Thirthahalli | ಸೆಮಿಫೈನಲ್ ನಲ್ಲಿ ಗೆದ್ದಿದ್ದೇವೆ, ಖಂಡಿತವಾಗಿ ಫೈನಲ್ ಮೋದಿಯದ್ದೆ – ಆರಗ ಜ್ಞಾನೇಂದ್ರ

ಸೆಮಿಫೈನಲ್ ನಲ್ಲಿ ಗೆದ್ದಿದ್ದೇವೆ, ಖಂಡಿತವಾಗಿ ಫೈನಲ್ ಮೋದಿಯದ್ದೆ – ಆರಗ ಜ್ಞಾನೇಂದ್ರ
ತೀರ್ಥಹಳ್ಳಿ : ಇಂದು ಬಿಜೆಪಿ ಕಾರ್ಯಕರ್ತರ ಪಾಲಿಗೆ ಸಂಭ್ರಮದ ದಿನ. ನಾಲ್ಕು ರಾಜ್ಯಗಳ ಚುನಾವಣಾ ಫಲಿತಾಂಶದಲ್ಲಿ ಮೂರು ರಾಜ್ಯಗಳಲ್ಲಿ ಬಿಜೆಪಿ ಅತ್ಯುತ್ತಮ ಲೀಡ್ ನಲ್ಲಿ ಇದೆ. ಇಂಡಿಯನ್ ಅಲೆಯನ್ಸ್ ನೆಲ ಕಚ್ಚುತ್ತಿದೆ. ಗ್ಯಾರೆಂಟಿ ನೀಡಿದರು ಜನ ಒಪ್ಪದೇ ಕಾಂಗ್ರೆಸ್ ಗೆ ತಪರಾಕಿ ಹೊಡೆದಿದ್ದಾರೆ ಎಂದು ಮಾಜಿ ಗೃಹಸಚಿವ, ಶಾಸಕರಾದ ಆರಗ ಜ್ಞಾನೇಂದ್ರ ಹೇಳಿದರು.

ಭಾನುವಾರ ಪಂಚರಾಜ್ಯಗಳ ಚುನಾವಣಾ ಫಲಿತಾಂಶದಲ್ಲಿ ಮೂರು ರಾಜ್ಯ ಬಿಜೆಪಿ ಪರವಾಗಿ  ಬಂದಿದ್ದ ಕಾರಣ ತೀರ್ಥಹಳ್ಳಿಯಲ್ಲಿ ಕಾರ್ಯಕರ್ತರ ಜೊತೆ ಸಂಭ್ರಮಾಚರಣೆಯಲ್ಲಿ ಭಾಗಿಯಾಗಿ ಮಾತನಾಡಿದ ಅವರು ತೆಲಂಗಾಣದಲ್ಲಿ ಕರ್ನಾಟಕದ ಹಣವನ್ನು ತೆಗೆದುಕೊಂಡು ಹೋಗಿ ಸುರಿದು ಇಲ್ಲಿನ ನಾಯಕರು ಅಲ್ಲಿ ಪ್ರಚಾರ ಮಾಡಿ ಮಾಡಬಾರದ ಅನೈತಿಕ ಕೆಲಸವನ್ನು ಈ ಚುನಾವಣೆಯಲ್ಲಿ ಮಾಡಿದ್ದರಿಂದ ಸ್ವಲ್ಪ ಕಾಂಗ್ರೆಸ್ ಮುನ್ನಡೆ ಪಡೆದಿದೆ. ಇಲ್ಲದಿದ್ದರೆ ಬಿಆರ್ ಎಸ್ ಗೆಲ್ಲುವ ಪರಿಸ್ಥಿತಿ ಇತ್ತು ಎಂದರು.

ಛತ್ತಿಸ್ ಘಡ ದಲ್ಲಿ ಅತಂತ್ರ ಎನ್ನುವ ಸಮೀಕ್ಷೆ ಬಂದಿತ್ತು. ಆದರೆ ಊಹೆಗೂ ನಿಲುಕದ ಮತದಾರನ ತೀರ್ಪು ಹೊರ ಬೀಳುತ್ತಿದೆ.ಅದು ಬಿಜೆಪಿ ಪರವಾಗಿ ಬೀಳುತ್ತಿದೆ. ದೇಶ ಮೊದಲು ಎನ್ನುವ ತತ್ವದ ಪರವಾಗಿ ಬೀಳುತ್ತಿರುವುದು ನಾವೆಲ್ಲ ಹೆಮ್ಮೆ ಪಡುವ ವಿಷಯ. ಇಡೀ ದೇಶದಲ್ಲಿ ಅತೀ ದೊಡ್ಡ ರಾಜ್ಯಗಳಾದ ರಾಜಸ್ತಾನ್ ಹಾಗೂ ಮಧ್ಯಪ್ರದೇಶ ದಲ್ಲಿ ಅಭೂತ ಪೂರ್ವ ಬೆಂಬಲ ಗಳಿಸಿದೆ.ತೆಲಂಗಾಣದಲ್ಲೂ ನಮ್ಮ ಮತ ಇಮ್ಮಡಿಯಾಗಿದೆ, ಅಷ್ಟೇ ಅಲ್ಲದೆ ಇದು 2024 ರ ಲೋಕಸಭಾ ಚುನಾವಣೆಯ ಮುನ್ಸೂಚನೆ ಎಂದರು.

ಈ ಚುನಾವಣೆಯನ್ನು ಸೆಮಿಫೈನಲ್ ಎಂದು ಹೇಳಲಾಗುತ್ತಿತ್ತು. ಇದರಲ್ಲಿ ಗೆದ್ದಿದ್ದೇವೆ, ಖಂಡಿತವಾಗಿ ಫೈನಲ್ ಮೋದಿಯದ್ದೆ, ಮೋದಿ ಫೈನಲ್ ನಲ್ಲಿ ಗೆಲುವು ಪಡೆಯುತ್ತಾರೆ ಎನ್ನುವ ಸಂದೇಶ ಹಾಗೂ ವಿಶ್ವಾಸ ಈ ಐದು ರಾಜ್ಯಗಳ ಜನ ವ್ಯಕ್ತಪಡಿಸಿದ್ದಾರೆ. ತೀರ್ಥಹಳ್ಳಿಯಿಂದ ಕೂಡ ಮುಂದಿನ ಲೋಕಸಭೆಯಲ್ಲಿ ಗೆಲ್ಲಿಸೋಣ, ಮೋದಿಯವರ ಕೈ ಬಲಪಡಿಸೋಣ. ಶತಮಾನಗಳ ಕಾಲ ಆಡಳಿತ ನೆಡೆಸಿದ್ದ ಕಾಂಗ್ರೆಸ್ ಇಂದು ಸಾಧನೆ ಹೇಳಿಕೊಳ್ಳಲು ನಾಚಿಕೆಪಟ್ಟು ಗೆಲ್ಲಲು ಗ್ಯಾರೆಂಟಿ ಮೊರೆ ಹೋಗುತ್ತಿದೆ, ಇದಕ್ಕೆ ಜನ ತಕ್ಕ ಉತ್ತರ ನೀಡಿದ್ದಾರೆ ಎಂದರು.
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ರಿಪ್ಪನ್‌ಪೇಟೆ ಪಟ್ಟಣದ ನಾಲ್ಕು ರಸ್ತೆಗಳಿಗೆ ಬೆಳಕಿನ ಭಾಗ್ಯ: ಬೇಳೂರು ಗೋಪಾಲಕೃಷ್ಣರಿಂದ ಚಾಲನೆ

ರಿಪ್ಪನ್‌ಪೇಟೆ ಪಟ್ಟಣದ ನಾಲ್ಕು ರಸ್ತೆಗಳಿಗೆ ಬೆಳಕಿನ ಭಾಗ್ಯ: ಬೇಳೂರು ಗೋಪಾಲಕೃಷ್ಣರಿಂದ ಚಾಲನೆ “ಕೊಟ್ಟ ಮಾತಿನಂತೆ ವಿದ್ಯುತ್ ದೀಪ ಅಳವಡಿಸಿದ್ದೇನೆ” —…

13 hours ago

ರಿಪ್ಪನ್‌ಪೇಟೆಯಲ್ಲಿ 59ನೇ ವರ್ಷದ ಗಣಪತಿ ಪ್ರತಿಷ್ಠಾಪನಾ ಭವ್ಯ ಮೆರವಣಿಗೆ

ರಿಪ್ಪನ್‌ಪೇಟೆಯಲ್ಲಿ 59ನೇ ವರ್ಷದ ಗಣಪತಿ ಪ್ರತಿಷ್ಠಾಪನಾ ಭವ್ಯ ಮೆರವಣಿಗೆ Ripponpete celebrates the 59th annual Ganapati festival with…

15 hours ago

ಕಾಡುಪ್ರಾಣಿ ತಪ್ಪಿಸಲು ಹೋಗಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಕಾರು – ತಪ್ಪಿದ ಭಾರಿ ಅನಾಹುತ

ಕಾಡುಪ್ರಾಣಿ ತಪ್ಪಿಸಲು ಹೋಗಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಕಾರು – ತಪ್ಪಿದ ಭಾರಿ ಅನಾಹುತ A car crashed into…

2 days ago

ರಿಪ್ಪನ್‌ಪೇಟೆಯಲ್ಲಿ 59ನೇ ಗಣೇಶೋತ್ಸವಕ್ಕೆ ಭರದ ಸಿದ್ದತೆ : ಸೆ.14ರಿಂದ 11 ದಿನಗಳ ಸಾಂಸ್ಕೃತಿಕ ಸಂಭ್ರಮ

ರಿಪ್ಪನ್‌ಪೇಟೆಯಲ್ಲಿ 59ನೇ ಗಣೇಶೋತ್ಸವಕ್ಕೆ ಭರದ ಸಿದ್ದತೆ : ಸೆ.14ರಿಂದ 11 ದಿನಗಳ ಸಾಂಸ್ಕೃತಿಕ ಸಂಭ್ರಮ Rippanpete Ganeshotsava 2026: Karnataka…

2 days ago

ಹೊಸನಗರದಲ್ಲಿ ಸೆ.14ರಿಂದ 28ರವರೆಗೆ 8ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ: ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಿದ್ಧತೆ

ಹೊಸನಗರದಲ್ಲಿ ಸೆ.14ರಿಂದ 28ರವರೆಗೆ 8ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ: ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಿದ್ಧತೆ Hosanagara Hindu Mahasabha…

2 days ago

ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ

ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ Forest mobile squad seizes…

3 days ago