ರಿಪ್ಪನ್‌ಪೇಟೆ ಸಮೀಪದ ನೆವಟೂರಿನಲ್ಲಿ ಚಲಿಸುತಿದ್ದ ರೈಲಿಗೆ ಸಿಲುಕಿ ವ್ಯಕ್ತಿ ಸಾವು|train
ಚಲಿಸುತಿದ್ದ ರೈಲಿಗೆ ಸಿಲುಕಿ ವ್ಯಕ್ತಿಯೋರ್ವ ಮೃತಪಟ್ಟಿರುವ ಘಟನೆ ಇಂದು ಬೆಳಗ್ಗೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ನೆವಟೂರು ಗ್ರಾಮದಲ್ಲಿ ನಡೆದಿದೆ. ನೆವಟೂರು ನಿವಾಸಿ ಸುರೇಶ್ ಆಚಾರಿ (43) ಮೃತಪಟ್ಟ ವ್ಯಕ್ತಿಯಾಗಿದ್ದಾರೆ. ಇಂದು ಬೆಳಗ್ಗೆ 6 ಗಂಟೆಯ ಸುಮಾರಿಗೆ ನೆವಟೂರು ಬಳಿ ಈ ಘಟನೆ ನಡೆದಿದೆ ಎನ್ನಲಾಗುತಿದ್ದು ಯಾವ ರೈಲು ಹಾಗೂ ಘಟನೆಗೆ ಕಾರಣ ಏನೆಂಬುವುದು ತಿಳಿದುಬಂದಿಲ್ಲ. ಮೃತದೇಹವನ್ನು ಸಾಗರದ ಉಪವಿಭಾಗೀಯ ಆಸ್ಪತೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ ನೆವಟೂರಿನ ಮೃತರ ಮನೆಗೆ ರವಾನಿಸಲಾಗಿದೆ. ರೈಲ್ವೆ ಪೊಲೀಸರು ಸ್ಥಳಕ್ಕಾಗಮಿಸಿ ಪ್ರಕರಣ…