Ripponpete | ಶಿಕ್ಷಣದೊಂದಿಗೆ ವಿದ್ಯಾರ್ಥಿಗಳಲ್ಲಿ ಪರಿಸರ ರಕ್ಷಣೆಯ ಪಾಠ ಅಗತ್ಯ

ಶಿಕ್ಷಣದೊಂದಿಗೆ ವಿದ್ಯಾರ್ಥಿಗಳಲ್ಲಿ ಪರಿಸರ ರಕ್ಷಣೆಯ ಪಾಠ ಅಗತ್ಯ


ರಿಪ್ಪನ್‌ಪೇಟೆ;-ಬುದ್ದಿವಂತನಲ್ಲ ಎಂದು ಮಕ್ಕಳನ್ನು ತೆಗಳದೆ ಅವರ ಕ್ರೀಯಾಶಕ್ತಿಯನ್ನಾದರಿಸಿ ಪ್ರೋತ್ಸಾಹಿಸಿದಲ್ಲಿ ಎಲ್ಲರಿಗಿಂತ ಮೊದಲ ಸ್ಥಾನದಲ್ಲಿರುತ್ತಾರೆ.ವಿದ್ಯಾರ್ಥಿ ವ್ಯಾಸಂಗದಲ್ಲಿ ಹಿಂದೆ ಉಳಿದಿದ್ದಾನೆಂದು ಚಿಂತಿಸದೇ ಅವರಿಗೆ ಹೆಚ್ಚು ಪ್ರೋತ್ಸಾಹಿಸಿದಲ್ಲಿ ಹೆಚ್ಚು ಸಾಧನೆ ಮಾಡುವ ಮೂಲಕ ಮೊದಲ ವ್ಯಕ್ತಿಯಾಗುತ್ತಾನೆ ಎಂದು ಕಬಳೆ ಸಂತ ಫ್ರಾನ್ಸಿಸ್ ಕ್ಸೇಮಿಯರ್ ಧರ್ಮ ಕೇಂದ್ರದ ರೆವೆರಂಟ್ ಫಾದರ್ ರೋಮನ್ ಪಿಂಟೋ ಹೇಳಿದರು.

ರಿಪ್ಪನ್‌ಪೇಟೆಯ ಗುಡ್‌ಶಫರ್ಡ್ ಹಿರಿಯ ಪ್ರಾಥಮಿಕ ಪಾಠಶಾಲೆಯ “ಶಾಲಾ ವಾರ್ಷಿಕೋತ್ಸವ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿ ಮನಷ್ಯನ ದುರಾಸೆಯಿಂದಾಗಿ ನಮ್ಮ ಪರಿಸರ ವಿನಾಶದ ಅಂಚಿಗೆ ತಲುಪುವಂತಾಗಿದೆ ಅಭಿವೃಧ್ಧಿಯ ಹೆಸರಿನಲ್ಲಿ ನಮ್ಮ ಪೂರ್ವಜರು ನೆಟ್ಟು ಬೆಳಸಲಾದ ಬೃಹತ್ ಗಾತ್ರದ ಮರಗಳನ್ನು ಕಡಿಯುತ್ತಿದ್ದಾರೆ.ಅದರೆ ಅದರ ಬದಲು ಒಂದು ಗಿಡವನ್ನು ಬೆಳಸುವ ಬಗ್ಗೆ ಚಿಂತಿಸುತ್ತಿಲ್ಲಾ ಇದು ಹೀಗೆ ಮುಂದುವರಿದರೆ ಮುಂದಿನ ಪೀಳಿಗಗೆ ಆಕ್ಸಿಜನ್ ಸಮಸ್ಯೆ ಎದುರಾಗುವುದರಲ್ಲಿ ಯಾವುದೇ ಸಂದೇಹವಿಲ್ಲ ಎಂದು ವಿಷಾದ ವ್ಯಕ್ತಪಡಿಸಿ ನಮ್ಮ ಮಕ್ಕಳು ತಮ್ಮ ಶಾಲಾ ಅವರಣದಲ್ಲಿ ತಲಾ ಒಂದೊಂದು ಗಿಡಬೆಳಸಿ ಪರಿಸರದ ರಕ್ಷಣೆ ಮಾಡುವಂತಾಗಬೇಕು ಎಂದರು.


ಗುಡ್‌ಶಫರ್ಡ್ ಹಿರಿಯ ಪ್ರಾಥಮಿಕ ಶಾಲೆಯ ಸಂಚಾಲಕ ರೆವೆರಂಟ್ ಫಾದರ್ ಬಿನೋಯಿ ಮ್ಯಾಥ್ಯೂ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು.

ಶಾಲಾ ವಾರ್ಷೀಕೋತ್ಸವ ಸಮಾರಂಭವನ್ನು ಗ್ರಾಮ ಪಂಚಾಯ್ತಿ ಆಧ್ಯಕ್ಷೆ ಧನಲಕ್ಷಿö್ಮ ಗಂಗಾಧರ್ ಉದ್ಘಾಟಿಸಿದರು.

ಮುಖ್ಯಅತಿಥಿಗಳಾಗಿ ಆರಾಧನ ಸೊಸೈಟಿ ಮದರ್ ಸುಪೀರಿಯರ್ ಸಿಸ್ಟರ್ ಲೀಸಾ ಮರಿಯಾ, ಗ್ರಾಮ ಪಂಚಾಯ್ತಿ ಉಪಾಧ್ಯಕ್ಷ ಸುಧೀಂದ್ರ ಪೂಜಾರಿ, ಗ್ರಾಮ ಪಂಚಾಯ್ತಿ ಸದಸ್ಯರಾದ ಮಹಾಲಕ್ಷಿö್ಮ,ವನಮಾಲ,ಶಿಕ್ಷಣ ಸಂಯೋಜಕ ಕರಿಬಸಪ್ಪ, ದುಗ್ಗಪ್ಪ,ಸಮೂಹ ಸಂಪನ್ಮೂಲ ವ್ಯಕ್ತಿ ಎನ್.ಮಂಜುನಾಥ, ಸಬಾಸ್ಟಿನ್‌ಮ್ಯಾಥ್ಯೂ,ಮುಖ್ಯ ಶಿಕ್ಷಕಿ ಸಿಸ್ಟರ್ ಜೋಸ್ಫಿನ್,ಎಎಸ್‌ಐ ಹಾಲಪ್ಪ, ಎಸ್.ಡಿ.ಎಂ.ಸಿ.ಆಧ್ಯಕ್ಷ ಹಸನಬ್ಬ, ಶಾಲಾಭಿವೃದ್ದಿ ಸಮಿತಿಯ ಸದಸ್ಯರಾದ ಬ್ಲೆಸ್ಸಿನ್, ಜಯಲಕ್ಷಿö್ಮ, ರೇಖಾ,ಷಾಜಿ,ದಯಾನಂದ, ರಾಘವೇಂದ್ರ,ಇನ್ನಿತರರು ಪಾಲ್ಗೊಂಡಿದ್ದರು.

ವಿದ್ಯಾರ್ಥಿಗಳಿಂದ ಪ್ರಾರ್ಥನೆ. ಸಹಶಿಕ್ಷಕ ರಾಘವೇಂದ್ರ ಸ್ವಾಗತಿಸಿದರು ಮುಖ್ಯ ಶಿಕ್ಷಕಿ ಸಿಸ್ಟರ್ ಜೋಸ್ಫಿನ್ ವಾರ್ಷೀಕ ವರದಿ ವಾಚನ ಮಾಡಿದರು..ಮಂಜುನಾಥ ವಂದಿಸಿದರು.


ನಂತರದಲ್ಲಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ನಡೆಯಿತು, ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿತು.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ದೇಶದ ಅಭಿವೃದ್ಧಿಯಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಮಹತ್ವದ್ದು: ಶಾಸಕ ಬೇಳೂರು ಗೋಪಾಲಕೃಷ್ಣ

ದೇಶದ ಅಭಿವೃದ್ಧಿಯಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಮಹತ್ವದ್ದು: ಶಾಸಕ ಬೇಳೂರು ಗೋಪಾಲಕೃಷ್ಣ ಶಾಲೆ ಬಿಟ್ಟ ಮಕ್ಕಳನ್ನು ಮರಳಿ ಕರೆತಂದರೆ ₹10…

4 hours ago

RIPPONPETE | ಶಿಕ್ಷಣ ಕ್ಷೇತ್ರಕ್ಕೆ ಹೊಸ ಕೊಡುಗೆ – ಕಣಬಂದೂರಿನಲ್ಲಿ ಶ್ರೀ ಶಿವ ರಾಮಕೃಷ್ಣ ಸ್ಕೂಲ್ ನೂತನ ಕಟ್ಟಡಕ್ಕೆ ಅಡಿಗಲ್ಲು

RIPPONPETE | ಶಿಕ್ಷಣ ಕ್ಷೇತ್ರಕ್ಕೆ ಹೊಸ ಕೊಡುಗೆ - ಕಣಬಂದೂರಿನಲ್ಲಿ ಶ್ರೀ ಶಿವ ರಾಮಕೃಷ್ಣ ಸ್ಕೂಲ್ ನೂತನ ಕಟ್ಟಡಕ್ಕೆ ಅಡಿಗಲ್ಲು…

4 hours ago

ಕಸ್ತೂರಿರಂಗನ್ ವರದಿ ವಿರೋಧಿ ಹೋರಾಟದಲ್ಲಿ ಬಿಜೆಪಿ ವಿರುದ್ಧ ಕಾಂಗ್ರೆಸ್ ನಾಯಕರ ತೀವ್ರ ವಾಗ್ದಾಳಿ

ಕಸ್ತೂರಿರಂಗನ್ ವರದಿ ವಿರೋಧಿ ಹೋರಾಟದಲ್ಲಿ ಬಿಜೆಪಿ ವಿರುದ್ಧ ಕಾಂಗ್ರೆಸ್ ನಾಯಕರ ತೀವ್ರ ವಾಗ್ದಾಳಿ Former Education Minister Kimmane Ratnakar…

6 hours ago

ಪಟಗುಪ್ಪ ಸೇತುವೆ ಬಳಿಯ ಹಿನ್ನೀರಿನಲ್ಲಿ ಅನಾಮಧೇಯ ವ್ಯಕ್ತಿಯ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆ

ಪಟಗುಪ್ಪ ಸೇತುವೆ ಬಳಿಯ ಹಿನ್ನೀರಿನಲ್ಲಿ ಅನಾಮಧೇಯ ವ್ಯಕ್ತಿಯ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆ An unidentified man’s partially decomposed…

6 hours ago

ಬಸ್‌-ಬೈಕ್ ಭೀಕರ ಅಪಘಾತ; 27 ವರ್ಷದ ಯುವಕ ಸ್ಥಳದಲ್ಲೇ ಸಾವು

ಬಸ್‌-ಬೈಕ್ ಭೀಕರ ಅಪಘಾತ; 27 ವರ್ಷದ ಮೆಕ್ಯಾನಿಕ್ ಸ್ಥಳದಲ್ಲೇ ಸಾವು A 27-year-old mechanic was killed in a…

9 hours ago

ಅಕ್ರಮ ವಿದ್ಯುತ್‌ ಬೇಲಿಗೆ ಸಿಲುಕಿ ಮೂರು ವರ್ಷದ ಕರಡಿ ಸಾವು – ತೋಟದ ಮಾಲೀಕನ ಬಂಧನ

ಅಕ್ರಮ ವಿದ್ಯುತ್‌ ಬೇಲಿಗೆ ಸಿಲುಕಿ ಮೂರು ವರ್ಷದ ಕರಡಿ ಸಾವು - ತೋಟದ ಮಾಲೀಕನ ಬಂಧನ A three-year-old male…

9 hours ago