ರಮುಖ ಆರೋಪಿ ಉಮೇಶ್ ಮೇಲೆ ಪೊಲೀಸ್ ಫೈರಿಂಗ್ Shivamogga rowdy sheeter…

10 hours ago