Headlines

ಮಧ್ಯ ರಸ್ತೆಯಲ್ಲಿ ಧಗಧಗನೇ ಹೊತ್ತಿ ಉರಿದ ಕಾರು|fire

ಭದ್ರಾವತಿ : ನಡು ರಸ್ತೆಯಲ್ಲೇ ಕಾರೊಂದು ಹೊತ್ತಿ ಉರಿದಿದೆ. ಶಿವಮೊಗ್ಗದ ಭದ್ರಾವತಿಯ ಬೈಪಾಸ್ ರಸ್ತೆಯಲ್ಲಿ ಈ  ಘಟನೆ ನಡೆದಿದೆ.  ಭದ್ರಾವತಿ ಉಜ್ಜನೀಪುರದ ಹೊಳೆ ಬ್ರಿಡ್ಜ್ ಸಮೀಪ ರಸ್ತೆಯಲ್ಲಿ ಚಲಿಸುತ್ತಿದ್ದ ಕಾರು ಹೊತ್ತಿ ಉರಿದಿದೆ. ಭದ್ರಾವತಿಯ ಓಲ್ಡ್ ಟೌನ್ ನಿವಾಸಿ ಶ್ರೀಕಾಂತ್ ಎಂಬುವವರಿಗೆ ಈ  ಕಾರು ಸೇರಿದೆ. ಕಾರಿನಲ್ಲಿ ಹೊಗೆ ಕಾಣಿಸಿಕೊಂಡಿದೆ. ತಕ್ಷಣವೇ ಕಾರಿನಿಂದ ಇಳಿದು, ಅಗ್ನಿಶಾಮಕ ಅಧಿಕಾರಿಗಳಿಗೆ ಶ್ರೀಕಾಂತ್ ಮಾಹಿತಿ ನೀಡಿದ್ದಾರೆ. ತಕ್ಷಣವೇ ಆಗಮಿಸಿ, ಬೆಂಕಿ ನಂದಿಸಿದ ಅಗ್ನಿಶಾಮಕ ಅಧಿಕಾರಿ- ಸಿಬ್ಬಂದಿ ಬೆಂಕಿಯನ್ನ ಆರಿಸಲು ಯತ್ನಿಸಿದ್ದಾರೆ.  ಕಾರಿನ…

Read More

ಅಕ್ರಮ ಗ್ಯಾಸ್ ರೀಫಿಲ್ಲಿಂಗ್ ಅಡ್ಡೆಯ ಮೇಲೆ ದಾಳಿ – ಓರ್ವನ ಬಂಧನ|arrest

ಶಿವಮೊಗ್ಗ : ಅಕ್ರಮ ಗ್ಯಾಸ್ ರೀಫಿಲ್ಲಿಂಗ್ ಅಡ್ಡೆಯ ಮೇಲೆ ವಿನೋಬ ನಗರ ಪೊಲೀಸರು ದಾಳಿ ನಡೆಸಿ ಎರಡು ಡೊಮೆಸ್ಟಿಕ್ ಗ್ಯಾಸ್ ಸಿಲಿಂಡರ್, ಎರಡು 3 ಕೆಜಿಯ ಸಿಲಿಂಡರ್, ರೀಫಿಲ್ಲಿಂಗ್ ರಾಡು ಪೈಪ್ ಗಳನ್ನ ವಶಪಡಿಸಿಕೊಳ್ಳಲಾಗಿದೆ ಓರ್ವನನ್ನ‌ ಬಂಧಿಸಲಾಗಿದೆ. ವಿನೋಬ ನಗರದ 5 ನೇ ತಿರುವಿನಲ್ಲಿ ಬಸವೇಶ್ವರ ಎಂಟರ್ ಪ್ರೈಸಸ್ ನಲ್ಲಿ ಪರವಾನಗಿ ಇಲ್ಲದೆ ಸಾರ್ವಜನಿಕವಾಗಿ ಗ್ಯಾಸ್ ರೀಫಿಲಿಂಗ್ ಮಾಡುತ್ತಿದ್ದ ಜಾಗದ ಮೇಲೆ ಪಿಐ ರವಿಕುಮಾರ್ ನೇತೃತ್ವದಲ್ಲಿ ದಾಳಿ ನಡೆದಿದೆ. ಸಣ್ಣ ಪೈಪ್ ಮೂಲಕ ದೊಡ್ಡ ಸಿಲಿಂಡರ್ ನಿಂದ…

Read More

ಚಿರತೆ ಉಗುರು ಅಕ್ರಮ ಮಾರಾಟಕ್ಕೆ ಯತ್ನ – ಮಾಲು ಸಮೇತ ಆರೋಪಿ ಬಂಧನ|leopard

ಅಕ್ರಮವಾಗಿ ಚಿರತೆಯ ಉಗುರು ಮಾರಾಟ ಮಾಡಲು ಯತ್ನಿಸುತಿದ್ದ ವೇಳೆ ಖಚಿತ ಮಾಹಿತಿ ಹಿನ್ನಲೆಯಲ್ಲಿ ದಾಳಿ ನಡೆಸಿ ಮಾಲು ಸಮೇತ ಆರೋಪಿಯನ್ನು ಪೊಲೀಸ್ ಅರಣ್ಯ ಸಂಚಾರಿ ದಳ ವಶಪಡಿಸಿಕೊಂಡ ಘಟನೆ ಶಿವಮೊಗ್ಗದ ಆಯುರ್ವೇದಿಕ್ ಮೆಡಿಕಲ್ ಕಾಲೇಜ್ ಬಳಿ ನಡೆದಿದೆ. ಖಚಿತ ಮಾಹಿತಿಯನ್ನು ಆಧರಿಸಿ ಶಿವಮೊಗ್ಗದ ಆಯುರ್ವೇದಿಕ್ ಮೆಡಿಕಲ್ ಕಾಲೇಜ್ ಬಳಿ ದಾಳಿ ನಡೆಸಿದ ಪೊಲೀಸ್ ಅರಣ್ಯ ಸಂಚಾರಿ ದಳ ಅಕ್ರಮವಾಗಿ ಚಿರತೆ ಉಗುರನ್ನು ಮಾರಾಟ ಮಾಡಲು ಯತ್ನಿಸುತಿದ್ದ ಸಿದ್ದಾಪುರ ನಿವಾಸಿ ಗಣಪತಿ ಬಿನ್ ಲಕ್ಷಣನಾಯ್ಕ್ ಎಂಬಾತನನ್ನು ಬಂಧಿಸಿ ಆರೋಪಿಯಿಂದ…

Read More

ರಿಪ್ಪನ್‌ಪೇಟೆ : ನವೀಕರಣಗೊಳ್ಳುತಿದ್ದ ದೇವಸ್ಥಾನದ ಕಟ್ಟಡ ಧ್ವಂಸ – ಪ್ರಕರಣ ದಾಖಲು|Crime

ರಿಪ್ಪನ್‌ಪೇಟೆ : ಇಲ್ಲಿನ ಮೂಗುಡ್ತಿ ಗ್ರಾಮದಲ್ಲಿ ಕುಟುಂಬವೊಂದಕ್ಕೆ ಸಂಬಂದಿಸಿದ ನವೀಕರಣಗೊಳ್ಳುತಿದ್ದ ದೇವಸ್ಥಾನದ ಕಟ್ಟಡವನ್ನು ಕಿಡಿಗೇಡಿಗಳು ಧ್ವಂಸ ಮಾಡಿ ಸಂಬಂದಪಟ್ಟವರಿಗೆ ಜೀವ ಬೆದರಿಕೆ ಹಾಕಿರುವ ಘಟನೆ ನಡೆದಿದ್ದು ರಿಪ್ಪನ್‌ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೂಗುಡ್ತಿ ಗ್ರಾಮದ ಪವನ್ ಕುಮಾರ್ ಎಂಬುವವರು ತಮ್ಮ ಜಾಗದಲ್ಲಿ ಮನೆ ದೇವರಾದ ಪಂಜುರ್ಲಿ ಹಾಯ್ ಗುಳಿ ಮತ್ತು ಮರ್ಲುಚಿಕ್ಕು ದೇವರುಗಳನ್ನು ಹಲವಾರು ವರ್ಷಗಳಿಂದ ಆರಾಧನೆ ಮಾಡಿಕೊಂಡು ಬರುತ್ತಿದ್ದು ಇತ್ತೀಚಿಗೆ ದೇವರ ಅಣತಿಯಂತೆ ನೂತನ ಕಟ್ಟಡವನ್ನು ಲಕ್ಷಾಂತರ ರೂ ವೆಚ್ಚ ಮಾಡಿ ನಿರ್ಮಿಸಲಾಗುತಿತ್ತು.ಇನ್ನೂ ಹದಿನೈದು…

Read More

ಜ.30 ರಂದು ಶಿರಾಳಕೊಪ್ಪ ಬಂದ್ ಗೆ ಹಿಂದೂ ಜಾಗರಣ ವೇದಿಕೆ ಕರೆ – ಬಂದ್ ವಿರೋಧಿಸಿ ಠಾಣೆ ಮುಂದೆ ಧರಣಿ ನಡೆಸಲು ಮುಂದಾದ ಅಂಜುಮನ್ ಇಸ್ಲಾಂ ಕಮಿಟಿ|

ಶಿವಮೊಗ್ಗ ಜಿಲ್ಲೆ ಶಿಕಾರಿಪುರ ತಾಲ್ಲೂಕು ಶಿರಾಳಕೊಪ್ಪದಲ್ಲಿ ನಾಳೆ ಹಿಂದೂ ಜಾಗರಣಾ ವೇದಿಕೆ ಬಂದ್ಗೆ ಕರೆಕೊಟ್ಟಿದೆ. ಈ ಸಂಬಂಧ ನಿನ್ನೆ ಸುದ್ದಿಗೋಷ್ಟಿ ಸಹ ನಡೆಸಿದೆ. ಜ.30ರಂದು ಬೆಳಗ್ಗೆ 6ರಿಂದ ಸಂಜೆ 6 ಗಂಟೆವರೆಗೆ ಶಿರಾಳಕೊಪ್ಪ ಬಂದ್‌ ನಡೆಸಲಾಗುವುದು ಎಂದು ಮಾಹಿತಿ ನೀಡಿದೆ. ಪೊಲೀಸರ ದೌರ್ಜನ್ಯ ಮತ್ತು ಶಿರಾಳಕೊಪ್ಪದಲ್ಲಿ ಹಿಂದೂಗಳು ಅಲ್ಪಸಂಖ್ಯಾತರಾಗುತ್ತಿದ್ದು ಹಿಂದೂಗಳ ಮೇಲೆ ದೌರ್ಜನ್ಯ ಹೆಚ್ಚಾಗುತ್ತಿದೆ ಎಂದು ಆರೋಪಿಸಿ ಹಿಂದೂ ಜಾಗರಣ ವೇದಿಕೆ(ಹಿಂಜಾವೇ)  ಶಿರಾಳಕೊಪ್ಪ ಬಂದ್ ಗೆ ಕರೆಕೊಟ್ಟಿರುವುದು ಹಲವು ಕುತೂಹಲಕ್ಕೆ ಕಾರಣವಾಗಿದೆ. ಬಂದ್ ನಿಮಿತ್ತ ಸ್ವಯಂ ಘೋಷಿತ…

Read More

ಯುವತಿಯ ಮೇಲೆ ಲೈಂಗಿಕ ದೌರ್ಜನ್ಯ..!!! ತೀರ್ಥಹಳ್ಳಿಯ ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ,57 ಸಾವಿರ ದಂಡ ವಿಧಿಸಿ ಕೋರ್ಟ್ ಆದೇಶ

2019 ನೇ ಸಾಲಿನಲ್ಲಿ 26 ವರ್ಷದ ಯುವತಿಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿರುವ ಬಗ್ಗೆ ನೊಂದ ಯುವತಿಯ ತಾಯಿ ನೀಡಿದ್ದರು. ಈ ದೂರಿನ ಮೇರೆಗೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯ ಪೊಲೀಸ್​ ಠಾಣೆಯೊಂದರಲ್ಲಿ ಪ್ರಕರಣ ದಾಖಲಿಸಲಾಗಿತ್ತು. ಸದ್ಯ ಪ್ರಕರಣದ ತೀರ್ಪು ಹೊರಬಿದ್ದಿದೆ.  11111 ಸಂಬಂಧ  ತನಿಖಾಧಿಕಾರಿಗಳಾದ ಜಿ.ವಿ. ಗಣೇಶಪ್ಪ, ಪೊಲೀಸ್ ವೃತ್ತ ನಿರೀಕ್ಷಕರು, ತೀರ್ಥಹಳ್ಳಿ ವೃತ್ತ (ಹಾಲಿ ನಿವೃತ್ತಿ) ರವರು ಪ್ರಕರಣದ ತನಿಖೆ ಕೈಗೊಂಡು ಆರೋಪಿತನ ವಿರುದ್ಧ  ನ್ಯಾಯಾಲಯಕ್ಕೆ ದೋಷಾರೋಪಣ ಪತ್ರವನ್ನು ಸಲ್ಲಿಸಿದ್ದರು. ಪ್ರಕರಣದ ವಿಚಾರಣೆ 3ನೇ ಹೆಚ್ಚುವರಿ ಜಿಲ್ಲಾ…

Read More

ರಿಪ್ಪನ್‌ಪೇಟೆ : ಸರ್ಕಾರಿ ಬಿಸಿಎಂ ಮಹಿಳಾ ಹಾಸ್ಟೆಲ್ ನಲ್ಲಿ ಬಿಜೆಪಿ ಪಕ್ಷದಿಂದ ಸದಸ್ಯತ್ವ ಅಭಿಯಾನ ಆರೋಪ – ಕಾಂಗ್ರೆಸ್ ಪಕ್ಷದಿಂದ ಪ್ರತಿಭಟನೆ|protest

ರಿಪ್ಪನ್‌ಪೇಟೆ : ಪಟ್ಟಣದ ಬಿಸಿಎಂ ವಿದ್ಯಾರ್ಥಿನಿಯರ ವಸತಿಗೃಹದಲ್ಲಿ ಬಿಜೆಪಿ ಪಕ್ಷದ ವಿಜಯ ಸಂಕಲ್ಪ ಅಭಿಯಾನದಡಿಯಲ್ಲಿ ಸದಸ್ಯತ್ವ ನೋಂದಣಿ ಮಾಡಿದ್ದಾರೆ ಎಂದು ಆರೋಪಿಸಿ ರಿಪ್ಪನ್‌ಪೇಟೆ ಕಾಂಗ್ರೆಸ್ ಘಟಕದ ವತಿಯಿಂದ ಹಾಸ್ಟೆಲ್ ಮುಂಭಾಗದಲ್ಲಿ ಪ್ರತಿಭಟನೆ ನಡೆಸಲಾಯಿತು. ಸಾಮಾಜಿಕ ಜಾಲತಾಣದಲ್ಲಿ “ಭಾರತೀಯ ಜನತಾ ಪಕ್ಷ ಹೊಸನಗರ ಮಂಡಲ ಮಹಿಳಾ ಮೋರ್ಚ ವಿಜಯ ಸಂಕಲ್ಪ ಅಭಿಯಾನ ದಿನಾಂಕ 27 ರ ಶುಕ್ರವಾರ ರಿಪ್ಪನ್‌ಪೇಟೆಯ ಬಿಸಿಎಂ ಹಾಸ್ಟೆಲ್ ನಲ್ಲಿ ಬಿಜೆಪಿ ಸದಸ್ಯತ್ವ ನೋಂದಣಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.ಹಾಗೂ ಸುಮಾರು 31 ಸದಸ್ಯತ್ವ ನೋಂದಣಿ ಮಾಡಿಸಲಾಯಿತು” ಎಂಬ…

Read More

ಇಂದಿನ ಕಾಲಘಟ್ಟದಲ್ಲಿ ಮಾದ್ಯಮಗಳು ನಿಖರ ಸುದ್ದಿ ಮತ್ತು ಜ್ಞಾನವನ್ನು ಪ್ರಸರಿಸುವ ಕಾರ್ಯ ನಿರ್ವಹಿಸಬೇಕಾಗಿದೆ – ಹರತಾಳು ಹಾಲಪ್ಪ|sagara

ಸಾಗರ : ಸರ್ಕಾರದ ನಾಲ್ಕು ಅಂಗಗಳಲ್ಲಿ ನಾಲ್ಕನೆಯ ಅಂಗವಾದ ಮಾದ್ಯಮ ರಂಗಕ್ಕೆ ತನ್ನದೇ ಆದ ವಿಶೇಷ ಮಹತ್ವವಿದೆ. ಈಗಿನ ಕಾಲಘಟ್ಟದಲ್ಲಿ ಮಾದ್ಯಮಗಳು ನಿಖರ ಸುದ್ದಿ ಮತ್ತು ಜ್ಞಾನವನ್ನು ಪ್ರಸರಿಸುವ ಕಾರ್ಯವನ್ನು ಕೈಗೊಳ್ಳಬೇಕಾಗಿದೆ ಎಂದು ಸಾಗರ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಎಂಎಸ್ ಐಎಲ್ ಅಧ್ಯಕ್ಷ ಹರತಾಳು ಹಾಲಪ್ಪ ಹೇಳಿದರು. ಪಟ್ಟಣದ ಗಾಂಧಿ ಮೈದಾನದಲ್ಲಿ ಮಲೆನಾಡು ರಹಸ್ಯ ವಾರಪತ್ರಿಕೆ ,ಸುದ್ದಿಮನೆ ಹಾಗೂ ಗ್ಲೋಬಲ್ ಡಿಜಿಟಲ್ ಮೀಡಿಯಾ ಆಯೋಜಿಸಿದ್ದ ವಾರ್ಷಿಕ ಸಂಭ್ರಮಾ‍ಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಸ್ಥಳೀಯ ಸಮಸ್ಯೆಗಳನ್ನು…

Read More

ಯುವಕನ ಮೇಲೆ ಪೊಲೀಸರಿಂದ ಹಲ್ಲೆ – ಮನನೊಂದು ಆತ್ಮಹತ್ಯೆಗೆ ಯತ್ನಿಸಿದ ಯುವಕ|assault

ಶಿಕಾರಿಪುರ : ಪೊಲೀಸರು ಯುವಕನ‌ ಮೇಲೆ ಹಲ್ಲೆ ನೆಡೆಸಿದ್ದಾರೆ ಎಂದು ಮನನೊಂದು ಯುವಕ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ತಾಲೂಕಿನ ಅರಶಿಣಗೆರೆಯಲ್ಲಿ ನೆಡೆದಿದೆ.   ಅರಶಿಣಗೆರೆ ಸಚ್ಚಿನ್‌ (24) ವಿಷ ಸೇವಿಸಿದ ಯುವಕ. ಕಳೆದ ಎರಡು ದಿನಗಳ ಹಿಂದೆ ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಯುವಕನ ಮೇಲೆ ಏಕಾಏಕಿ ಪೊಲೀಸರು ಹಲ್ಲೆ ಮಾಡಿದ್ದೂ ಊರಿನ ಜನರ ಮುಂದೆ ಅವಮಾನ ಸಹಿಸದೆ ಯುವಕ ಸಚಿನ್ ವಿಷ ಸೇವನೆ ಮಾಡಿದ್ದಾನೆ. ವಿಷಯ ತಿಳಿದ ತಕ್ಷಣ ಶಿಕಾರಿಪುರದ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಿ ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗದ…

Read More

ಹೊಸನಗರ ಜಾತ್ರೆಯ ಮೆರುಗು ಹೆಚ್ಚಿಸಿದ ಶಾಲಾ ಮಕ್ಕಳ ಸಾಂಸ್ಕೃತಿಕ ಕಾರ್ಯಕ್ರಮ ವೈಭವ|fare

ಹೊಸನಗರ :ಮೈ ಮನ ತಣಿಸುವ ನೃತ್ಯ ವೈಭವ ಕಾರ್ಯಕ್ರಮ, ಮನಕ್ಕೆ ಮುದ ನೀಡುವ ಪುಟ್ಟ ಪುಟಾಣಿಗಳ, ಚಿಣ್ಣರ ಹಾಡು ,ನೃತ್ಯಗಳು. ಹೌದು ಈ ಸುಂದರ ಕಾರ್ಯಕ್ರಮವು ಹೊಸನಗರದ ಶ್ರೀ ಮಾರಿಕಾಂಬಾ ಜಾತ್ರೆಯಲ್ಲಿ ಅದ್ದೂರಿಯಿಂದ ಸಾವಿರಾರು ಜನಗಳ ಸಮ್ಮುಖದಲ್ಲಿ ನಡೆದಿದ್ದು,ಹೊಸನಗರ ಜಾತ್ರೆಯ ಮೆರಗನ್ನು ಇನ್ನಷ್ಟು ಹೆಚ್ಚಿಸಿದೆ!! ಏಕೆಂದರೆ ಕಳೆದ ಬಾರಿ ಅದೇ ವೇದಿಕೆಯಲ್ಲಿ ನಡೆದಂತಹ ಕಾರ್ಯಕ್ರಮಗಳು ಸಾರ್ವಜನಿಕ ವಲಯದಲ್ಲಿ ಸಾಕಷ್ಟು ಚರ್ಚೆಗೆ ಗ್ರಾಸವಾಗಿದ್ದು, ವಿರೋಧ ಸಹ ಕೇಳಿ ಬಂದಿತ್ತು,ಅದು ದೊಡ್ಡ ಮಟ್ಟದಲ್ಲಿ ಸುದ್ದಿಯಾಗಿ ವಿರೋಧದ ಅಲೆಯೇ ಎದ್ದಿತ್ತು.. ಆದರೆ…

Read More