ಮನೆಯ ಕೊಟ್ಟಿಗೆಯಲ್ಲಿ ಅಡಗಿ ಕುಳಿತಿದ್ದ ಚಿರತೆ – ಅರಣ್ಯಾಧಿಕಾರಿಗಳಿಂದ ಯಶಸ್ವಿ ರಕ್ಷಣಾ ಕಾರ್ಯಾಚರಣೆ|leopard
ಸೊರಬ: ತಾಲೂಕಿನ ಕುಪ್ಪೆ ಗ್ರಾಮದ ಮನೆಯೊಂದರ ಕೊಟ್ಟಿಗೆಯಲ್ಲಿ ಅಡಗಿದ್ದ ಚಿರತೆಯನ್ನು ಅರಣ್ಯ ಇಲಾಖೆಯ ಅಧಿಕಾರಿಗಳು ಸುರಕ್ಷಿತವಾಗಿ ಸೆರೆ ಹಿಡಿದಿದ್ದಾರೆ. ಗ್ರಾಮದ ಶಿವಕುಮಾರ್ ಗೌಡ ಎಂಬುವವರ ಮನೆಯ ಕೊಟ್ಟಿಗೆಯಲ್ಲಿ ಚಿರತೆ ಸೇರಿದ್ದು, ಗಮನಿಸಿದ ಮನೆಯವರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ. ಕೂಡಲೇ ಕಾರ್ಯಪ್ರವೃತರಾದ ಅರಣ್ಯ ಇಲಾಖೆಯ ಅಧಿಕಾರಿಗಳು ಚಿರತೆಯನ್ನು ಅರವಳಿಕೆ ಚುಚ್ಚುಮದ್ದು ನೀಡುವ ಮೂಲಕ ಸುರಕ್ಷಿತವಾಗಿ ಸೆರೆಹಿಡಿಯುವಲ್ಲಿ ಸಫಲರಾಗಿದ್ದಾರೆ. ಚಿರತೆಗೆ ಗಾಯಗಳಾಗಿದ್ದು, ಪ್ರಾಥಮಿಕ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗೆ ಹಂಪೆಯ ಅಟಲ್ ಬಿಹಾರಿ ವಾಜಪೇಯಿ ಮೃಗಾಲಯಕ್ಕೆ ಕಳುಹಿಸಿಕೊಡಲಾಗಿದೆ. ಕಾರ್ಯಾಚರಣೆಯಲ್ಲಿ…