ಹೊಂಬುಜಾ ಜಗನ್ಮಾತೆ ಪದ್ಮಾವತಿ ದರ್ಶನಾಶೀರ್ವಾದ ಪಡೆದ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ|hombuja
ರಿಪ್ಪನ್‌ಪೇಟೆ;-ರಾಜ್ಯದ ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ಮುಖಂಡ ಹೆಚ್.ಡಿ.ಕುಮಾರಸ್ವಾಮಿ ಇಂದು ಹೊಂಬುಜ ಜೈನಮಠದ ಜಗನ್ಮಾತೆ ಪದ್ಮಾವತಿ ದೇವಿಗೆ ವಿಶೇಷ ಪೂಜೆ ಸಲ್ಲಿಸಿ ದರ್ಶನಾಶಿರ್ವಾದ ಪಡೆದರು. ನಂತರ ಮಠದ ಜಗದ್ಗುರು ಡಾ.ಶ್ರೀಮದ್‌ದೇವೇಂದ್ರ ಕೀರ್ತಿ ಭಟ್ಟಾರಕ ಮಹಾಸ್ವಾಮಿಜಿಯವರನ್ನು ಭೇಟಿ ಮಾಡಿ ಸಮಾಲೋಚನೆ ನಡೆಸಿದರು. ಶ್ರೀಗಳು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರನ್ನು ಸನ್ಮಾನಿಸಿ ಅಶೀರ್ವದಿಸಿದರು. ಈ ಸಂದರ್ಭದಲ್ಲಿ ಈ ಸಂದರ್ಭದಲ್ಲಿ ತೀರ್ಥಹಳ್ಳಿ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಯಡೂರು ರಾಜಾರಾಮ್,ಎಂ.ಎಲ್.ಸಿ. ಬೋಜೆಗೌಡರು,ಜಿಲ್ಲಾ ಜೆಡಿಎಸ್ ಅಧ್ಯಕ್ಷ ಎಂ ಶ್ರೀಕಾಂತ್,ರಾಜ್ಯ ಜೆಡಿಎಸ್ ಪ್ರಧಾನ ಕಾರ್ಯದರ್ಶಿ ಆರ್.ಎ.ಚಾಬುಸಾಬ್, ತಾಲ್ಲೂಕ್…