Headlines

Shivamogga | ವಕೀಲರ ಮೇಲೆ ನಡೆದ ಹಲ್ಲೆ ಖಂಡಿಸಿ ಶಿವಮೊಗ್ಗದಲ್ಲಿ ವಕೀಲರಿಂದ ಪ್ರತಿಭಟನೆ

ವಕೀಲರ ಮೇಲೆ ನಡೆದ ಹಲ್ಲೆ ಖಂಡಿಸಿ ಶಿವಮೊಗ್ಗದಲ್ಲಿ ವಕೀಲರಿಂದ ಪ್ರತಿಭಟನೆ
ಚಿಕ್ಕಮಗಳೂರಿನಲ್ಲಿ ವಕೀಲರ ಮೇಲೆ ಪೊಲೀಸರು ಹಲ್ಲೆ ನಡೆಸಿರುವುದನ್ನ ಖಂಡಿಸಿ ಇಂದು ಶಿವಮೊಗ್ಗದ ಬಾರ್ ಅಸೋಸಿಯೇಷನ್ ನ್ಯಾಯಾಂಗ ಕಲಾಪ ಬಹಿಷ್ಕರಿಸಿ ಗೋಪಿ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ಪ್ರತಿಭಟಿಸಲಾಯಿತು. ಜಿಲ್ಲಾ ರಕ್ಷಾಧಿಕಾರಿಗಳು ಸ್ಥಳಕ್ಕೆ ಬಂದು ಮನವಿ ಸ್ವೀಕರಿಸುವಂತೆ ಪ್ರತಿಭಟಿಸಲಾಯಿತು.

ಚಿಕ್ಕಮಗಳೂರಿನ ನಗರ ಪೊಲೀಸ್ ಠಾಣೆಯ ಪೊಲೀಸ್ ಇನ್ ಸ್ಪೆಕ್ಟರ್, ಅಸಿಸ್ಟೆಂಟ್ ಸಬ್ ಇನ್ ಸ್ಪೆಕ್ಟರ್ ಮತ್ತು ಪೊಲೀಸ್ ಇತರೆ ಸಿಬ್ಬಂದಿಗಳ ಲಾಠಿ ದೊಣ್ಣೆಯಿಂದ ವಕೀಲರ ಸಂಘದ ಸದಸ್ಯ ಪ್ರೀತಮ್ ಇವರಿಗೆ ಕ್ಷುಲ್ಲಕ ಕಾರಣಕ್ಕೆ ಥಳಿಸಲಾಗಿದೆ ಎಂದು ಮನವಿಯಲ್ಲಿ ಆರೋಪಿಸಲಾಗಿದೆ.

ಹಿರೇಕೆರೆಯಲ್ಲಿ, ಸೊರಬದಲ್ಲಿ ವಕೀಲರ ಮೇಲೆ ಹಲ್ಲೆ ನಡೆಸಲಾಗಿದೆ. ಪದೇ ಪದೇ ಈ ರೀತಿ ಹಲ್ಲೆ ನಡೆಯಿತ್ತಿರುವುದರಿಂದ ಕರ್ನಾಟಕ ಸರ್ಕಾರ ವಕೀಲರ ರಕ್ಷಣ ಕಾಯ್ದೆಯನ್ನ ಜಾರಿಗೊಳಿಸುವಂತೆ ಮನವಿಯಲ್ಲಿ ಒತ್ತಾಯಿಸಲಾಗಿದೆ. ಹಲ್ಲೆ ನಡೆಸಿದ ಪೊಲೀಸರನ್ನ ಕೆಲಸದಿಂದ ವಜಾಗೊಳಿಸಬೇಕು. ನ್ಯಾಯಗ ಬಂಧನಕ್ಕೆ ಹಲ್ಲೆ ನಡೆಸಿದವರನ್ನ ಒಳಪಡಿಸಬೇಕೆಂದು ಆಗ್ರಹಿಸಲಾಗಿದೆ.

ಸ್ಥಳಕ್ಕೆ ತಹಶೀಲ್ದಾರ್, ಡಿವೈಎಸ್ಪಿ, ಹೆಚ್ಚುವರಿ ಜಿಲ್ಲಾಧಿಕಾರಿ ಬಂದರೂ ಕೂಡ ಅದನ್ನು ಒಪ್ಪದೇ ಜಿಲ್ಲಾಧಿಕಾರಿಗಳೇ ಬರಬೇಕು ಎಂದು ಪ್ರತಿಭಟನಾಕಾರರು ಪಟ್ಟು ಹಿಡಿದರು. ಈ ಮಧ್ಯೆ ವಕೀಲರು ಮತ್ತು ಅಧಿಕಾರಿಗಳ ನಡುವೆ ಮಾತಿನ ಚಕಮಕಿ ಕೂಡ ನಡೆಯಿತು. ಪ್ರತಿಭಟನೆ ತೀವ್ರ ಸ್ವರೂಪ ಪಡೆಯುತ್ತಿದ್ದಂತೆಯೇ ಜಿಲ್ಲಾ ರಕ್ಷಣಾಧಿಕಾರಿ ಮತ್ತು ಜಿಲ್ಲಾಧಿಕಾರಿಗಳು ಸ್ಥಳಕ್ಕೆ ಬಂದು ಮನವಿ ಸ್ವೀಕರಿಸಿ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ ನಂತರ ವಕೀಲರು ಪ್ರತಿಭಟನೆ ಹಿಂಪಡೆದರು.

Leave a Reply

Your email address will not be published. Required fields are marked *

Exit mobile version