ಹೊಸನಗರ ಮಾರಿಕಾಂಬಾ ಜಾತ್ರಾ ಮಹೋತ್ಸವಕ್ಕೆ ಅದ್ದೂರಿ ಚಾಲನೆ – ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ಭಾಗಿ|faire
ಹೊಸನಗರ : ಇಲ್ಲಿನ ದ್ಯಾವರ್ಸದಲ್ಲಿರುವ ದುರ್ಗಾಂಬಾ ದೇವಸ್ಥಾನದ ಆವರಣದಲ್ಲಿ ಮಂಗಳವಾರ ಅದ್ದೂರಿ ಮಾರಿಕಾಂಬಾ ಜಾತ್ರಾ ಮಹೋತ್ಸವಕ್ಕೆ ಚಾಲನೆ ನೀಡಲಾಗಿದ್ದು ಬೆಳಿಗ್ಗೆ 9 ಗಂಟೆಯಿಂದ ಪೂಜಾ ಕಾರ್ಯ ಆರಂಭವಾಗಿದೆ. ಬೆಳಿಗ್ಗೆ 8ಗಂಟೆಗೆ ಹೊಸನಗರದ ಗಣಪತಿ ದೇವಸ್ಥಾನದ ಮುಂಭಾಗ ಮಾರಿಯಮ್ಮನವರ ಮೂರ್ತಿಗೆ ಗಣಪತಿ ದೇವರಿಗೆ ಪೂಜೆ ಸಲ್ಲಿಸಿದ ನಂತರ ಮಾರಿಯಮ್ಮನವರಿಗೆ ಕೃಷ್ಣಮೂರ್ತಿ ಭಟ್ ಮತ್ತು ಸಹೋದರರಿಂದ ಪೂಜೆ ಸಲ್ಲಿಸಿ ಶಿವಪ್ಪನಾಯಕ ರಸ್ತೆಯ ಮಾರ್ಗವಾಗಿ ಶ್ರೀ ದುರ್ಗಾಂಬಾ ದೇವಸ್ಥಾನಕ್ಕೆ ಮೆರವಣಿಗೆಯ ಮೂಲಕ ತೆಗೆದುಕೊಂಡು ಹೋಗಿ ಅಲ್ಲಿ ಪೂಜೆ ಸಲ್ಲಿಸಿ ನಂತರ ಸಾರ್ವಜನಿಕ…