ಫೆ.24 ರ ಶುಕ್ರವಾರ ಶ್ರೀಕ್ಷೇತ್ರ ಹೊಂಬುಜಾಕ್ಕೆ ಮಾಜಿ ಸಿಎಂ ಕುಮಾರಸ್ವಾಮಿ ಭೇಟಿ – ಹುಂಚದಕಟ್ಟೆಯಲ್ಲಿ ಗ್ರಾಮ ವಾಸ್ತವ್ಯ|JDS
ತೀರ್ಥಹಳ್ಳಿ : ಫೆ 23 ಮತ್ತು 24 ರಂದು ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್ ಪಂಚರತ್ನ ಯಾತ್ರೆ ನಡೆಯಲಿದ್ದು ಫೆ.24 ರ ಶುಕ್ರವಾರ ಶ್ರೀ ಕ್ಷೇತ್ರ ಹೊಂಬುಜಕ್ಕೆ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಭೇಟಿ ನೀಡಲಿದ್ದಾರೆ. ಫೆ.23 ರಂದು ಹುಂಚದಕಟ್ಟೆ ಗ್ರಾಮದಲ್ಲಿ ರಾತ್ರಿ ಗ್ರಾಮ ವಾಸ್ತವ್ಯ ಹೂಡಲಿರುವ ಮಾಜಿ ಸಿಎಂ ಕುಮಾರಸ್ವಾಮಿ ಶುಕ್ರವಾರ ಬೆಳಿಗ್ಗೆ ನಿಟ್ಟೂರು ನಾರಾಯಣ ಗುರು ಮಠಕ್ಕೆ ಭೇಟಿ ನೀಡಿ ನಂತರ ಹೊಂಬುಜಾ ಶ್ರೀಕ್ಷೇತ್ರಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಲಿದ್ದಾರೆ. ಕುಮಾರಸ್ವಾಮಿಯವರ ಪಂಚರತ್ನ ರಥಯಾತ್ರೆ ಸಾಗುವುದು…