POSTMAN NEWS

ನೈಜ ಸುದ್ದಿ ನೇರ ಬಿತ್ತರ..

Ripponpete | ಬಾಳೂರು ಸೇತುವೆ ಬಳಿ ಕಾರು ಡಿಕ್ಕಿಯಾಗಿ ಮಹಿಳೆ ಸಾವು

Ripponpete | ಬಾಳೂರು ಸೇತುವೆ ಬಳಿ ಕಾರು ಡಿಕ್ಕಿಯಾಗಿ ಮಹಿಳೆ ಸಾವು 


ರಿಪ್ಪನ್‌ಪೇಟೆ : ಇಲ್ಲಿನ ಬಾಳೂರು ಗ್ರಾಮದ ಸೇತುವೆ ಬಳಿ ಕಾರು ಡಿಕ್ಕಿಯಾಗಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ನಡೆದಿದೆ.

ಶಿಕಾರಿಪುರ ತಾಲೂಕಿನ ಸುಣ್ಣದಕೊಪ್ಪ ನಿವಾಸಿ ನಾಗಮ್ಮ(46) ಮೃತಪಟ್ಟ ದುರ್ಧೈವಿಯಾಗಿದ್ದಾರೆ.ಇವರು ಬಾಳೂರು ಸೇತುವೆ ಬಳಿಯ ಕ್ಯಾಂಪ್ ನಲ್ಲಿ ವಾಸಿಸುತಿದ್ದರು.


ಸೇತುವೆ ಬಳಿಯಲ್ಲಿ ಅಪಘಾತದಲ್ಲಿ ಗಾಯಗೊಂಡಿದ್ದ ಎಮ್ಮೆಗೆ ನೀರುಣಿಸುತಿದ್ದ ಮಹಿಳೆಗೆ ಸಾಗರ ಕಡೆಯಿಂದ ರಿಪ್ಪನ್‌ಪೇಟೆ ಕಡೆಗೆ ಬರುತಿದ್ದ ಕಾರು ಏಕಾಏಕಿ ಡಿಕ್ಕಿಯಾಗಿದೆ.

ಘಟನೆಯ ಹಿನ್ನಲೆ :

ಬಾಳೂರು ಗ್ರಾಮದ ಸೇತುವೆ ಬಳಿ ಅಪರಿಚಿತ ವಾಹನವೊಂದು ರಸ್ತೆಯಲ್ಲಿದ್ದ ಎಮ್ಮೆಗೆ ಡಿಕ್ಕಿಯಾಗಿತ್ತು ಈ ಹಿನ್ನಲೆಯಲ್ಲಿ ಗಾಯಗೊಂಡಿದ್ದ ಎಮ್ಮೆಗೆ ನೀರು ಕುಡಿಸಲು ಬಂದ ಮಹಿಳೆ ಹಿಂದಿರುಗುವಾಗ ಮತ್ತೊಂದು ಕಾರು ಬಂದು ಮಹಿಳೆಗೆ ಡಿಕ್ಕಿಯಾಗಿದೆ.

ತಲೆಗೆ ಗಂಭೀರ ಗಾಯಗೊಂಡಿದ್ದ ಮಹಿಳೆಯನ್ನು ಸ್ಥಳೀಯರು ರಿಪ್ಪನ್‌ಪೇಟೆ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆತಂದು ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗಕ್ಕೆ 108 ನಲ್ಲಿ ಕಳಿಸಿಕೊಡಲಾಗಿತ್ತು. ಆದರೆ ಮಾರ್ಗ ಮಧ್ಯದಲ್ಲಿಯೇ ಮಹಿಳೆ ಮೃತಪಟ್ಟಿದ್ದಾರೆ.

ಸ್ಥಳಕ್ಕೆ ಪಿಎಸ್‌ಐ ಪ್ರವೀಣ್ ಎಸ್ ಪಿ ಹಾಗೂ ಸಿಬ್ಬಂದಿಗಳು ತೆರಳಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

ರಿಪ್ಪನ್‌ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Leave a Reply

Your email address will not be published. Required fields are marked *

  1. You cannot copy content of this page⚠️ Legal Warning: This article is protected under copyright law. Any unauthorized copying, screenshotting, reproduction, or publication on websites, social media, YouTube, or other platforms without permission may result in legal action. © POSTMAN NEWS Kannada.