Ripponpete | ಶಾಂತಿ ಮತ್ತು ನೆಮ್ಮದಿಯ ಮೂಲಕ ಪ್ರತಿಯೊಬ್ಬರು ಉತ್ತಮ ಬದುಕು ಕಟ್ಟಿಕೊಳ್ಳೋಣ :ರೆ. ಫಾ. ಬಿನೋಯ್

ರಿಪ್ಪನ್ ಪೇಟೆಯಲ್ಲಿ ಕ್ರೈಸ್ತ ಬಾಂಧವರಿಂದ ಕ್ರಿಸ್ಮಸ್ ಸಡಗರ ಸಂಭ್ರಮದಿಂದ ಆಚರಣೆ.


ಶಾಂತಿ ಮತ್ತು ನೆಮ್ಮದಿಯ ಮೂಲಕ ಪ್ರತಿಯೊಬ್ಬರು ಬದುಕು ಕಟ್ಟಿಕೊಳ್ಳೋಣ :ರೆ. ಫಾ. ಬಿನೋಯ್.

ರಿಪ್ಪನ್ ಪೇಟೆ : ಆಧುನಿಕ ತಂತ್ರಜ್ಞಾನದ ಅಡಿಯಲ್ಲಿ ಒತ್ತಡದ ಜೀವನವನ್ನು ಸಾಗಿಸುತ್ತಿರುವ ಪ್ರತಿಯೊಬ್ಬರಿಗೂ ಶಾಂತಿ ಮತ್ತು ನೆಮ್ಮದಿಯ ಬದುಕು ಅತ್ಯವಶ್ಯಕವಾಗಿದೆ. ಮಾನವ ಜಗತ್ತಿನಲ್ಲಿ ಶಾಂತಿ ಮತ್ತು ನೆಮ್ಮದಿಯ ಮೂಲಕ ಬದುಕು ಕಟ್ಟಿಕೊಳ್ಳೋಣ ಎಂದು ರಿಪ್ಪನ್ ಪೇಟೆ ಗುಡ್ ಶಫರ್ಡ್ ಚರ್ಚಿನ ಧರ್ಮಗುರು   ರೆ. ಫಾ. ಬಿನೋಯ್ ಹೇಳಿದರು.

ಪಟ್ಟಣದ ಗುಡ್ ಶಫರ್ಡ್ ಚರ್ಚಿನಲ್ಲಿ  ಕ್ರಿಸ್ಮಸ್ ಹಬ್ಬದ ಹಿನ್ನೆಲೆಯಲ್ಲಿ   ಶನಿವಾರ ತಡರಾತ್ರಿ ಆಯೋಜಿಸಲಾಗಿದ್ದ ಧಾರ್ಮಿಕ ಕಾರ್ಯಕ್ರಮದ ಸಾನಿಧ್ಯವಹಿಸಿ ಆಶೀರ್ವಚನ ನೀಡಿದ ಅವರು ಕ್ರಿಸ್ಮಸ್ ಹಬ್ಬವು ಕ್ರೈಸ್ತ ಬಾಂಧವರ ಪವಿತ್ರ ಹಬ್ಬವಾಗಿದೆ , ಈ ಹಬ್ಬವು ಜಗತ್ತು ಕಂಡ  ದಾರ್ಶನಿಕ ಪ್ರವಾದಿ ಶಾಂತಿ ನೆಮ್ಮದಿಯಿಂದ  ಸೇವೆಯ ಮೂಲಕ  ಬದುಕು ಕಟ್ಟಿಕೊಳ್ಳಬಹುದು ಎಂದು ಸಾರಿದ  ಯೇಸು ಕ್ರಿಸ್ತನ ಹುಟ್ಟುಹಬ್ಬ ವಾಗಿದೆ. ಪ್ರತಿಯೊಬ್ಬ ಕ್ರೈಸ್ತ ಬಾಂಧವರು ಜಾತಿ ಮತ ಪಂಥಗಳ ಭೇದವನ್ನು ಮರೆತು ಸದ್ಭಾವನೆಯಿಂದ ಎಲ್ಲರೂ ಬೆರೆತು ಉತ್ತಮ ಪ್ರಜೆಗಳಾಗಿ    ಸಮಾಜ ಸೇವೆಯಲ್ಲಿ ತೊಡಗಿಕೊಳ್ಳಬೇಕು. ಸಮಾಜದಲ್ಲಿನ ಪ್ರತಿಯೊಬ್ಬರಿಗೂ ಪ್ರೀತಿ ವಿಶ್ವಾಸ ಹಾಗೂ ನಂಬಿಕೆಯ ಮೂಲಕ ಗೌರವವನ್ನು ನೀಡುವುದು ಪ್ರತಿಯೊಬ್ಬ ಕ್ರೈಸ್ತರ ಕರ್ತವ್ಯವಾಗಿರಬೇಕು.


ಮಾನವ ಸಂಕುಲ, ಪ್ರಾಣಿ ಸಂಕುಲ, ಹಾಗೂ ಪರಿಸರದ ರಕ್ಷಣೆಗೆ  ಎಲ್ಲರೂ ಸಹಕಾರ ನೀಡುವುದರ ಮೂಲಕ ಸಮಾಜದ ರಕ್ಷಣೆಗೆ ಮುಂದಾದಾಗ ಮಾತ್ರ ರಾಷ್ಟ್ರದ ಅಭಿವೃದ್ಧಿ ಸಾಧ್ಯ. ಹಾಗೆಯೇ ಶಾಂತಿ ಸಂದೇಶ ಮತ್ತು ಸೇವೆಯ ಮೂಲಕ  ಏಸುಕ್ರಿಸ್ತರ ಶುಭ ಸಂದೇಶಗಳನ್ನು  ಪ್ರತಿಯೊಬ್ಬ ಕ್ರೈಸ್ತ ಬಾಂಧವರು ಅನುಸರಿಸುವುದರ ಮೂಲಕ ಜಗತ್ತಿಗೆ ಮಾದರಿಯಾಗಬೇಕು ಎಂದರು.

ಕ್ರಿಸ್ಮಸ್ ಹಬ್ಬದ ಪ್ರಯುಕ್ತ ಆಯೋಜಿಸಲಾಗಿದ್ದ ಈ ಧಾರ್ಮಿಕ ಕಾರ್ಯಕ್ರಮದಲ್ಲಿ ರಾಜ್ಯದ ಹಾಗು ಜಿಲ್ಲೆಯ ವಿವಿಧಡೆಗಳಿಂದ ಆಗಮಿಸಿದ ಕ್ರೈಸ್ತ ಬಾಂಧವರ ಜೊತೆಯಲ್ಲಿ ಹಿಂದೂ ಹಾಗೂ ಮುಸ್ಲಿಂ ಬಂಧುಗಳು ಸಹ ಭಾಗಿಯಾಗಿ  ಕ್ರಿಸ್ಮಸ್ ಕೇಕ್ ಅನ್ನು ಹಂಚುವುದರ ಮೂಲಕ ಕ್ರಿಸ್ಮಸ್ ಹಬ್ಬದ ಶುಭಾಶಯಗಳು ಕೋರಿದರು.

ಗುಡ್ ಶಫರ್ಡ್ ಚರ್ಚಿನ ವತಿಯಿಂದ  ಕ್ರಿಸ್ಮಸ್ ಹಬ್ಬದ ಆಚರಣೆಯ ಸಂಭ್ರಮದಲ್ಲಿ ಭಾಗವಹಿಸಿದ ಎಲ್ಲಾ ಭಕ್ತಾದಿಗಳಿಗೆ ಕೇಕ್ ಹಂಚುವುದರ  ಮೂಲಕ ಶುಭ ಕೋರಿದರು.
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಚಾಲಕನ ನಿಯಂತ್ರಣ ತಪ್ಪಿ ಶಾಲಾ ಬಸ್ ಅಪಘಾತ – ತಪ್ಪಿದ ಭಾರಿ ಅನಾಹುತ

ಚಾಲಕನ ನಿಯಂತ್ರಣ ತಪ್ಪಿ ಶಾಲಾ ಬಸ್ ಅಪಘಾತ – ತಪ್ಪಿದ ಭಾರಿ ಅನಾಹುತ A school bus lost control…

1 hour ago

ಶಿಕ್ಷಕರ ಗೌರವದ ಹೆಸರಿನಲ್ಲಿ ರಾಜಕೀಯ ಬೇಡ; ಬಿಜೆಪಿ ವಿರುದ್ಧ ಕಾಂಗ್ರೆಸ್ ವಾಗ್ದಾಳಿ

ಶಿಕ್ಷಕರ ಗೌರವದ ಹೆಸರಿನಲ್ಲಿ ರಾಜಕೀಯ ಬೇಡ; ಬಿಜೆಪಿ ವಿರುದ್ಧ ಕಾಂಗ್ರೆಸ್ ವಾಗ್ದಾಳಿ Congress leaders in Sagar have hit…

2 hours ago

ಶಿಕ್ಷಣ ಸೇವೆಗೆ ಸಂದ ಪ್ರತಿಷ್ಠಿತ ಗೌರವ; ಅರಸಾಳಿನ ಸುಮಾ ಎಸ್.ಗೆ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕಿ ಪ್ರಶಸ್ತಿ

ಶಿಕ್ಷಣ ಸೇವೆಗೆ ಸಂದ ಪ್ರತಿಷ್ಠಿತ ಗೌರವ; ಅರಸಾಳಿನ ಸುಮಾ ಎಸ್.ಗೆ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕಿ ಪ್ರಶಸ್ತಿ Summa S.…

6 hours ago

ರಿಪ್ಪನ್‌ಪೇಟೆ ಸುತ್ತಮುತ್ತ ನಾಳೆ ಕರೆಂಟ್ ಇಲ್ಲ! ಯಾವೆಲ್ಲ ಪ್ರದೇಶಗಳಿಗೆ ವಿದ್ಯುತ್ ವ್ಯತ್ಯಯ? ಈ ಸುದ್ದಿ ನೋಡಿ

ರಿಪ್ಪನ್‌ಪೇಟೆ ಸುತ್ತಮುತ್ತ ನಾಳೆ ಕರೆಂಟ್ ಇಲ್ಲ! ಯಾವೆಲ್ಲ ಪ್ರದೇಶಗಳಿಗೆ ವಿದ್ಯುತ್ ವ್ಯತ್ಯಯ? ಈ ಸುದ್ದಿ ನೋಡಿ Power outage in…

10 hours ago

ಹಿರಿಯ ನಾಗರಿಕರಿಂದ ನಿವೃತ್ತ ಸರ್ಕಾರಿ ನೌಕರರಿಗೆ ವಿಶೇಷ ಸನ್ಮಾನ

ಹಿರಿಯ ನಾಗರಿಕರಿಂದ ನಿವೃತ್ತ ಸರ್ಕಾರಿ ನೌಕರರಿಗೆ ವಿಶೇಷ ಸನ್ಮಾನ Retired government employees were specially honoured by senior…

13 hours ago

ದೇಶದ ಅಭಿವೃದ್ಧಿಯಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಮಹತ್ವದ್ದು: ಶಾಸಕ ಬೇಳೂರು ಗೋಪಾಲಕೃಷ್ಣ

ದೇಶದ ಅಭಿವೃದ್ಧಿಯಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಮಹತ್ವದ್ದು: ಶಾಸಕ ಬೇಳೂರು ಗೋಪಾಲಕೃಷ್ಣ ಶಾಲೆ ಬಿಟ್ಟ ಮಕ್ಕಳನ್ನು ಮರಳಿ ಕರೆತಂದರೆ ₹10…

1 day ago