ಬಾಳೂರು ನ್ಯಾಯಬೆಲೆ ಅಂಗಡಿಗೆ ಜಿಲ್ಲಾ ಆಹಾರ ಇಲಾಖೆ ಆಧಿಕಾರಿ ದಿಡೀರ್ ಭೇಟಿ – ಪರಿಶೀಲನೆ
ರಿಪ್ಪನ್‌ಪೇಟೆ;-ಬಾಳೂರು ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಹಾಲುಗುಡ್ಡೆ(ಬಾಳೂರು) ನ್ಯಾಯಬೆಲೆ ಅಂಗಡಿಯಲ್ಲಿ ಸರ್ಕಾರದ ಪಡಿತರ ವಿತರಣೆಯಲ್ಲಿ ದಲಿತ ಮಹಿಳಾ ಫಲಾನುಭವಿಗೆ ಅನ್ನ ಅಂತ್ಯೋದಯ ಅಕ್ಕಿ ವಿತರಣೆಯಲ್ಲಿ ವಂಚನೆ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಇಂದು ಜಿಲ್ಲಾ ಆಹಾರ ಇಲಾಖೆಯ ಉಪನಿರ್ದೇಶಕ ಅವಿನ್ ಅರ್ ದಿಡೀರ್ ಭೇಟಿ ನೀಡಿ ಪರಿಶೀಲನೆ ನಡೆಸುವ ಮೂಲಕ ವಂಚಿತ ದಲಿತ ಮಹಿಳೆಗೆ ಸೂಕ್ತ ಪರಿಹಾರ ಕೊಡಿಸಿ ನ್ಯಾಯಬೆಲೆ ಅಂಗಡಿಯ ವಿರುದ್ದ ಕಾನೂನು ಕ್ರಮ ಕೈಗೊಳ್ಳುವುದಾಗಿ ವಿವರಿಸಿದರು.
ರಿಪ್ಪನ್‌ಪೇಟೆಯ ಬರುವೆ ಗ್ರಾಮದ ಮಾತಾ ಮಹಿಳಾ ವಿವಿದ್ದೋದ್ದೇಶ ಸಂಘದ ನ್ಯಾಯಬೆಲೆ ಅಂಗಡಿಗೆ ಭೇಟಿ ನೀಡಿ ಮಾದ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿ ಬಾಳೂರು ಗ್ರಾಮದ ಹಾಲುಗುಡ್ಡೆ ನ್ಯಾಯಬೆಲೆ ಅಂಗಡಿಯಲ್ಲಿ ಸರ್ಕರದ ಅನ್ನ ಅಂತ್ಯೋದಯ ಫಲಾನುಭವಿ ದಲಿತ ಮಹಿಳಾ ಪಡಿತರದಾರರಿಗೆ ಅಕ್ಕಿ ವಿತರಣೆಯಲ್ಲಿ ಸಾಕಷ್ಟು ವಂಚನೆ ನಡೆಸಿರುವುದರ ಬಗ್ಗೆ ಈಗಾಗಲೇ ನಮ್ಮ ಇಲಾಖೆಯ ತಾಲ್ಲೂಕ್ ಆಧಿಕಾರಿಗಳು ವರದಿ ನೀಡಿದ್ದರು ವರದಿಯನ್ನಾದರಿಸಿ ಇಂದು ಅಂಗಡಿಗೆ ಭೇಟಿ ನೀಡಿ ಪರಿಶೀಲನೆ ನಡೆಸುವುದರೊಂದಿಗೆ ಮಹಿಳೆಗೆ ಪರಿಹಾರವನ್ನು ಕೊಡಿಸಲಾಗಿದೆ.ಹಾಗೆಯೇ ರಿಪ್ಪನ್‌ಪೇಟೆ ಕೃಷಿ ಸೇವಾ ಸಹಕಾರ ಸಂಘದ ನ್ಯಾಯಬೆಲೆ ಅಂಗಡಿಯ ಬಗ್ಗೆ ಸಾಕಷ್ಟು ಸಾರ್ವಜನಿಕರ ದೂರು ಬಂದಿದ್ದು ಆದನ್ನು ಪರಿಶೀಲನೆ ನಡೆಸಲಾಗಿ ಸುಮಾರು 85 ಕ್ವಿಂಟಾಲ್‌ಗೂ ಆಧಿಕ ಅಕ್ಕಿ ದಾಸ್ತಾನು ಮಳಿಗೆಯಲ್ಲಿ ದಾಸ್ತಾನು ಕಡಿಮೆ ತೋರಿಸುತ್ತಿದ್ದು ಏನಾಗಿದೆ ಎಂಬ ಕುರಿತು ಅಡಳಿತ ಮಂಡಳಿಗೆ ಕಾರಣ ಕೇಳಿ ನೋಟಿಸ್ ನೀಡಲಾಗುವುದು ಎಂದರು.
ಮಾದ್ಯಮದವರು ಪಡಿತರದಾರರಿಗೆ ತೊಂದರೆಯಾಗುತ್ತದೆಂಬ ಪ್ರಶ್ನೆಗೆ ಉತ್ತರಿಸಿ ನಾವು ಯಾವುದೇ ಪಡಿತರದಾರರಿಗೂ ಅನ್ಯಾಯವಾಗದಂತೆ ಅಕ್ಕಪಕ್ಕದ ನ್ಯಾಯಬೆಲೆ ಅಂಗಡಿಯಲ್ಲಿ ಪಡಿತರ ಪಡೆಯಲು ಅವಕಾಶ ನೀಡಲಾಗಿದ್ದು ಫಲಾನುಭವಿಗಳು ಪಡಿತರದಿಂದ ವಂಚಿತರಾಗದಂತೆ ಕ್ರಮ ವಹಿಸಲಾಗಿದೆ ಎಂದು ಜಿಲ್ಲಾ ಅಹಾರ ಇಲಾಖೆಯ ಉಪನಿರ್ದೇಶಕ ಅವಿನ್ ಆರ್. ತಿಳಿಸಿದರು.
ಇದೇ ಸಂದರ್ಭದಲ್ಲಿ ತಾಲ್ಲೂಕ್ ಅಹಾರ ಇಲಾಖೆಯ ಸಹಾಯಕ ನಿರೀಕ್ಷಕ ನಾಗರಾಜ್ ಭಟ್ ಇಲ್ಲಿನ ರಿಪ್ಪನ್‌ಪೇಟೆಯ ಕೃಷಿ ಸೇವಾ ಸಹಕಾರ ಸಂಘದ ನ್ಯಾಯಬೆಲೆ ಅಂಗಡಿಗೆ ಭೇಟಿ ನೀಡಿ ಪರಿಶೀಲನೆ ನಡೆಸಲು ಬಂದರೆ ಯಾವಾಗಲು ಬಾಗಿಲು ಹಾಕಿಕೊಂಡು ಅಲ್ಲಿದ್ದೇನೆ ಇಲ್ಲಿದ್ದೇನೆ ಎಂದು ಸಬೂಬು ಹೇಳಿ ಜಾರಿಕೊಳ್ಳುತ್ತಿದ್ದಾರೆಂದು ವಿವರಿಸಿದರು.
ರಫ಼ಿ ರಿಪ್ಪನ್ ಪೇಟೆನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್