POSTMAN NEWS

ನೈಜ ಸುದ್ದಿ ನೇರ ಬಿತ್ತರ..

Ripponpete | ಮಕ್ಕಳ ಶೈಕ್ಷಣಿಕ ಪ್ರಗತಿಯಲ್ಲಿ ಪೋಷಕರ ಪಾತ್ರ ಹಿರಿದು – ಶಾಸಕ ಬೇಳೂರು ಗೋಪಾಲಕೃಷ್ಣ

ಮಕ್ಕಳ ಶೈಕ್ಷಣಿಕ ಪ್ರಗತಿಯಲ್ಲಿ ಪೋಷಕರ ಪಾತ್ರ ಹಿರಿದು – ಶಾಸಕ ಬೇಳೂರು ಗೋಪಾಲಕೃಷ್ಣ


ರಿಪ್ಪನ್‌ಪೇಟೆ : ಬಾಲ್ಯದಲ್ಲಿ ಮಕ್ಕಳಿಗೆ ನೀಡುವ ಶಿಕ್ಷಣವು ಅವರ ಶೈಕ್ಷಣಿಕ ಜೀವನದಲ್ಲಿ ಮಹತ್ತರ ಪಾತ್ರವನ್ನು ವಹಿಸುತ್ತದೆ ಇದಕ್ಕೆ ಶಿಕ್ಷಕರ ಹಾಗೂ ಪೋಷಕರ ಪಾತ್ರ ಹಿರಿದಾಗಿದೆ ಎಂದು ಸಾಗರ ಹೊಸನಗರ ವಿಧಾನಸಭಾ ಕ್ಷೇತ್ರದ ಶಾಸಕ ಬೇಳೂರು ಗೋಪಾಲಕೃಷ್ಣ ಹೇಳಿದರು.

ಪಟ್ಟಣದ ಸಮೀಪದ ಬೆಳ್ಳೂರು ಗ್ರಾಪಂ ವ್ಯಾಪ್ತಿಯ ಹೊರಬೈಲು ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯ ವಾರ್ಷಿಕೋತ್ಸವ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಅವರು ರಾಜ್ಯ ಸರ್ಕಾರ ಗ್ರಾಮೀಣ ಪ್ರದೇಶದ ಮಕ್ಕಳ ಶೈಕ್ಷಣಿಕ ಅಭಿವೃದ್ದಿಗೆ ಅನೇಕ ಯೋಜನೆಗಳನ್ನು ಅನುಷ್ಠಾನಗೊಳಿಸಿದ್ದು ಅದರ ಸದುಪಯೋಗವನ್ನು ಮಕ್ಕಳು ಪಡೆದುಕೊಳ್ಳುವುದರ ಮೂಲಕ ಉತ್ತಮ ಶಿಕ್ಷಣವನ್ನು ಪಡೆದು ಉನ್ನತ ಉದ್ಯೋಗವನ್ನು ಅಲಂಕರಿಸಿ ಸಮಾಜದ ಮುಖ್ಯ ವಾಹಿನಿಗೆ ಬರಲು ಪ್ರಯತ್ನಿಸಬೇಕಾಗಿದೆ ಎಂದರು.


ಸರ್ಕಾರಿ ಶಾಲೆಗಳ ಬಗ್ಗೆ ಪೋಷಕರು ಇತ್ತೀಚಿನ ದಿನಗಳಲ್ಲಿ ನಿರಾಸಕ್ತಿ ಹೊಂದಿರುವುದಕ್ಕೆ ಬೇಸರ ವ್ಯಕ್ತಪಡಿಸಿದ ಅವರು ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರಾಗಿ ಕಾರ್ಯ ನಿರ್ವಹಿಸುತ್ತಿರುವ ಶಿಕ್ಷಕರುಗಳು ಮೆರಿಟ್ ಆಧಾರದ ಮೇಲೆ ಆಯ್ಕೆಯಾಗಿ ಕಾರ್ಯ ನಿರ್ವಹಿಸುತಿದ್ದಾರೆ.ಅವರಲ್ಲಿರುವ ಕೌಶಲ್ಯ ,ಪ್ರತಿಭೆಯನ್ನು ಸದ್ಬಳಕೆ ಮಾಡಿಕೊಳ್ಳಬೇಕು ಹಾಗೇಯೆ ಸರ್ಕಾರಿ ಶಾಲೆಗಳಲ್ಲಿ ಉಚಿತವಾಗಿ ಶಿಕ್ಷಣ ನೀಡುತಿದ್ದು ಅದನ್ನು ಸದುಪಯೋಗ ಪಡಿಸಿಕೊಳ್ಳಲು ಪೋಷಕರಲ್ಲಿ ಹಿಂಜರಿಕೆ ಬೇಡ ಹಾಗೇಯೆ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ಪ್ರತಿಭಾನ್ವಿತರಾಗಿದ್ದು ಅವರುಗಳಿಗೆ ಉತ್ತಮ ಅವಕಾಶ ಕಲ್ಪಿಸಿ ಕೊಟ್ಟರೆ ಅವರು ದೇಶದ ಉತ್ತಮ ಪ್ರಜೆಯಾಗಿ ರೂಪುಗೊಳ್ಳುತ್ತಾರೆ ಎಂದರು.

ಇದೇ ಸಂಧರ್ಭದಲ್ಲಿ ಶಾಲೆಯ ಎಸ್ ಡಿಎಂಸಿ ವತಿಯಿಂದ ಶಾಸಕರಿಗೆ ಸನ್ಮಾನಿಸಿ ಗೌರವಿಸಲಾಯಿತು.


ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್ ಡಿಎಂಸಿ ಅಧ್ಯಕ್ಷರಾದ ಮಂಜುನಾಥ್ ಬಿ ವಹಿಸಿದ್ದರು.

ಈ ಸಂಧರ್ಭದಲ್ಲಿ ಜಿಪಂ ಮಾಜಿ ಅಧ್ಯಕ್ಷ ಕಲಗೋಡು ರತ್ನಾಕರ್ , ಜಿಪಂ ಮಾಜಿ ಸದಸ್ಯರಾದ ಬಿ ಒಇ ರಾಮಚಂದ್ರ ಬೆಳ್ಳೂರು ಗ್ರಾಪಂ ಅಧ್ಯಕ್ಷೆ ಹೇಮಾವತಿ,ಉಪಾಧ್ಯಕ್ಷ ಬೆಳ್ಳೂರು ತಿಮ್ಮಪ್ಪ , ಸದಸ್ಯರಾದ ಪಲ್ಲವಿ ,ಷಣ್ಮುಖಪ್ಪ , ರಾಜೇಶ್ ,ಕವಿತಾ ,ಭವಾನಿ ದಿವಾಕರ್ ,ಅರುಣ್ ಕುಮಾರ್ ,ಕೆಂಚನಾಲ ಗ್ರಾಪಂ ಅಧ್ಯಕ್ಷ ಉಬೇದುಲ್ಲಾ ಷರೀಫ್,ಕ್ಷೇತ್ರ ಶಿಕ್ಷಣಾಧಿಕಾರಿ ಕೃಷ್ಣಮೂರ್ತಿ ,ಶಿಕ್ಷಣ ಇಲಾಖೆಯ ನಾಗರಾಜ್ ಶಾಲೆಯ ಮುಖ್ಯೋಪಾಧ್ಯಾಯ ಶಿವಪ್ಪ ಹೆಚ್ ಸಿ ಹಾಗೂ ಇನ್ನಿತರರಿದ್ದರು.

Leave a Reply

Your email address will not be published. Required fields are marked *

  1. You cannot copy content of this page⚠️ Legal Warning: This article is protected under copyright law. Any unauthorized copying, screenshotting, reproduction, or publication on websites, social media, YouTube, or other platforms without permission may result in legal action. © POSTMAN NEWS Kannada.