Shivamogga | ವೇಶ್ಯಾವಾಟಿಕೆ ಅಡ್ಡೆ ಮೇಲೆ ಪೊಲೀಸರ ದಾಳಿ
ಶಿವಮೊಗ್ಗ : ವೈಶ್ಯವಾಟಿಕೆಯ ಹಿನ್ನಲೆಯಲ್ಲಿ ಗಾಂಧಿನಗರದ 1 ನೇ ಪ್ಯಾರಲಲ್ ರಸ್ತೆಯಲ್ಲಿರುವ ಮನೆಯ ಮೇಲೆ ಜಯನಗರ ಪೊಲೀಸರು ದಾಳಿ ನಡೆಸಿದ್ದಾರೆ.
ದಾಳಿಯಲ್ಲಿ ಮೂವರು ಮಹಿಳೆ ಮತ್ತು ಇಬ್ಬರು ಗಂಡಸರನ್ನ ವಶಕ್ಕೆ ಪಡೆಯಲಾಗಿದೆ. ಖಚಿತ ಮಾಹಿತಿಯ ಮೇರೆಗೆ ಜಯನಗರ ಪೊಲೀಸ್ ಠಾಣೆ ಪಿಐ ಸಿದ್ದೇಗೌಡ ಅವರ ನೇತೃತ್ವದಲ್ಲಿ ದಾಳಿ ನಡೆದಿದೆ.
ಗೋದಾಮಿನ ರೀತಿಯಲ್ಲಿರುವ ಮನೆಯಲ್ಲಿ ಇತ್ತೀಚಿನ ದಿನಗಳಲ್ಲಿ ವೇಶ್ಯವಾಟಿಕೆ ದಂಧೆ ನಡೆಸಲಾಗುತ್ತಿತ್ತು ಎಂಬ ಮಾಹಿತಿ ದೊರೆತ ಹಿನ್ನಲೆಯಲ್ಲಿ ಪೊಲೀಸರು ದಾಳಿ ನಡೆಸಿದ್ದಾರೆ.
ಏಜೆಂಟ್ ಗಂಗಾಧರ್ ಎಂಬಾತನು ಮೈಸೂರು ಬೆಂಗಳೂರು ಮೊದಲಾದ ಜಿಲ್ಲೆಗಳಿಂದ ಮಹಿಳೆಯರನ್ನ ಕರೆಯಿಸಿ ದಂಧೆ ನಡೆಸುತ್ತಿದ್ದ ಎನ್ನಲಾಗಿದೆ. ದಾಳಿ ನಡೆದ ಮನೆಯಲ್ಲಿ ವೇಶ್ಯವಾಟಿಕೆ ನಡೆಯುತ್ತಿದೆ ಎಂಬ ಮಾಹಿತಿ ಸ್ಥಳೀಯರಿಗೆ ಗೊತ್ತೇ ಇರಲಿಲ್ಲ ಎಂದು ತಿಳಿದು ಬಂದಿದೆ.
ಒಬ್ಬರು ಸ್ಥಳೀಯರು, ಬೆಂಗಳೂರು ಮತ್ತು ಮೈಸೂರಿನಿಂದ ಬಂದ ಮಹಿಳೆಯರನ್ನು ರಕ್ಷಿಸಲಾಗಿದೆ.
ಜಯನಗರ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.