ತೀರ್ಥಹಳ್ಳಿಯ ಕುಶಾವತಿ ಬಳಿ ಎರಡು ಕಾರುಗಳ ನಡುವೆ ಅಪಘಾತ
ತೀರ್ಥಹಳ್ಳಿ : ಪಟ್ಟಣದ ಕುಶಾವತಿ ಸೇತುವೆ ಬಳಿ ಎರಡು ಕಾರುಗಳ ನಡುವೆ ಅಪಘಾತ ಸಂಭವಿಸಿದ್ದು ಕಾರಿನಲ್ಲಿದ್ದವರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ.
ತೀರ್ಥಹಳ್ಳಿಯಿಂದ ಶಿವಮೊಗ್ಗಕ್ಕೆ ಹೋಗುತ್ತಿದ್ದ ಬ್ರೀಜಾ ಕಾರು ಹಾಗೂ ಶಿವಮೊಗ್ಗದಿಂದ ತೀರ್ಥಹಳ್ಳಿಗೆ ಬರುತ್ತಿದ್ದ ಸಿಯಾಜ್ ಕಾರಿನ ನಡುವೆ ಈ ಅಪಘಾತ ಸಂಭವಿಸಿದೆ.
ಒಂದು ಕಾರಿನ ಮುಂಭಾಗ ಹಾಗೂ ಮತ್ತೊಂದು ಕಾರಿನ ಬಲ ಭಾಗ ಸಂಪೂರ್ಣ ನುಜ್ಜುಗುಜ್ಜಾಗಿದ್ದು ಕಾರಿನಲ್ಲಿದ್ದ ಸಣ್ಣ ಪುಟ್ಟ ಗಾಯವಾಗಿದ್ದರಿಂದ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ.
ತೀರ್ಥಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ಜರುಗಿದೆ.