Ripponpete | ಸನಾತನ ಧರ್ಮ ಸಂಸ್ಕೃತಿ ಸಾರುವ ವಿಶಿಷ್ಟ ದೇಶ ಭಾರತ – ಶ್ರೀ ರೇಣುಕಾನಂದ ಸ್ವಾಮೀಜಿ

“ಸನಾತನ ಧರ್ಮ ಸಂಸ್ಕೃತಿ ಸಾರುವ ವಿಶಿಷ್ಟ ದೇಶ ಭಾರತ’’
ರಿಪ್ಪನ್‌ಪೇಟೆ;-ಸನಾನತ ಧರ್ಮ ಸಂಸ್ಕೃತಿ ಸಾರುವ ವಿಶಿಷ್ಟ ದೇಶ ಭಾರತವಾಗಿದೆ.ವಿಶ್ವಕ್ಕೆ ಶಾಂತಿ ನೆಮ್ಮದಿಯನ್ನು ಸಾರುವ ಧರ್ಮ ಹಿಂದು ಧರ್ಮದಾಗಿದೆ ಎಂದು ನಿಟ್ಟೂರು ಆರ್ಯಈಡಿಗಾ ಮಹಾಸಂಸ್ಥಾನ ಮಠದ ಶ್ರೀ ರೇಣುಕಾನಂದ ಮಹಾಸ್ವಾಮೀಜಿ ಹೇಳಿದರು.

ರಿಪ್ಪನ್‌ಪೇಟೆಯಲ್ಲಿ ಇಂದು ಆಯೋಧ್ಯೆ ಶ್ರೀರಾಮ ಮಂದಿರ ಮಂತ್ರಾಕ್ಷತೆ ಆಭಿಯಾನ ಮನೆಮನೆ ಸಂಪರ್ಕ ಆಭಿಯಾನ ಸಮಿತಿಯವರು ಆಯೋಜಿಸಲಾದ ಬೃಹತ್ ಆಭಿಯಾನ ಕಾರ್ಯಕರ್ತರ ಸಮಾವೇಶವನ್ನು ಉದ್ಘಾಟಿಸಿ ಆಶೀರ್ವಚನ ನೀಡಿ ಭಾರತ ಪುಣ್ಯ ಪುರುಷರ ಸಂತರ ಶರಣರ ಪುಣ್ಯ ಭೂಮಿ ಮನುಕುಲದ ಉದ್ದಾರಕ್ಕಾಗಿ ಮಾನವೀಯ ಗುಣ ಕೊಟ್ಟ ಮಾರ್ಯಾಧಪುರುಷೋತ್ತಮ ಜನ್ನ ಭೂಮಿಯ ಶಾಂತಿ ನೆಮ್ಮದಿಯ ಕರುಣಿಸಿದ ಈ ದೇಶ ಭಾರತದಲ್ಲಿ  ನಮ್ಮಗಳ ಜೀವಿತಾವಧಿಯಲ್ಲಿ ಇಂತಹ ಒಂದು ಹಿಂದು ದೇವಸ್ಥಾನವನ್ನು ಹೋರಾಟದ ಮೂಲಕ ನಿರ್ಮಿಸುತ್ತಿರುವುದು ಇತಿಹಾಸ ವಾಗಿದೆ ಎಂದರು.ಇದನ್ನು ಜನವರಿ ೧ ರಿಂದ ೧೫  ರವರಗೆ ಮನೆಮನೆಗಳಿಗೆ ಪ್ರಚಾರ ಪಡಿಸಿ ರಾಮನ ಅದರ್ಶತತ್ವಗಳನ್ನು ಇಂದಿನ ಯುವಜನಾಂಗದಲ್ಲಿ ಬೆಳಸುವಂತಾಗಬೇಕು ಎಂದರು.


ಸಂಘ ಪ್ರಾಂತ್ಯ ವ್ಯವಸ್ಥಾಪಕ ಯಾದವಕೃಷ್ಣ ಪ್ರಾಸ್ತಾವಿಕವಾಗಿ ಮಾತನಾಡಿದರು.

ಸಭೆಯಲ್ಲಿ ತಾಲ್ಲೂಕ್ ಆರ್.ಎಸ್.ಎಸ್.ಕಾರ್ಯನಿರ್ವಾಹಕ ಶ್ಯಾಮಸುಂದರ್ ಕಗ್ಗಲಿ ಮಾಜಿ ಸಚಿವ ಹರತಾಳು ಹಾಲಪ್ಪ,ತಾಲ್ಲೂಕ್ ಬಿಜೆಪಿ ಆಧ್ಯಕ್ಷ ಬೆಳಗೋಡು ಗಣಪತಿ,ತಾಪಂ ಮಾಜಿ ಅಧ್ಯಕ್ಷ ವೀರೇಶ್ ಆಲುವಳ್ಳಿ, ಹನಿಯ ರವಿ ಇನ್ನಿತರರು ಹಾಜರಿದ್ದರು.

ಪ್ರಾರಂಭದಲ್ಲಿ ನಾಗರತ್ನ ದೇವರಾಜ್ ಪ್ರಾರ್ಥಿಸಿದರು,ಎನ್.ಸತೀಶ್ ಸ್ವಾಗತಿಸಿದರು ಲೀಲಾಉಮಾಶಂಕರ್ ಕಾರ್ಯಕ್ರಮ ನಿರೂಪಿಸಿದರು.

ಪೂರ್ಣಕುಂಭ ಸ್ವಾಗತದೊಂದಿಗೆ ಮೆರವಣಿಗೆ :

ರಿಪ್ಪನ್‌ಪೇಟೆಯಲ್ಲಿ ಇಂದು ಆಯೋಧ್ಯೆ ಶ್ರೀರಾಮ ಮಂದಿರ ಮಂತ್ರಾಕ್ಷತೆ ಆಭಿಯಾನ ಮನೆಮನೆ ಸಂಪರ್ಕ ಆಭಿಯಾನ ಸಮಿತಿಯವರು ಆಯೋಜಿಸಲಾದ ಬೃಹತ್ ಆಭಿಯಾನ ಕಾರ್ಯಕರ್ತರ ಸಮಾವೇಶ ಕಾರ್ಯಕ್ರಮಕ್ಕೆ ಆಗಮಿಸಿದ ನಿಟ್ಟೂರು ಆರ್ಯಈಡಿಗಾ ಮಹಾಸಂಸ್ಥಾನ ಮಠದ ಶ್ರೀ ರೇಣುಕಾನಂದ ಮಹಾಸ್ವಾಮೀಜಿಯವರನ್ನು ಮುತೈದೈಯರು ಪೂರ್ಣ ಕುಂಭಸ್ವಾಗತದೊಂದಿಗೆ ವಿನಾಯಕ ವೃತ್ತದಿಂದ ಭೂಪಾಳಂ ಚಂದ್ರಶೇಖರಯ್ಯ ಸಭಾಭವನಕ್ಕೆ ಮೆರವಣಿಗೆ ಮೂಲಕ ಸ್ವಾಗತಿಸುವುದರೊಂದಿಗೆ ಬರಮಾಡಿಕೊಂಡರು.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಈದ್ ಮಿಲಾದ್ ಮೆರವಣಿಗೆ: ಪಾನೀಯ, ಕೇಕ್ ವಿತರಿಸಿ ಸೌಹಾರ್ದತೆ ಮೆರೆದ ಹಿಂದೂ ಸಂಘಟನೆ ಕಾರ್ಯಕರ್ತರು

ಈದ್ ಮಿಲಾದ್ ಮೆರವಣಿಗೆ: ಪಾನೀಯ, ಕೇಕ್ ವಿತರಿಸಿ ಸೌಹಾರ್ದತೆ ಮೆರೆದ ಹಿಂದೂ ಸಂಘಟನೆ ಕಾರ್ಯಕರ್ತರು ರಿಪ್ಪನ್ ಪೇಟೆ : ಬಾಳಿನ…

6 hours ago

ಸೆ.5ರ ಶಿಕ್ಷಕರ ದಿನಾಚರಣೆಗೆ ಗೈರು; ಶಾಸಕ ಬೇಳೂರು ಗೋಪಾಲಕೃಷ್ಣ ವಿರುದ್ಧ ಬಿಜೆಪಿ ಆರೋಪ

ಸೆ.5ರ ಶಿಕ್ಷಕರ ದಿನಾಚರಣೆಗೆ ಗೈರು; ಶಾಸಕ ಬೇಳೂರು ಗೋಪಾಲಕೃಷ್ಣ ವಿರುದ್ಧ ಬಿಜೆಪಿ ಆರೋಪ BJP leaders in Sagar have…

6 hours ago

ಈದ್ ಮಿಲಾದ್ ಮೆರವಣಿಗೆಯಲ್ಲಿ ಮಾದಕ ವ್ಯಸನ ವಿರುದ್ಧ ಸಮರ: ‘ಗಾಂಜಾ ಬೇಡ ಬ್ರೋ’ ಅಭಿಯಾನಕ್ಕೆ ಭರ್ಜರಿ ಸ್ಪಂದನೆ

ಯುವಶಕ್ತಿಯೇ ಎಚ್ಚೆತ್ತುಕೋ: ಈದ್ ಮಿಲಾದ್ ಸಂಭ್ರಮದಲ್ಲಿ ಮೊಳಗಿದ ‘ನಶಾಮುಕ್ತ ಭಾರತ’ ಸಂದೇಶ Ripponpete Police launched an anti-drug awareness…

13 hours ago

ಅಂಗವಿಕಲ ಯುವಕನ ಸೈಟ್ ತೆರವಿಗೆ ಅರಣ್ಯ ಇಲಾಖೆ ಯತ್ನ – ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಆಕ್ರೋಶ, ಹೈಡ್ರಾಮಾ

ಅಂಗವಿಕಲ ಯುವಕನ ಸೈಟ್ ತೆರವಿಗೆ ಅರಣ್ಯ ಇಲಾಖೆ ಯತ್ನ – ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಆಕ್ರೋಶ, ಹೈಡ್ರಾಮಾ High drama…

1 day ago

ರಿಪ್ಪನ್ ಪೇಟೆ ಸಮೀಪದ ಅರಣ್ಯದಲ್ಲಿ ಕುಡುಮಲ್ಲಿಗೆ ಸೊಸೈಟಿ ಸಿಇಒ ನಾಪತ್ತೆ ರಹಸ್ಯವೇನು? ಅನಾಹುತವೋ, ಪಲಾಯನವೋ? ಮುಂದುವರಿದ ತೀವ್ರ ಶೋಧ!

ರಿಪ್ಪನ್ ಪೇಟೆ ಸಮೀಪದ ಅರಣ್ಯದಲ್ಲಿ ಕುಡುಮಲ್ಲಿಗೆ ಸೊಸೈಟಿ ಸಿಇಒ ನಾಪತ್ತೆ ರಹಸ್ಯವೇನು? ಅನಾಹುತವೋ, ಪಲಾಯನವೋ? ಮುಂದುವರಿದ ತೀವ್ರ ಶೋಧ! An…

1 day ago

ರಿಪ್ಪನ್‌ಪೇಟೆಯಲ್ಲಿ ಅರಣ್ಯಾಧಿಕಾರಿಗಳ ದಾಳಿ : 21 ಕೆ.ಜಿ. ಜಿಂಕೆ ಮಾಂಸ ವಶ, ಆರೋಪಿಗಳು ಪರಾರಿ

ರಿಪ್ಪನ್‌ಪೇಟೆಯಲ್ಲಿ ಅರಣ್ಯಾಧಿಕಾರಿಗಳ ದಾಳಿ : 21 ಕೆ.ಜಿ. ಜಿಂಕೆ ಮಾಂಸ ವಶ, ಆರೋಪಿಗಳು ಪರಾರಿ Forest Flying Squad officials…

2 days ago