SAGARA | ಪೊಲೀಸ್ ಠಾಣೆಯಲ್ಲಿ ಮಹಿಳಾ ಸಿಬ್ಬಂದಿಗೆ ಸೀಮಂತ ಕಾರ್ಯ – ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಸಾಗರ ಪೊಲೀಸ್ ಠಾಣೆ
ಶಿವಮೊಗ್ಗ ಜಿಲ್ಲೆಯ ಸಾಗರ ಪಟ್ಟಣದ ಗ್ರಾಮಾಂತರ ಪೊಲೀಸ್ ಠಾಣೆ ಇಂದು ಅಪರೂಪದ ಸನ್ನಿವೇಶಕ್ಕೆ ಸಾಕ್ಷಿಯಾಗಿತ್ತು.
ಠಾಣೆಯಲ್ಲಿ ಕಾರ್ಯನಿರ್ವಹಿಸುತಿದ್ದ ಮಹಿಳಾ ಸಿಬ್ಬಂದಿಗೆ ಸೀಮಂತ ಕಾರ್ಯ ಮಾಡುವ ಮೂಲಕ ಭಾವುಕ ಕಾರ್ಯಕ್ರಮಕ್ಕೆ ಗ್ರಾಮಾಂತರ ಪೊಲೀಸ್ ಸ್ಟೇಷನ್ ಸಾಕ್ಷಿಯಾಯಿತು.
ಮಹಿಳಾ ಪೊಲೀಸ್ ಸಿಬ್ಬಂದಿ ರೇಖಾ ರವರಿಗೆ ಠಾಣೆಯ ಸಹ ಸಿಬ್ಬಂದಿಗಳು ಹಾಗೂ ಹಿರಿಯ ಅಧಿಕಾರಿಗಳು ಸೀಮಂತ ಕಾರ್ಯ ಮಾಡುವ ಮೂಲಕ ಇದೀಗ ಪ್ರೀತಿಯ ಸಂದೇಶವನ್ನು ಸಾರಿದ್ದಾರೆ.
ಸೀಮಂತ ಕಾರ್ಯ ಆಚರಿಸಿಕೊಂಡ ಮಹಿಳಾ ಪೊಲೀಸ್ ಸಿಬ್ಬಂದಿ ಠಾಣೆಯ ಎಲ್ಲಾ ಸಿಬ್ಬಂದಿಗಳಿಗೆ ಹಾಗೂ ಅಧಿಕಾರಿಗಳಿಗೆ ಅಭಿನಂದನೆ ಸಲ್ಲಿಸಿದ್ದಾರೆ