ಹೊಸ ಕಲ್ಲುಕ್ವಾರೆಗೆ ಅವಕಾಶ ಬೇಡ : ಎಸಿಗೆ ಮನವಿ|iruvakki
ಹೊಸ ಕಲ್ಲುಕ್ವಾರೆಗೆ ಅವಕಾಶ ಬೇಡ; ಎಸಿಗೆ ಮನವಿ ಸಾಗರ : ತಾಲ್ಲೂಕಿನ ಇರುವಕ್ಕಿ ಆಸುಪಾಸು ಹೊಸ ಕಲ್ಲುಕ್ವಾರೆಗೆ ಅವಕಾಶ ನೀಡದಂತೆ ಗ್ರಾಮಸ್ಥರು ಶಾಸಕ ಗೋಪಾಲಕೃಷ್ಣ ಬೇಳೂರಿಗೆ ಹಾಗೂ ಉಪವಿಭಾಗಾಧಿಕಾರಿಗಳಿಗೆ ಮನವಿ ಸಲ್ಲಿಸಿದರು. ಇರುವಕ್ಕಿ ಗ್ರಾಮದ ಸ.ನಂ. 30 ಮತ್ತು 31ರಲ್ಲಿ ಹೊಸ ಕಲ್ಲುಕ್ವಾರೆ ಪ್ರಾರಂಭಿಸುವ ಬಗ್ಗೆ ವ್ಯಾಪಕ ಚರ್ಚೆ ನಡೆಯುತ್ತಿರುವುದು ಗ್ರಾಮಸ್ಥರ ಆತಂಕಕ್ಕೆ ಕಾರಣವಾಗಿದೆ. ಕಲ್ಲುಕ್ವಾರೆಗೆ ಪ್ರಸ್ತಾಪಿಸಿರುವ ಜಾಗದ ವ್ಯಾಪ್ತಿಯಲ್ಲಿಯೆ ಕೃಷಿ ಮತ್ತು ತೋಟಗಾರಿಕಾ ವಿಶ್ವವಿದ್ಯಾಲಯ ಬರುತ್ತದೆ. ಶರಾವತಿ ನದಿಯ ಉಪನದಿಯ ದಂಡೆ ಇದಾಗಿದ್ದು, ಕೃಷಿಗೆ ನೀರು…