Headlines

VISIL ಕಾಮಿಕರ ಪರವಾಗಿ ಜೈಲಿಗೆ ಹೋಗಲು ಸಿದ್ದ – ಹೆಚ್ ಡಿ ಕುಮಾರಸ್ವಾಮಿ

ಭದ್ರಾವತಿ : ವಿಐಎಸ್‌ಎಲ್ ವಿಷಯದಲ್ಲಿ ಕನ್ನಡಿಗರು ಇನ್ನೂ ಬದುಕಿದ್ದಾರೆ ಎಂದು ಕೇಂದ್ರಕ್ಕೆ ತಿಳಿಸುವ ಅಗತ್ಯ ಇದೆ.ಕಾರ್ಮಿಕರ ಪರವಾಗಿ ಜೈಲಿಗೆ ಹೋಗಲು ಸಿದ್ದ ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ಭದ್ರಾವತಿಯಲ್ಲಿ ಪ್ರತಿಭಟನಾ ನಿರತ ಗುತ್ತಿಗೆ ಕಾರ್ಮಿಕರಿಗೆ ಬೆಂಬಲ ವ್ಯಕ್ತಪಡಿಸಿ ಮಾತನಾಡಿದ್ದ ಕುಮಾರಸ್ವಾಮಿಯವರು, ಅಂದು 650 ಕೋಟಿ ವೆಚ್ಚ ಮಾಡಿ ಕಾರ್ಖಾನೆ ಅಭಿವೃದ್ಧಿಪಡಿಸುವ ನಿರ್ಧಾರ ತೆಗೆದುಕೊಳ್ಳಲಾಗಿತ್ತು.  ದೇವೇಗೌಡರು ಪ್ರಧಾನಿ ಆಗಿದ್ದಾಗ ವಿಐಎಸ್‌ಎಲ್ ಅನ್ನು ಸೈಲ್​ಗೆ ಹಸ್ತಾಂತರಿಸುವ ತೀರ್ಮಾನ ತೆಗೆದುಕೊಂಡರು. ಈ ವಿಷಯದಲ್ಲಿ ಮಾಜಿ ಶಾಸಕ ದಿವಂಗತ ಅಪ್ಪಾಜಿ ಗೌಡರ ಶ್ರಮ ಇದೆ  ನಿರ್ಗಮಿಸಿದ…

Read More

ಹುಲಿಕಲ್ ಘಾಟಿ ಎರಡು ತಿಂಗಳು ಬಂದ್ – ಪರ್ಯಾಯ ಮಾರ್ಗ ಇಲ್ಲಿದೆ ನೋಡಿ|hulikal ghat

ಶಿವಮೊಗ್ಗ – ಕುಂದಾಪುರ ರಾಜ್ಯ ಹೆದ್ದಾರಿಯ ಬಾಳೆಬರೆ(ಹುಲಿಕಲ್) ಘಾಟ್ ನಲ್ಲಿ ಕಾಂಕ್ರಿಟ್ ಪೇವ್ ಮೆಂಟ್ ನಿರ್ಮಿಸಲಾಗುತ್ತಿದೆ. ಈ ಹಿನ್ನೆಲೆ ಫೆಬ್ರವರಿ 5 ರಿಂದ ಏಪ್ರಿಲ್ 5ರವರೆಗೆ ವಾಹನ ಸಂಚಾರ ನಿಷೇಧಿಸಲಾಗಿದೆ. ಈ ಮಾರ್ಗದಲ್ಲಿ ಸಂಚರಿಸುವ ವಾಹನಗಳಿಗೆ ಬದಲಿ ಮಾರ್ಗ ಸೂಚಿಸಿ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಅವರು ಆದೇಶ ಹೊರಡಿಸಿದ್ದಾರೆ. ಯಾವೆಲ್ಲ ಬದಲಿ ಮಾರ್ಗ? ರಾಜ್ಯ ಹೆದ್ದಾರಿ 52ರಲ್ಲಿ ತೀರ್ಥಹಳ್ಳಿಯಿಂದ ಕುಂದಾಪುರ ಕಡೆಗೆ ಹೋಗುವ ಲಘು ವಾಹನಗಳು ತೀರ್ಥಹಳ್ಳಿ – ಹಾಲಾಡಿ – ಬಸ್ರೂರು – ಕುಂದಾಪುರ ರಸ್ತೆಗೆ ತಲುಪಬಹುದು….

Read More

ರಿಪ್ಪನ್‌ಪೇಟೆ : ಕಾರ್ಯಕರ್ತರನ್ನು ಭೇಟಿ ಮಾಡಿದ ಸಂಸದ ಬಿ ವೈ ರಾಘವೇಂದ್ರ – ಹೈಮಾಸ್ಕ್ ವಿದ್ಯುತ್ ದೀಪ ಅಳವಡಿಕೆಗೆ ವೀರೇಶ್ ಆಲುವಳ್ಳಿ ಮನವಿ|BYR

ರಿಪ್ಪನ್‌ಪೇಟೆ : ಪಟ್ಟಣದ ವಿನಾಯಕ ವೃತ್ತದಲ್ಲಿ ಇರುವ ಹೈಮಾಸ್ಕ್ ವಿದ್ಯುತ್ ದೀಪವನ್ನು ಉನ್ನತೀಕರಣಗೊಳಿಸುವಂತೆ ಸಂಸದ ಬಿ ವೈ ರಾಘವೇಂದ್ರ ರವರಿಗೆ ಹೊಸನಗರ ತಾಲೂಕ್ ಪಂಚಾಯತ್ ಮಾಜಿ ಅಧ್ಯಕ್ಷ ವೀರೇಶ್ ಆಲುವಳ್ಳಿ ಮನವಿ ಮಾಡಿದರು. ಕಾರ್ಯನಿಮಿತ್ತ ಬೈಂದೂರಿಗೆ ತೆರಳುತಿದ್ದ ಸಂಸದರು ವಿನಾಯಕ ವೃತ್ತದಲ್ಲಿ ಕಾರ್ಯಕರ್ತರು ಹಾಗೂ ಅಭಿಮಾನಿಗಳನ್ನು ಭೇಟಿ ಮಾಡಿದರು. ಈ ಸಂಧರ್ಭದಲ್ಲಿ ಸಂಸದರನ್ನು ಅಭಿನಂದಿಸಿದ ವೀರೇಶ್ ಆಲುವಳ್ಳಿ ಪಟ್ಟಣದ ವಿನಾಯಕ ವೃತ್ತದಲ್ಲಿ ಹೈಮಾಸ್ಕ್ ವಿದ್ಯುತ್ ದೀಪದ ಉನ್ನತೀಕರಣ ಹಾಗೂ ನಾಲ್ಕು ರಸ್ತೆಗಳಲ್ಲಿನ ಪ್ರಮುಖ ವೃತ್ತಗಳಾದ ಆಸ್ಪತ್ರೆ ವೃತ್ತ…

Read More

ರಿಪ್ಪನ್‌ಪೇಟೆ : ಬಾಳೂರು ಗ್ರಾಪಂ ನೂತನ ಅಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ಶಿವಮ್ಮ ಪದ್ಮನಾಭ ಆಯ್ಕೆ|baluru

ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಬಾಳೂರು ಗ್ರಾಮ ಪಂಚಾಯತಿ ನೂತನ ಅಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ಶಿವಮ್ಮ ಪಧ್ಮನಾಭ ರವರು ಆಯ್ಕೆಯಾಗಿದ್ದಾರೆ. ಕಳೆದ ಡಿ.14 ರಂದು ಬಿಜೆಪಿ ಬೆಂಬಲಿತರಾಗಿದ್ದ ಬಾಳೂರು ಗ್ರಾಪಂ ಅಧ್ಯಕ್ಷೆ ಲೀಲಾವತಿ ದೊಡ್ಡಯ್ಯ ವೈಯಕ್ತಿಕ ಕಾರಣಗಳಿಂದ ರಾಜೀನಾಮೆ ನೀಡಿದ್ದರು.ಈ ಹಿನ್ನಲೆಯಲ್ಲಿ ತೆರವಾಗಿದ್ದ ಅಧ್ಯಕ್ಷ ಸ್ಥಾನಕ್ಕೆ ನಡೆದ ಆಯ್ಕೆ ಪ್ರಕ್ರಿಯೆಯ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಶಿವಮ್ಮ ಪದ್ಮನಾಭ ಜಯಭೇರಿ ಬಾರಿಸುವ ಮೂಲಕ ಬಿಜೆಪಿಗೆ ಭಾರಿ‌ ಮುಖಭಂಗವಾಗಿದೆ. 9 ಜನ ಸದಸ್ಯರಲ್ಲಿ ಕಾಂಗ್ರೆಸ್ ಬೆಂಬಲಿತ ಶಿವಮ್ಮ ಪದ್ಮನಾಭ ರವರು…

Read More

ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಉದ್ಯೋಗಾವಕಾಶ – ಈ ಸುಳ್ಳು ಜಾಹಿರಾತನ್ನು ನಂಬಿ ಅರ್ಜಿ ಸಲ್ಲಿಸಬೇಡಿ|FAKE

 ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಉದ್ಯೋಗಿಗಳು ಬೇಕಾಗಿದ್ದಾರೆ ಎಂದು ಸಾಮಾಜಿಕ ಜಾಲತಾಣದಲ್ಲಿ ಜಾಹೀರಾತು ಓಡಾಡುತ್ತಿದೆ. ಇದನ್ನು ನಂಬಿ ಯಾರಾದರೂ ಅರ್ಜಿ ಸಲ್ಲಿಸಿದ್ದರೆ, ಸಲ್ಲಿಸಬೇಕು ಎಂದಿದ್ದರೆ ಹುಷಾರಾಗಿರಿ. ಏಕೆಂದರೆ ಇದು ನಕಲಿ ಪ್ರಕಟಣೆ ಎಂಬ ಸಂಗತಿ ಗೊತ್ತಾಗಿದೆ. ಈ ಬಗ್ಗೆ ಸಾರ್ವಜನಿಕರು ಎಚ್ಚರವಹಿಸಬೇಕೆಂದು ಜಿಲ್ಲಾ ರಕ್ಷಣಾಧಿಕಾರಿಗಳು ಸ್ಪಷ್ಟನೆ ನೀಡಿದ್ದಾರೆ. ವಿಮಾನ ನಿಲ್ದಾಣ ಕಾಮಗಾರಿ ಪೂರ್ಣಗೊಂಡಿದ್ದು, ವಿಮಾನ ನಿಲ್ದಾಣದಲ್ಲಿ ಏರ್ ಹೋಸ್ಟೆಸ್, ಬಿಸಿನೆಸ್ ಡೆವಲೆಪ್‍ಮೆಂಟ್ ಮ್ಯಾನೇಜರ್, ಏರ್‌ಲೈನ್ ಎಕ್ಸಿಕ್ಯೂಟಿವ್, ಸೆಕ್ಯೂರಿಟಿ ಗಾರ್ಡ್, ಹೆಲ್ಪರ್ಸ್, ಕ್ಲೀನರ್ಸ್, ಟೀಂ ಮೆಂಬರ್ಸ್ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ….

Read More

ಆಗುಂಬೆ ಘಾಟಿಯಲ್ಲಿ ಕ್ಯಾಂಟರ್ ಲಾರಿ ಅಪಘಾತ – ಟ್ರಾಫಿಕ್ ಜಾಮ್ ನಿಂದ ಪರದಾಡಿದ ಪ್ರಯಾಣಿಕರು|agumbe

ಆಗುಂಬೆ ಘಾಟಿಯಲ್ಲಿ ಕ್ಯಾಂಟರ್ ಅಪಘಾತ –  ಟ್ರಾಫಿಕ್ ಜಾಮ್ ತೀರ್ಥಹಳ್ಳಿ: ತಾಲೂಕಿನ ಆಗುಂಬೆ ಘಾಟಿಯಲ್ಲಿ ಕ್ಯಾಂಟರ್ ಲಾರಿ ಅಪಘಾತಕ್ಕಿಡಾಗಿದ್ದು ಘಾಟಿ ಸಂಚಾರದಲ್ಲಿ ಕಿ.ಮಿ.ಗಟ್ಟಲೇ ವಾಹನಗಳು ಗಂಟೆಗಟ್ಟಲೇ ನಿಂತು ಭಾರೀ ಸಮಸ್ಯೆಗೆ ಕಾರಣವಾಯಿತು. ಘಾಟಿಯ 9ನೇ ತಿರುವಿನಲ್ಲಿ ಘಾಟಿ ಇಳಿಯುತ್ತಿದ್ದ ವೇಳೆ ಕ್ಯಾಂಟರ್ ಚಾಲಕನ ನಿಯಂತ್ರಣ ತಪ್ಪಿ ತಡೆಗೋಡೆಗೆ ಲಾರಿ ಡಿಕ್ಕಿ ಹೊಡೆದಿದೆ. ಯಾವುದೇ ಅನಾಹುತ ಸಂಭವಿಸಿಲ್ಲ.  ಆದರೆ ಉಡುಪಿ ಭಾಗದಿಂದ ಹಾಗೂ ತೀರ್ಥಹಳ್ಳಿ ಮಾರ್ಗದಿಂದ ಹೋಗಿ ಬರುತಿದ್ದ ವಾಹನ ಸವಾರರು ಮತ್ತು ಪ್ರಯಾಣಿಕರು ಗಂಟೆಗಟ್ಟಲೆ ಪರದಾಟ ನಡೆಸಿದರು.

Read More

ಗರ್ತಿಕೆರೆಯಲ್ಲಿ ವ್ಯಕ್ತಿಯೊಬ್ಬನಿಗೆ ಕೆಎಪ್ ಡಿ (ಮಂಗನ ಖಾಯಿಲೆ) ಪತ್ತೆ ಶಂಕೆ!!|KFD

ಶಿವಮೊಗ್ಗ ಜಿಲ್ಲೆಯ ಹೊಸನಗರ  ತಾಲೂಕಿನ ಗರ್ತಿಕೆರೆಯ ವ್ಯಕ್ತಿಯೊಬ್ಬರಿಗೆ ಮಂಗನ ಕಾಯಿಲೆ ಸೋಂಕು ಕಾಣಿಸಿಕೊಂಡ ಶಂಕೆ ವ್ಯಕ್ತವಾಗಿದೆ. ಇವರಿಗೆ ಶಿವಮೊಗ್ಗದ ಖಾಸಗಿ ಆಸ್ಪತ್ರೆಯಲ್ಲಿ  ಚಿಕಿತ್ಸೆ ನೀಡಲಾಗುತ್ತಿದೆ. ಇವರಿಗೆ 45 ವರ್ಷ ಎಂದು ಹೇಳಲಾಗಿದೆ. ಜ.26 ರಂದು ವಿಪರೀತ ಜ್ವರದ ಹಿನ್ನಲೆಯಲ್ಲಿ ಆಸ್ಪತ್ರೆಗೆ ದಾಖಲಾದ ಇವರಿಗೆ ಕಳೆದ ನಾಲ್ಕೈದು ದಿನಗಳಿಂದ ಜ್ವರ ಕಡಿಮೆ ಆಗಿರಲಿಲ್ಲ. ನಿನ್ನೆ ಆರ್ ಟಿ ಪಿ ಸಿಆರ್ ಪರೀಕ್ಷೆಗೆ ಒಳಪಡಿಸಲಾಗಿತ್ತು. ಆರ್ ಟಿ ಪಿ ಸಿಆರ್ ಪರೀಕ್ಷೆಯಲ್ಲಿ ಕೆಎಫ್ ಡಿ ನೆಗೆಟಿವ್ ಬಂದಿದೆ. ಆರ್ ಟಿ…

Read More

ಕೊಳೆತ ಸ್ಥಿತಿಯಲ್ಲಿದ್ದ ಅನಾಥ ವೃದ್ದನ ಅಂತ್ಯಕ್ರಿಯೆ ನೆರವೇರಿಸಿದ ರಿಪ್ಪನ್‌ಪೇಟೆ ಗ್ರಾಮಾಡಳಿತ|funeral

ಕೊಳೆತ ಸ್ಥಿತಿಯಲ್ಲಿದ್ದ ಅನಾಥ ವೃದ್ದನ ಶವ ಸಂಸ್ಕಾರ ನೆರವೇರಿಸಿದ ರಿಪ್ಪನ್‌ಪೇಟೆ ಗ್ರಾಮ ಪಂಚಾಯತ್ ರಿಪ್ಪನ್‌ಪೇಟೆ : ಪಟ್ಟಣದ ತೀರ್ಥಹಳ್ಳಿ ರಸ್ತೆಯ ಬೆಟ್ಟಿನಕೆರೆ ಗ್ರಾಮದ ಮನೆಯೊಂದರಲ್ಲಿ ವಾರಸುದಾರರಿಲ್ಲದ ಕೊಳೆತ ಸ್ಥಿತಿಯಲ್ಲಿದ್ದ ವೃದ್ದನೊಬ್ಬನ ಅಂತ್ಯಕ್ರಿಯೆ ಯನ್ನು ಗ್ರಾಮಾಡಳಿತದ ವತಿಯಿಂದ ನೆರವೇರಿಸಲಾಯಿತು. ಪಟ್ಟಣದ ಬೆಟ್ಟಿನಕೆರೆ ಗ್ರಾಮದಲ್ಲಿ ಕಳೆದ ಹಲವಾರು ವರ್ಷಗಳಿಂದ ಒಬ್ಬಂಟಿಯಾಗಿ ವಾಸ ಮಾಡುತಿದ್ದ ಜೋಸ್ (68) ಎಂಬ ವ್ಯಕ್ತಿಯ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿತ್ತು.ಈತನು ನಾಲ್ಕೈದು ದಿನಗಳ ಹಿಂದೆಯೇ ಮೃತಪಟ್ಟಿದ್ದನು ಎನ್ನಲಾಗುತ್ತಿದೆ. ಇಂದು ಬೆಳಿಗ್ಗೆ ಜೋಸ್ ಮೃತಪಟ್ಟಿರುವ ವಿಷಯ ತಿಳಿಯುತಿದ್ದಂತೆ…

Read More

ಗಾಂಜಾ ಸೇವಿಸಿ ಅಸಭ್ಯವಾಗಿ ವರ್ತಿಸುತಿದ್ದ ಇಬ್ಬರು ಯುವಕರ ಬಂಧನ|arrest

ಶಿವಮೊಗ್ಗ ಜಿಲ್ಲೆಯ ಹೊಸನಗರ ಪಟ್ಟಣ ಪಂಚಾಯತಿ ವ್ಯಾಪ್ತಿಯ ಮಾರಿಗುಡ್ಡದ ಹೆಲಿಪ್ಯಾಡ್ ಬಳಿ ಇಬ್ಬರು ಗಾಂಜಾ ಸೇವನೆ ಮಾಡಿ ಅಸಭ್ಯವಾಗಿ ವರ್ತಿಸುತ್ತಿದ್ದು ಈ ಆರೋಪಿಗಳನ್ನು ಹೊಸನಗರ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಟ್ಟೆಮಲ್ಲಪ ಗ್ರಾಮದ ಫಯಾಜ್ ಬಿನ್ ಕರೀಂ ಸಾಬ್ ಹಾಗೂ ಮೊಹಮ್ಮದ್ ತಾಯಿಜ್ ಬಿನ್ ಮೊಹಮ್ಮದ್ ಎಂಬುವವರನ್ನು ಬಂಧಿಸಲಾಗಿದೆ. ಹೊಸನಗರ ಪೊಲೀಸ್ ಠಾಣೆಯಲ್ಲಿ ಸಬ್ ಇನ್ಸ್‌ಪೆಕ್ಟರ್ ನೀರರಾಜ್ ನರಲಾರರವರ ಆದೇಶದ ಮೇರೆಗೆ ಪೊಲೀಸ್ ಸಿಬ್ಬಂದಿಗಳು ಕೇಸ್ ದಾಖಲಿಸಿಕೊಂಡು ತನಿಖೆ ಕಾರ್ಯ ಕೈಗೊಂಡಿದ್ದಾರೆ.

Read More

ಸ್ಮಶಾನದಲ್ಲಿದ್ದ ಸುಟ್ಟ ಶವದ ಬೂದಿ ಮಂಗಮಾಯ : ಕಂಗಾಲಾದ ಕುಟುಂಬಸ್ಥರು !!!!ಹೀಗೊಂದು ವಿಚಿತ್ರ ಘಟನೆ|TTH

ಸ್ಮಶಾನದಲ್ಲಿದ್ದ ಸುಟ್ಟ ಶವದ ಬೂದಿ ಮಂಗಮಾಯ: ಕಂಗಾಲಾದ ಕುಟುಂಬಸ್ಥರು ! ತೀರ್ಥಹಳ್ಳಿ : ತಾಲೂಕಿನ ಮೇಲಿನಕುರುವಳ್ಳಿ ಗ್ರಾಮಪಂಚಾಯಿತಿ ವ್ಯಾಪ್ತಿಯ ಬುಕ್ಲಾಪುರ ಸಮೀಪದ ಹೊರಬೈಲಿನ ಸ್ಮಶಾನದಲ್ಲಿ ಸುಟ್ಟ ಶವದ  ಬೂದಿಯನ್ನು ಹಾಗೂ ಸ್ಮಶಾನದಲ್ಲಿದ್ದ ಕಬ್ಬಿಣದ ರಾಡ್‌ನ್ನು ಯಾರೋ ಕದ್ದೊಯ್ದ ವಿಚಿತ್ರ ಘಟನೆ ನಡೆದಿದೆ. ಪಟ್ಟಣದ ಸಮೀಪವಿರುವ ಹೊರಬೈಲಿನ ಗಂಗಾಧರೇಶ್ವರ ಸ್ಮಶಾನದಲ್ಲಿ 3 ದಿನದ ಹಿಂದೆ ಊರಿನ ಮಹಿಳೆಯೊಬ್ಬರ ಶವವನ್ನು ಸಂಸ್ಕಾರ ಮಾಡಲಾಗಿತ್ತು. ಮಾರನೇ ದಿನ ಕುಟುಂಬದವರು ಸ್ಮಶಾನದಲ್ಲಿ ಅಳಿದುಳಿದ ಕಟ್ಟಿಗೆ ಕೊಳ್ಳಿಯನ್ನು ದೂಡುವ ಪದ್ಧತಿಯಂತೆ ಕಟ್ಟಿಗೆಯನ್ನು ಮುಂದೆ ಹಾಕಿ…

Read More
Exit mobile version