ಜನವಾರ್ತೆ ಪತ್ರಿಕೆಯ ಸಂಪಾದಕ ನಾಗರಾಜ್ ಇನ್ನಿಲ್ಲ
ಶಿವಮೊಗ್ಗ ಪತ್ರಿಕಾ ರಂಗದಲ್ಲಿ ಸಂಚಲನ ಮೂಡಿಸಿದ್ದ ಜನವಾರ್ತೆ ಕನ್ನಡ ದಿನಪತ್ರಿಕೆಯ ಸಂಪಾದಕರಾದ ಜಿ.ಎಸ್. ನಾಗರಾಜ್ ನಿಧನರಾಗಿದ್ದಾರೆ. ಕಳೆದ ಕೆಲವು ದಿನಗಳ ಹಿಂದೆ ನಡೆದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಬೆಂಗಳೂರಿನ ಖಾಸಗಿ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆಗೆ ಅವರು ಸ್ಪಂದಿಸದೇ ಇಂದು ಬೆಳಿಗ್ಗೆ ನಿಧನರಾಗಿದ್ದಾರೆ.. ಮುಂಗೋಪಿ, ಅಷ್ಟೇ ಮೃದು ಸ್ವಭಾವದ ನಾಗರಾಜ್ 1996 ರಲ್ಲಿ ಶಿವಮೊಗ್ಗ ಪತ್ರಿಕಾ ರಂಗದಲ್ಲಿ ಬದಲಾವಣೆ ತಂದು ಸಂಚಲನ ಮೂಡಿಸಿದ್ದ ಧೀಮಂತ ಪತ್ರಿಕಾ ಸಂಪಾದಕ ಹಾಗೂ ಸಂಸ್ಥಾಪಕರಾಗಿದ್ದರು. ಬಹುತೇಕ ಪತ್ರಕರ್ತರು ಇವರ…