10ನೇ ತರಗತಿಯ ವಿದ್ಯಾರ್ಥಿ ಹೃದಯಾಘಾತದಿಂದ ಸಾವು
10ನೇ ತರಗತಿಯ ವಿದ್ಯಾರ್ಥಿ ಹೃದಯಾಘಾತದಿಂದ ಸಾವು ಸೊರಬ : ಹೃದಯಾಘಾತದಿಂದ 10ನೇ ತರಗತಿಯ ವಿದ್ಯಾರ್ಥಿ ಮೃತಪಟ್ಟ ಘಟನೆ ತಾಲೂಕಿನ ಎಣ್ಣೆಕೊಪ್ಪ ಗ್ರಾಮದಲ್ಲಿ ನಡೆದಿದೆ. 10ನೇ ತರಗತಿ ವಿದ್ಯಾರ್ಥಿ ಜಯಂತ್ ರಜತಾದ್ರಯ್ಯ ಮೃತ ದುರ್ದೈವಿ. ಆನವಟ್ಟಿ ಜೂನಿಯರ್ ಕಾಲೇಜಿನಲ್ಲಿ ಓದುತ್ತಿದ್ದ ಜಯಂತ್ ಬೆಳಗ್ಗೆ ಶಾಲೆಗೆ ತೆರಳುವ ಸಂದರ್ಭದಲ್ಲಿ ಮೃತಪಟ್ಟಿದ್ದಾನೆ. ಜಯಂತ್ ಎಂದಿನಂತೆ ಬೆಳಗ್ಗೆ ಎದ್ದು ಶಾಲೆಗೆ ಹೋಗಲು ಮನೆಯಲ್ಲಿ ರೆಡಿಯಾಗುತ್ತಿದ್ದ ವೇಳೆಯಲ್ಲಿ ಎದೆ ನೋವು ಕಾಣಿಸಿಕೊಂಡಿದೆ. ತಕ್ಷಣವೇ ಜಯಂತ್ನನ್ನು ಎಣ್ಣೆಕೊಪ್ಪ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ದಾಖಲಿಸಲಾಗಿದೆ. ಆದರೆ ಅಷ್ಟೊತ್ತಿಗಾಗಲೇ…