ರಿಪ್ಪನ್‌ಪೇಟೆ : ಕುವೆಂಪು ವಿಶ್ವವಿದ್ಯಾನಿಲಯ 2022-23ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ನಡೆಸಿದ ಅಂತಿಮ ಪದವಿ ಪರೀಕ್ಷೆಗಳಲ್ಲಿ ರಿಪ್ಪನ್‌ಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿನಿ ನಾಲ್ಕನೇ ರ‍್ಯಾಂಕ್ ಪಡೆದಿದ್ದಾರೆ.
ಕುವೆಂಪು ವಿಶ್ವವಿದ್ಯಾಲಯದಿಂದ ಸೆಪ್ಟೆಂಬರ್/ಅಕ್ಟೋಬರ್ 2023 ರಲ್ಲಿ ನಡೆದ ಪರೀಕ್ಷೆಯಲ್ಲಿ ಪ್ರಥಮ ದರ್ಜೆ ಕಾಲೇಜಿನ ಅಂತಿಮ ಬಿಬಿಎ ವಿಭಾಗದ ವಿದ್ಯಾರ್ಥಿನಿಯಾದ ಕುಮಾರಿ ಸಿಂಧು ಕೆ. ಇವರು ಶೇ. 93.71% ಅಂಕ ಗಳಿಸಿ ನಾಲ್ಕನೇ ರ‍್ಯಾಂಕ್ ಪಡೆದಿರುತ್ತಾರೆ.
ಹರತಾಳು ಗ್ರಾಮದ ಕಣ್ಣನ್ ಮತ್ತು ಅಂಬಿಕಾ ದಂಪತಿಯ ಪುತ್ರಿಯಾದ ಸಿಂಧು ಕೆ ನಾಲ್ಕನೇ ರ‍್ಯಾಂಕ್ ಪಡೆಯುವ ಮೂಲಕ ಅಭೂತಪೂರ್ವ ಸಾಧನೆಗೈದಿದ್ದಾರೆ.
ಕುವೆಂಪು ವಿಶ್ವವಿದ್ಯಾಲಯದ ರ‍್ಯಾಂಕ್ ಪಡೆದ ರಿಪ್ಪನ್‌ಪೇಟೆ ಪದವಿ ಕಾಲೇಜಿನ ಪ್ರತಿಭಾನ್ವಿತ ವಿದ್ಯಾರ್ಥಿನಿಗೆ ಶಾಸಕರು ಹಾಗೂ ಕಾಲೇಜು ಅಭಿವೃದ್ಧಿ ಸಮಿತಿ ಅಧ್ಯಕ್ಷರಾದ ಬೇಳೂರು ಗೋಪಾಲಕೃಷ್ಣ ,ಕಾಲೇಜು ಅಭಿವೃದ್ಧಿ ಸಮಿತಿ,ಪ್ರಾಂಶುಪಾಲರು ಮತ್ತು ಉಪನ್ಯಾಸಕ ವೃಂದ ಹಾಗೂ ಹಳೆ ವಿದ್ಯಾರ್ಥಿಗಳ ಸಮಿತಿಯವರು ಅಭಿನಂದನೆಗಳನ್ನು ತಿಳಿಸಿದ್ದಾರೆ.
ಕುವೆಂಪು ವಿಶ್ವವಿದ್ಯಾಲಯದಲ್ಲಿ ಬಿಬಿಎ ವಿಭಾಗದಲ್ಲಿ ನಾಲ್ಕನೇ ರ‍್ಯಾಂಕ್ ಪಡೆದ ಕುಮಾರಿ ಸಿಂಧು ಕೆ ರವರಿಗೆ ಪೋಸ್ಟ್ ಮ್ಯಾನ್ ಸುದ್ದಿ ಬಳಗದಿಂದ ಅಭಿನಂದನೆಗಳು.
ರಿಪ್ಪನ್‌ಪೇಟೆ ಪ್ರಥಮದರ್ಜೆ ಕಾಲೇಜಿನಲ್ಲಿ ರ‍್ಯಾಂಕ್ ಪಡೆದ ವಿದ್ಯಾರ್ಥಿಗಳ ಪಟ್ಟಿ :