Ripponpete | ಬಾಳೂರು ಸೇತುವೆ ಬಳಿ ಕಾರು ಡಿಕ್ಕಿಯಾಗಿ ಮಹಿಳೆ ಸಾವು
ರಿಪ್ಪನ್ಪೇಟೆ : ಇಲ್ಲಿನ ಬಾಳೂರು ಗ್ರಾಮದ ಸೇತುವೆ ಬಳಿ ಕಾರು ಡಿಕ್ಕಿಯಾಗಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ನಡೆದಿದೆ.
ಶಿಕಾರಿಪುರ ತಾಲೂಕಿನ ಸುಣ್ಣದಕೊಪ್ಪ ನಿವಾಸಿ ನಾಗಮ್ಮ(46) ಮೃತಪಟ್ಟ ದುರ್ಧೈವಿಯಾಗಿದ್ದಾರೆ.ಇವರು ಬಾಳೂರು ಸೇತುವೆ ಬಳಿಯ ಕ್ಯಾಂಪ್ ನಲ್ಲಿ ವಾಸಿಸುತಿದ್ದರು.
ಸೇತುವೆ ಬಳಿಯಲ್ಲಿ ಅಪಘಾತದಲ್ಲಿ ಗಾಯಗೊಂಡಿದ್ದ ಎಮ್ಮೆಗೆ ನೀರುಣಿಸುತಿದ್ದ ಮಹಿಳೆಗೆ ಸಾಗರ ಕಡೆಯಿಂದ ರಿಪ್ಪನ್ಪೇಟೆ ಕಡೆಗೆ ಬರುತಿದ್ದ ಕಾರು ಏಕಾಏಕಿ ಡಿಕ್ಕಿಯಾಗಿದೆ.
ಘಟನೆಯ ಹಿನ್ನಲೆ :
ಬಾಳೂರು ಗ್ರಾಮದ ಸೇತುವೆ ಬಳಿ ಅಪರಿಚಿತ ವಾಹನವೊಂದು ರಸ್ತೆಯಲ್ಲಿದ್ದ ಎಮ್ಮೆಗೆ ಡಿಕ್ಕಿಯಾಗಿತ್ತು ಈ ಹಿನ್ನಲೆಯಲ್ಲಿ ಗಾಯಗೊಂಡಿದ್ದ ಎಮ್ಮೆಗೆ ನೀರು ಕುಡಿಸಲು ಬಂದ ಮಹಿಳೆ ಹಿಂದಿರುಗುವಾಗ ಮತ್ತೊಂದು ಕಾರು ಬಂದು ಮಹಿಳೆಗೆ ಡಿಕ್ಕಿಯಾಗಿದೆ.
ತಲೆಗೆ ಗಂಭೀರ ಗಾಯಗೊಂಡಿದ್ದ ಮಹಿಳೆಯನ್ನು ಸ್ಥಳೀಯರು ರಿಪ್ಪನ್ಪೇಟೆ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆತಂದು ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗಕ್ಕೆ 108 ನಲ್ಲಿ ಕಳಿಸಿಕೊಡಲಾಗಿತ್ತು. ಆದರೆ ಮಾರ್ಗ ಮಧ್ಯದಲ್ಲಿಯೇ ಮಹಿಳೆ ಮೃತಪಟ್ಟಿದ್ದಾರೆ.
ಸ್ಥಳಕ್ಕೆ ಪಿಎಸ್ಐ ಪ್ರವೀಣ್ ಎಸ್ ಪಿ ಹಾಗೂ ಸಿಬ್ಬಂದಿಗಳು ತೆರಳಿ ಮುಂದಿನ ಕ್ರಮ ಕೈಗೊಂಡಿದ್ದಾರೆ.
ರಿಪ್ಪನ್ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್