Thirthahalli | ಪೊಲೀಸರ ಕರ್ತವ್ಯಕ್ಕೆ ಅಡ್ಡಿ ಆರೋಪ – ಖ್ಯಾತ ಪತ್ರಕರ್ತೆ ವಿಜಯಲಕ್ಷ್ಮಿ ಶಿಬರೂರು ಮೇಲೆ ಕೇಸ್ ದಾಖಲು
ತೀರ್ಥಹಳ್ಳಿ : ಪಟ್ಟಣದ ಬಾಳೆಬೈಲು ಸಮೀಪದಲ್ಲಿ
ಮಾಳೂರು ಠಾಣೆಯ ಎಎಸ್‌ಐ ಕೃಷ್ಣಮೂರ್ತಿ ರವರು ಹೆದ್ದಾರಿ ಗಸ್ತುವಿನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಸಂದರ್ಭದಲ್ಲಿ ಅವರ ಕರ್ತವ್ಯಕ್ಕೆ ಅಡ್ಡಿ ಪಡಿಸಿದ ಪತ್ರಕರ್ತೆ ವಿಜಯಲಕ್ಷ್ಮಿ ಶಿಬರೂರು ಮೇಲೆ ಮಾಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇತ್ತೀಚಿಗೆ ಮಾರಣಾಂತಿಕ ರಸ್ತೆ ಅಪಘಾತಗಳು ಹೆಚ್ಚಾಗಿದ್ದರಿಂದ ಅವುಗಳನ್ನು ತಡೆಯುವ ಸಲುವಾಗಿ ವಾಹನ ತಪಾಸಣೆ ಮಾಡಿ ಅನುಮಾನಸ್ಪದ ಚಾಲಕ ವ್ಯಕ್ತಿಗಳನ್ನು ಹಾಗೂ ಮದ್ಯಪಾನ ಮತ್ತಿತರೆ ಕಾನೂನು ಉಲ್ಲಂಘನೆ ಮಾಡಿದವರ ಬಗ್ಗೆ ಸೀಟ್ ಬೆಲ್ಟ್ ಹಾಕದೇ ಇರುವ ಬಗ್ಗೆ ಮಂಗಳವಾರ ಬೆಳಿಗ್ಗೆ 10-30ರ ಸಮಯದಲ್ಲಿ ಬಾಳೇಬೈಲು ನಲ್ಲಿ ಚೆಕ್ ಮಾಡುತ್ತಿದ್ದಾಗ ಒಬ್ಬರಿಗೆ ಸ್ಥಳದಲ್ಲೇ ದಂಡದ ರಶೀದಿಯನ್ನು ಬರೆಯುತ್ತಿರುವಾಗ ಖಾಸಗಿ ಚಾನಲ್ ನ ಪತ್ರಕರ್ತೆ ವಿಜಯಲಕ್ಷ್ಮಿ ಶಿಬರೂರು ಮತ್ತು ಅವರ ಕಡೆಯ ನಾಲೈದು ಜನರು ಗುಂಪು ಗೂಡಿಕೊಂಡು ಬಂದು ಸರ್ಕಾರಿ ಇಲಾಖಾ ವಾಹನಕ್ಕೆ ಅಡ್ಡಲಾಗಿ ನಿಂತು ವಾಹನ ತಪಾಸಣೆ ಮಾಡದಂತೆ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾರೆ ಎಂದು ಆರೋಪಿಸಲಾಗಿದೆ.
ಸರ್ಕಾರದಿಂದ ನೀಡಿದ ರಶೀದಿ ನಂತರ ಎಎಸ್‌ಐ ರವರಿಗೆ ವಾಹನ ತಪಾಸಣೆ ಮಾಡಲು ಬಿಡದೇ ಅಪಘಾತಗಳನ್ನು ತಡೆಯುವ ತಮ್ಮ ಕರ್ತವ್ಯದಿಂದ ಹಿಮ್ಮೆಟ್ಟಿಸುವ ಸಲುವಾಗಿ ಸರ್ಕಾರಿ ಕೆಲಸ ನಿರ್ವಹಿಸದಂತೆ ಅಡ್ಡಿಪಡಿಸಿ, ಪೊಲೀಸರ ಮೇಲೆ ಸುಳ್ಳು ಆರೋಪಗಳನ್ನು ಮಾಡುತ್ತಾ ಸಾರ್ವಜನಿಕರಿಗೆ ಪ್ರಚೋದನೆ ನೀಡುವ ರೀತಿಯಲ್ಲಿ ವರ್ತಿಸಿದ ಖಾಸಗಿ ಚಾನಲ್ ನ ಮತ್ತು ಅವರ ಜೊತೆಯಲ್ಲಿದ್ದ ಸಿಬ್ಬಂದಿಯವರ ಮೇಲೆ ಕಾನೂನು ಮಾಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ರಫ಼ಿ ರಿಪ್ಪನ್ ಪೇಟೆನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್