Headlines

ಸಿಇಟಿ ಪರೀಕ್ಷೆಯಲ್ಲಿ ಅದ್ವಿತೀಯ ಸಾಧನೆಗೈದ ರಿಪ್ಪನ್‌ಪೇಟೆಯ ಶಂಕರ್ ಪಟೇಲ್|CET

ರಿಪ್ಪನ್‌ಪೇಟೆ : ಸಿಇಟಿ ಪರೀಕ್ಷೆಯಲ್ಲಿ ಪಟ್ಟಣದ ಸಾಗರ ರಸ್ತೆಯ ಯುವಕ ಶಂಕರ್ ಪಟೇಲ್ 976 ನೇ ರ‍್ಯಾಂಕ್‌ ಉತ್ತಮ ಸಾಧನೆಗೈದಿದ್ದಾನೆ. ವೃತ್ತಿಪರ ಕೋರ್ಸ್‌ಗಳ ಪ್ರವೇಶಾತಿಗಾಗಿ ಕರ್ನಾಟಕ ಪರೀಕ್ಷ ಪ್ರಾಧಿಕಾರ (ಕೆಇಎ) ನಡೆಸಿದ ʻಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆʼಯ (KCET 2023) ಫಲಿತಾಂಶ (KCET 2023 Result) ಪ್ರಕಟವಾಗಿದ್ದು ಕಾರ್ಕಳದ ಜ್ಞಾನ ಸುಧಾ ಕಾಲೇಜಿನ ಶಂಕರ್ ಪಟೇಲ್ 976ನೇ ರ‍್ಯಾಂಕ್‌ ಪಡೆದು ಉತ್ತಮ ಸಾಧನೆಗೈದಿದ್ದಾರೆ. ಪಟ್ಟಣದ ಉದ್ಯಮಿ ಕೆ ಎಂ ಉಮೇಶ್ ಮತ್ತು ರಾಜೇಶ್ವರಿ ದಂಪತಿಗಳ ಪುತ್ರ ಶಂಕರ್…

Read More

ವಿದ್ಯಾಸಂಸ್ಥೆಗಳು ನೈತಿಕ ಶಿಕ್ಷಣ ನೀಡಿ – ಧರ್ಮಸ್ಥಳ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗಡೆ|NES

ಎನ್.ಇ.ಎಸ್ ಹಬ್ಬದಲ್ಲಿ ಧರ್ಮಸ್ಥಳ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗಡೆ ಅಭಿಮತ ವಿದ್ಯಾಸಂಸ್ಥೆಗಳು ನೈತಿಕ ಶಿಕ್ಷಣ ನೀಡಿ ಶಿವಮೊಗ್ಗ : ನಮಗೆ ಶಿಕ್ಷಣ ನೀಡುವ ವಿದ್ಯಾಸಂಸ್ಥೆಗಳು ಶೈಕ್ಷಣಿಕತೆಯ ಜೊತೆಗೆ ನೈತಿಕ ಶಿಕ್ಷಣಕ್ಕೆ ಹೆಚ್ಚು ಪ್ರಾಧಾನ್ಯತೆ ನೀಡಿ ಎಂದು ಧರ್ಮಸ್ಥಳ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗಡೆ ಅಭಿಪ್ರಾಯಪಟ್ಟರು. ಬುಧವಾರ ನಗರದ ಎನ್ಇಎಸ್ ಮೈದಾನದಲ್ಲಿ ಏರ್ಪಡಿಸಿದ್ದ ರಾಷ್ಟ್ರೀಯ ಶಿಕ್ಷಣ ಸಮಿತಿಯ ಅಮೃತಮಹೋತ್ಸವ ಸಮಾರೋಪ ಸಮಾರಂಭದ ‘ಎನ್.ಇ.ಎಸ್ ಹಬ್ಬ’ ಸಮಾರೋಪ ಮಾತುಗಳನ್ನಾಡಿದರು. ವಿದ್ಯಾಸಂಸ್ಥೆಗಳಲ್ಲಿ ನೈತಿಕ ಶಿಕ್ಷಣ ನೀಡುವ ಕುರಿತು ಸರ್ಕಾರ ಹೆಚ್ಚು ಚಿಂತನೆ‌ ನಡೆಸಬೇಕಿದೆ. ನೈತಿಕ…

Read More

ಸಾಗರದಲ್ಲಿನ ಸರ್ಕಾರಿ ವಿದ್ಯಾರ್ಥಿ ನಿಲಯಗಳಿಗೆ ಅರ್ಜಿ ಆಹ್ವಾನ|Application

ಸಾಗರ : 2023-24 ಸಾಲಿಗೆ ಸಮಾಜ ಕಲ್ಯಾಣ ಇಲಾಖೆ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಮೆಟ್ರಿಕ್ ನಂತರದ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯಗಳಿಗೆ ಅರ್ಜಿ ಆಹ್ವಾನಿಸಿದೆ. ಪಿ.ಯು.ಸಿ ಮತ್ತು ಪಿ.ಯು.ಸಿ ಸಮಾನಾಂತರ ಕೋರ್ಸಿನ ವಿದ್ಯಾರ್ಥಿಗಳು ಹೊಸದಾಗಿ ಪ್ರವೇಶ ಬಯಸುವ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಹಾಗೂ ಪ್ರವರ್ಗ-1, 2ಎ, 2ಬಿ, 3ಎ, 3ಬಿ ಮತ್ತು ಇತರೆ ಜನಾಂಗಗಳಿಗೆ ಸೇರಿದ ವಿದ್ಯಾರ್ಥಿಗಳು ರಾಜ್ಯ ವಿದ್ಯಾರ್ಥಿನಿಲಯದ ತಂತ್ರಾಂಶ http://shp.karnataka.gov.in ರಲ್ಲಿ ಜು.16 ರೊಳಗಾಗಿ ಅರ್ಜಿಯನ್ನು ಸಲ್ಲಿಸಿ ಅಗತ್ಯ ದಾಖಲೆಗಳೊಂದಿಗೆ ಕಚೇರಿಗೆ…

Read More

ಹೊಸನಗರ-ತೀರ್ಥಹಳ್ಳಿ ತಾಲೂಕಿನ ಗ್ರಾಪಂ ಅಧ್ಯಕ್ಷ,ಉಪಾಧ್ಯಕ್ಷ ಮೀಸಲಾತಿ ಪ್ರಕಟ : ಎಲ್ಲೆಲ್ಲಿ ಯಾರ್ಯಾರು? ವಿವರ ಇಲ್ಲಿದೆ ನೋಡಿ|GPM

ಹೊಸನಗರ ತಾಲ್ಲೂಕಿನಲ್ಲಿ ಒಟ್ಟು 30 ಗ್ರಾಮ ಪಂಚಾಯಿತಿಗಳ 2 ನೇ ಅವಧಿಗೆ ಅಧ್ಯಕ್ಷ ಉಪಾಧ್ಯಕ್ಷ ಮೀಸಲಾತಿಯನ್ನು ಪ್ರಕಟಿಸಲಾಗಿದೆ. ಈ ಸಂಬಂಧ ಇಲ್ಲಿನ ಗಾಯತ್ರಿ ಮಂದಿರದಲ್ಲಿ ಜಿಲ್ಲಾಧಿಕಾರಿ ಡಾ.ಆರ್​ ಸೆಲ್ವಮಣಿ, ಮೀಸಲಾತಿಯನ್ನು ಪ್ರಕಟಿಸಿದ್ದಾರೆ.  ಯಾವ ಪಂಚಾಯಿತಿಗೆ ಯಾವ ಮೀಸಲಾತಿ ಮಾಹಿತಿ ಇಲ್ಲಿದೆ ಗ್ರಾಮ ಪಂಚಾಯಿತಿ ಹೆಸರು – ಅಧ್ಯಕ್ಷ – ಉಪಾಧ್ಯಕ್ಷ ಹುದ್ದೆ  1-ರಿಪ್ಪನ್‌ ಪೇಟೆ- ಸಾಮಾನ್ಯ ಮಹಿಳೆ, ಹಿಂದುಳಿದ ವರ್ಗಎ, 2-ಪರುಪ್ಪೆಮನೆ-ಹಿಂದುಳಿದ ವರ್ಗ ಎ ಮಹಿಳೆ, ಸಾಮಾನ್ಯ,  3-ಹರತಾಳು -ಸಾಮಾನ್ಯ ಮಹಿಳೆ, ಸಾಮಾನ್ಯ,  4-ಮಾರುತಿಪುರ- ಸಾಮಾನ್ಯ ಮಹಿಳೆ,…

Read More

ಅಪ್ರಾಪ್ತನಿಗೆ ಬೈಕ್ ಕೊಟ್ಟ ತಪ್ಪಿಗೆ ಬೈಕ್ ಮಾಲೀಕನಿಗೆ 20 ಸಾವಿರ ರೂ. ದಂಡ

ಅಪ್ರಾಪ್ತನಿಗೆ ಬೈಕ್ ಕೊಟ್ಟ ತಪ್ಪಿಗೆ ಬೈಕ್ ಮಾಲೀಕನಿಗೆ 20 ಸಾವಿರ ರೂ. ದಂಡ ತೀರ್ಥಹಳ್ಳಿ : ಹೆಲ್ಮೆಟ್ ಧರಿಸದೆ, ಡ್ರೈವಿಂಗ್ ಲೈಸೆನ್ಸ್ ಇಲ್ಲದೆ ಬೈಕ್ ಸವಾರಿ ಮಾಡುತ್ತಿದ್ದ ಅಪ್ರಾಪ್ತ ಯುವಕನ ಪ್ರಕರಣದಲ್ಲಿ ನ್ಯಾಯಾಲಯ ಬೈಕ್ ಮಾಲೀಕನಿಗೆ 20 ಸಾವಿರ ರೂ. ದಂಡ ವಿಧಿಸಿದೆ. 17 ವರ್ಷದ ಯುವಕ ಹೆಲ್ಮೆಟ್ ಧರಿಸದೆ, ಲೈಸೆನ್ಸ್ ಇಲ್ಲದೆ ಬೈಕ್ ಚಲಾಯಿಸುತ್ತಿದ್ದ. ತೀರ್ಥಹಳ್ಳಿ ಪೊಲೀಸರು ಸೋಮವಾರ ತಪಾಸಣೆ ಮಾಡುವಾಗ ಯುವಕ ಸಿಕ್ಕಿಬಿದ್ದಿದ್ದಾನೆ. ಕೊನೆಗೆ ಸಂಚಾರ ನಿಯಮ ಉಲ್ಲಂಘನೆ, ಅಪ್ರಾಪ್ತ ಯುವಕನಿಗೆ ಬೈಕ್ ನೀಡಿದ…

Read More

ಬೈಕ್ ಅಪಘಾತದಲ್ಲಿ LLB ವಿದ್ಯಾರ್ಥಿ ಸ್ಥಳದಲ್ಲಿಯೇ ಸಾವು

ಶಿವಮೊಗ್ಗ: ಕಾಲೇಜು ಕಾರ್ಯಕ್ರಮದ ಸಿದ್ಧತೆ ಪೂರ್ಣಗೊಳಿಸಿ ಮನೆಕಡೆ ಹೊರಟಿದ್ದ ವಿದ್ಯಾರ್ಥಿಯೊಬ್ಬ ಬೈಕ್‌ ಅಪಘಾತಕ್ಕೀಡಾಗಿ ಸ್ಥಳದಲ್ಲೇ ಮೃತಪಟ್ಟ ಘಟನೆ ನಗರದ 60 ಅಡಿ ರಸ್ತೆಯಲ್ಲಿ ಸಂಭವಿಸಿದೆ. ಮೃತ ವಿದ್ಯಾರ್ಥಿ ಗೌತಮ್‌ (21) ಎಂದು ಗುರುತಿಸಲಾಗಿದೆ. ಬೆಳಗಿನ ಜಾವ 4 ಗಂಟೆ ಹೊತ್ತಿಗೆ ಈ ಘಟನೆ ಸಂಭವಿಸಿದೆ. ಕಾಲೇಜಿನ ಕಾರ್ಯಕ್ರಮದ ಸಿದ್ಧತೆ ಪೂರ್ಣಗೊಳಿಸಿ ಕಾಶಿಪುರದಲ್ಲಿರುವ ಮನೆಗೆ ತೆರಳುತ್ತಿದ್ದಾಗ ಘಟನೆ ಸಂಭವಿಸಿದೆ. ನಡೆದಿದ್ದೇನು??? ಇವತ್ತು ಬೆಳಗ್ಗಿನ ಜಾವ ನಾಲ್ಕು ಗಂಟೆ ಸುಮಾರಿಗೆ ಈ ಘಟನೆ ಸಂಭವಿಸಿದೆ. ನಗರದ ಶುಭಮಂಗಳದ ಬಳಿಯಲ್ಲಿ ಗೌತಮ್​…

Read More

ರಿಪ್ಪನ್‌ಪೇಟೆ : ಅಶ್ಲೀಲ ವೀಡಿಯೋ ವೈರಲ್ ಪ್ರಕರಣ – ಆರೋಪಿಯ ವಿರುದ್ದ ಸೂಕ್ತ ಕಠಿಣ ಕ್ರಮ ಕೈಗೊಳ್ಳುವಂತೆ ಮನವಿ|protest

ರಿಪ್ಪನ್‌ಪೇಟೆ : 16-06-2023 ರಂದು ವಾಟ್ಸಪ್ ಗ್ರೂಫ್‌ಗಳಲ್ಲಿ ತೀರ್ಥಹಳ್ಳಿಯ ಪ್ರತಿಷ್ಠಿತ ಕಾಲೇಜು ಯುವತಿಯರ ಅಶ್ಲೀಲ ನಗ್ನ ಚಿತ್ರಗಳನ್ನು ಹರಿಬಿಡಲಾಗಿದ್ದು, ವಿಡಿಯೋದಲ್ಲಿ ABVP ವಿದ್ಯಾರ್ಥಿ ಸಂಘಟನೆಯ ತೀರ್ಥಹಳ್ಳಿ ಘಟಕದ ಅಧ್ಯಕ್ಷನೂ ಕೂಡ ಇದ್ದು ಯಾವುದೇ ರಾಜಕೀಯ ಒತ್ತಡಕ್ಕೆ ಮಣಿಯದೆ ಆತನ ವಿರುದ್ಧ ಕಾನೂನು ಕಠಿಣ ಕ್ರಮ ಜರುಗಿಸುವಂತೆ ರಿಪ್ಪನ್‌ಪೇಟೆ ಕಾಂಗ್ರೆಸ್ ಘಟಕದ ವತಿಯಿಂದ ನಾಡ ಕಛೇರಿಯಲ್ಲಿ ಉಪ ತಹಶೀಲ್ದಾರ್ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು. ಸಂಘಟನೆಗೆ ಸದಸ್ಯತ್ವ ಆಮಿಷ ತೋರಿಸಿ, ವೀಡಿಯೋ ಮಾಡಿ ದೇಹದ ನಗ್ನ ದೃಶ್ಯಗಳನ್ನು ಅಶ್ಲೀಲವಾಗಿ…

Read More

ಹೊಂಬುಜ ಸ್ವಸ್ತಿಶ್ರೀಗಳವರ ವಿದೇಶ ವಿಹಾರ|hombuja

ಹೊಂಬುಜ : ಅಮೇರಿಕಾದ ಕೆನಡಾದ ಟೊರಂಟೋ ನಗರದ ಜಿನಮಂದಿರದಲ್ಲಿ 24 ತೀರ್ಥಂಕರರ ಭವ್ಯ ಪಂಚಕಲ್ಯಾಣ ಪ್ರತಿಷ್ಠಾ ಮಹೋತ್ಸವದ ಧಾರ್ಮಿಕ ವಿಧಿ-ವಿಧಾನಗಳ ನೇತೃತ್ವ, ದಿವ್ಯ ಮಾರ್ಗದರ್ಶನ ನೀಡಲು ಹೊಂಬುಜ ಅತಿಶಯ ಶ್ರೀಕ್ಷೇತ್ರ ಜೈನ ಮಠದ ಪರಮಪೂಜ್ಯ ಜಗದ್ಗುರು ಸ್ವಸ್ತಿಶ್ರೀ ಡಾ. ದೇವೇಂದ್ರಕೀರ್ತಿ ಭಟ್ಟಾರಕ ಮಹಾಸ್ವಾಮೀಜಿಗಳವರು ವಿದೇಶ ವಿಹಾರಕ್ಕಾಗಿ ತೆರಳಿದರು.  ಪಟ್ಟಾಭಿಷಿಕ್ತರಾಗಿ 11 ವರ್ಷದ ಬಳಿಕ ಶ್ರೀಗಳವರು ಪ್ರಥಮ ಬಾರಿಗೆ ವಿದೇಶದಲ್ಲಿ ಜಿನಧರ್ಮ ಪ್ರಭಾವನೆಯ ಪ್ರವಚನಗಳನ್ನು ನೀಡಲಿರುವರು. ಜೂ. 24 ರಿಂದ 28ರವರೆಗೆ ಟೊರಂಟೋ ಜಿನಮಂದಿರದ ಪಂಚಕಲ್ಯಾಣ ವಿಧಾನಗಳಿವೆ. ಹೊಂಬುಜ…

Read More

ವಿವಾಹಿತ ಮಹಿಳೆ ಕಾಣೆ – ಪತ್ತೆಗೆ ಮನವಿ|missing

ಶಿವಮೊಗ್ಗ : ದೊಡ್ಡಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯ ಶ್ರೀರಾಮನಗರ ಬಡಾವಣೆ 3ನೇ ಕ್ರಾಸ್, ಕರುಮಾರಿಯಮ್ಮ ದೇವಸ್ಥಾನದ ಹತ್ತಿರದ ವಾಸಿ ರಮೇಶಪ್ಪ  ಎಂಬುವವರ ಪತ್ನಿ 30 ವರ್ಷದ ಅನಿತಾ ಎಂಬ ಮಹಿಳೆ ಜೂನ್ 15 ರಂದು ಕಾಣೆಯಾಗಿದ್ದು, ಈವರೆಗೂ ಪತ್ತೆಯಾಗಿರುವುದಿಲ್ಲ.  ಈಕೆಯ ಚಹರೆ 5.0 ಅಡಿ ಎತ್ತರ, ಎಣ್ಣೆಕೆಂಪು ಮೈಬಣ್ಣ, ಸಾಧಾರಣಾ ಮೈಕಟ್ಟು ಹೊಂದಿದ್ದು, ಬಲಗೈನಲ್ಲಿ ನವಿಲುಗರಿ ಟ್ಯಾಟು ಇರುತ್ತದೆ. ಕನ್ನಡ ಭಾಷೆ ಮಾತನಾಡುತ್ತಾಳೆ. ಮೆರೂನ್ ಕಲರ್ ಟಾಪ್ ಮತ್ತು ಗೋಲ್ಡ್ ಕಲರ್ ಪ್ಯಾಂಟ್ ಧರಿಸಿರುತ್ತಾಳೆ.   ಈಕೆಯ ಸುಳಿವು…

Read More

ತೀರ್ಥಹಳ್ಳಿ: ಬ್ಯಾಂಗಲ್ ಸ್ಟೋರ್ ಅಂಗಡಿಯಲ್ಲಿ ಬೆಂಕಿ ಅವಘಡ – ಲಕ್ಷಾಂತರ ರೂ ನಷ್ಟ|FIRE

ಬ್ಯಾಂಗಲ್ ಸ್ಟೋರ್ ಅಂಗಡಿಯಲ್ಲಿ ಬೆಂಕಿ ಅವಘಡ – ಲಕ್ಷಾಂತರ ರೂ ನಷ್ಟ ತೀರ್ಥಹಳ್ಳಿ : ಪಟ್ಟಣದ ಕೊಪ್ಪ ಸರ್ಕಲ್ ನಲ್ಲಿರುವ ಕಲ್ಪವೃಕ್ಷ ಹೋಟೆಲ್ ಪಕ್ಕದಲ್ಲಿರುವ ಬ್ಯಾಂಗಲ್ ಸ್ಟೋರ್ ನಲ್ಲಿ ಶಾರ್ಟ್  ಸರ್ಕ್ಯೂಟ್ನಿಂದ ಬೆಂಕಿ ಹತ್ತಿಕೊಂಡಿದ್ದು ಅಂಗಡಿ ಒಳಗೆ ಇದ್ದ ಹಲವು ಸಾಮಗ್ರಿಗಳು ಬೆಂಕಿಗೆ ಅನಾಹುತವಾಗಿದೆ. ವಯಸ್ಸಾದ ವೃದ್ದೆಯಾದ ಲಕ್ಷ್ಮಿ ಎಂಬುವರು ಅಂಗಡಿ ನೆಡೆಸಿ ಜೀವನ ನೆಡೆಸುತ್ತಿದ್ದರು. ಅಂಗಡಿ ಬಾಗಿಲು ಹಾಕಿ ಬ್ಯಾಂಕ್ ಗೆ ಹೋಗಿದ್ದಾಗ ಈ ಘಟನೆ ಜರುಗಿದೆ.2 ಲಕ್ಷ ರೂ ಮೌಲ್ಯದ ಸಾಮಗ್ರಿಗಳು ಬೆಂಕಿಗೆ ಅನಾಹುತ…

Read More