ಉತ್ತರ ಕನ್ನಡ ಲೋಕಸಭಾ ಕ್ಷೇತ್ರದಿಂದ ಬಿಜೆಪಿಯಿಂದ ಸ್ಪರ್ಧಿಸುತ್ತಾರ ಮಾಜಿ ಸಚಿವ ಹರತಾಳು ಹಾಲಪ್ಪ..!!???

ಉತ್ತರ ಕನ್ನಡ ಲೋಕಸಭಾ ಕ್ಷೇತ್ರದಿಂದ ಬಿಜೆಪಿಯಿಂದ ಸ್ಪರ್ಧಿಸುತ್ತಾರ ಮಾಜಿ ಸಚಿವ ಹರತಾಳು ಹಾಲಪ್ಪ..!!???

ಮುಂಬರು ಸಾರ್ವತ್ರಿಕ ಚುನಾವಣೆಯಲ್ಲಿ 2019ರ ಚುನಾವಣೆಯಂತೆ ಅಭೂತಪರ್ವ ಗೆಲುವು ಸಾಧಿಸಿ ದೇಶಕ್ಕೆ 3ನೇ ಬಾರಿಗೆ ನರೇಂದ್ರ ಮೋದಿಯನ್ನ ಪ್ರಧಾನಿ ಮಾಡಲು ರಾಜ್ಯದಿಂದ ಅಧಿಕ ಸ್ಥಾನಗಳನ್ನು ಕೊಡುಗೆಯಾಗಿ ನೀಡಲು ಬಿಜೆಪಿ ಸಜ್ಜಾಗುತ್ತಿದೆ.

ಈ ಬಾರಿಯ ಚುನಾವಣೆಯಲ್ಲಿ ಉತ್ತರ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಅನಂತ್ ಕುಮಾರ್ ಹೆಗ್ಡೆ ಅವರು ಸ್ಪರ್ಧೆ ಮಾಡ್ತಾರಾ ಎಂಬ ಪ್ರಶ್ನೆ ಬಹುದೊಡ್ಡದಾಗಿ ಕ್ಷೇತ್ರ ಮತದಾರರನ್ನು ಕಾಡುತ್ತಿದೆ. ಆದರೆ ಏಳು ಬಾರಿ ಗೆದ್ದು ಬಂದಿರುವ ಹೆಗ್ಡೆ ಅವರು ಚುನಾವಣೆಗೆ ಸ್ಪರ್ಧೆಯೇ ಪ್ರಶ್ನಾರ್ಥವಾಗಿದೆ.

ಒಂದು ವೇಳೆ ಅನಂತ್ ಕುಮಾರ್ ಹೆಗ್ಡೆ ಸ್ಪರ್ಧಿಸದಿದ್ದಲ್ಲಿ ಉತ್ತರಕನ್ನಡ ಲೋಕಸಭಾ ಕ್ಷೇತ್ರದ ಟಿಕೆಟ್ ಗೆ ಬಿಜೆಪಿಯಲ್ಲಿ ಈ ಬಾರಿ ಟಿಕೆಟ್​ ಫೈಟ್​ ಶುರುವಾಗಿದೆ.ರೂಪಾಲಿ ನಾಯ್ಕ್ ,ಕಾಗೇರಿ ಸೇರಿದಂತೆ ಹಲವು ನಾಯಕರು ತಮಗೆ ಟಿಕೆಟ್ ಕೊಡಿ ಅಂತ ಬೇಡಿಕೆ ಇಟ್ಟಿದ್ದಾರೆ ಆದರೆ ಬಿಜೆಪಿ ರಾಜ್ಯ ಉಪಾಧ್ಯಕ್ಷರಾಗಿ ನೇಮಕಗೊಂಡಿರುವ ಮಾಜಿ ಸಚಿವ ಹರತಾಳು ಹಾಲಪ್ಪ ರವರಿಗೆ ಟಿಕೆಟ್ ದೊರೆಯಲಿದೆ ಎನ್ನುವ ಮಾಹಿತಿ ಬಲ್ಲ ಮೂಲಗಳಿಂದ ತಿಳಿದುಬಂದಿದೆ.

ಇತ್ತೀಚೆಗೆ ಉತ್ತರಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಕ್ರೀಯಾಶೀಲರಾಗಿರುವ ಹರತಾಳು ಹಾಲಪ್ಪ ಪಕ್ಷದ ಹಲವಾರು ಸಭೆಗಳಲ್ಲಿ ಪಾಲ್ಗೊಳ್ಳುತ್ತಿರುವುದು ಪಕ್ಷದ ಟಿಕೆಟ್ ದೊರೆಯಬಹುದು ಎನ್ನುವ ವಿಚಾರಕ್ಕೆ ಪೂರಕವಾಗಿದೆ.


ಉತ್ತರ ಕನ್ನಡ ಲೋಕಸಭಾ ಕ್ಷೇತ್ರ ಕರ್ನಾಟಕದಲ್ಲಿ ಬಿಜೆಪಿಯ ಭದ್ರಕೋಟೆ ಎಂದು ಕರೆಯಿಸಿಕೊಂಡಿದೆ. ಏಕೆಂದರೆ 1999ರ ಸಾರ್ವತ್ರೀಕ ಚುನಾವಣೆ ಹೊರತು ಪಡಿಸಿದರೆ ಮತ್ತೆ ಈ ಕ್ಷೇತ್ರದಲ್ಲಿ ಕಾಂಗ್ರೆಸ್​ ಗೆಲುವು ಪಡೆದಿಲ್ಲ. ಕೈ ಪಾಳಯಕ್ಕೆ ಈ ಕ್ಷೇತ್ರ ಇದುವರೆಗೂ ಮರಿಚಿಕೆಯಾಗಿದೆಯೇ ಉಳಿದಿದೆ. ಅನಂತ್ ಕುಮಾರ್ ಹೆಗ್ಡೆ ಅವರು ಸತತವಾಗಿ ಈ ಕ್ಷೇತ್ರದಲ್ಲಿ ಲೋಕಸಭೆಗೆ ಆರಿಸಿ ಬರುತ್ತಿದ್ದಾರೆ.

ಮಾರ್ಗರೇಟ್ ಆಳ್ವ ಅವರು ಒಮ್ಮೆ ಕ್ಷೇತ್ರದಿಂದ ಗೆದ್ದಿರುವುದನ್ನು ಹೊರತುಪಡಿಸಿದರೆ ಮತ್ತೆ ಕಾಂಗ್ರೆಸ್ ಯಾವುದೇ ಅಭ್ಯರ್ಥಿ ಗೆಲುವು ಪಡೆದುಕೊಳ್ಳಲು ಆಗಿಲ್ಲ. 1996 ರಿಂದಲೂ ಈ ಕ್ಷೇತ್ರ ಕಮಲ ಪಡೆಯ ವಶದಲ್ಲಿದೆ. 1996, 1998, 2004, 2009, 2014, 2019ರಲ್ಲಿ ಸತತವಾಗಿ ಅನಂತ್ ಕುಮಾರ್ ಹೆಗ್ಡೆ ಅವರು ಕ್ಷೇತ್ರದಲ್ಲಿ ಗೆಲುವು ಪಡೆದಿದ್ದಾರೆ.

ಕ್ಷೇತ್ರದಲ್ಲಿ ಮುಸ್ಲಿಂ ಮತದಾರರ ಸಂಖ್ಯೆ ಹೆಚ್ಚಿದ್ದರು ಬಿಜೆಪಿ ಬ್ರಾಹ್ಮಣ ಸಮುದಾಯಕ್ಕೆ ಕ್ಷೇತ್ರದಲ್ಲಿ ಮಣೆ ಹಾಕುತ್ತಾ ಬಂದಿದೆ. ಆದರೆ ಕಾಂಗ್ರೆಸ್​ ಕ್ಷೇತ್ರದಲ್ಲಿ ಹಲವು ಪ್ರಯೋಗಗಳನ್ನು ಮಾಡಿಕೊಂಡು ಬಂದಿದೆ. ಈಡಿಗ, ಎಸ್​​​ಟಿ-ಎಸ್​ಟಿ ಹಾಗೂ ಮೊಗವೀರ, ಬುಡಗಟ್ಟು ಸಮುದಾಯದ ಮತಗಳು ಇಲ್ಲಿ ಪ್ರಾಬಲ್ಯವನ್ನು ಹೊಂದಿದ್ದು, ಬ್ರಾಹ್ಮಣ ಸಮುದಾಯದ ಮತಗಳು ಹಾಗೂ ಬೆಳಗಾವಿಯ ಎರಡು ಭಾಗದ ಎರಡು ಮತ ಕ್ಷೇತ್ರಗಳು ಸೇರ್ಪಡೆ ಆಗಿರುವುದರಿಂದ ಇಲ್ಲಿ ಮರಾಠ ಸಮುದಾಯ ಮತಗಳು ನಿರ್ಣಯವಾಗಿದೆ.


ಒಟ್ಟಾರೆಯಾಗಿ ಶಿವಮೊಗ್ಗ ಜಿಲ್ಲೆಯ ರಾಜಕಾರಣದಲ್ಲಿ‌ ನಾಲ್ಕು ವಿಧಾನಸಭಾ ಕ್ಷೇತ್ರದಲ್ಲಿ ಗೆಲುವು ಸಾಧಿಸಿರುವ ಹರತಾಳು ಹಾಲಪ್ಪ ಈಡಿಗ ಮತದಾರರು ಪ್ರಾಬಲ್ಯವಿರುವ ಉತ್ತರ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಸ್ಪರ್ಧಿಸುತ್ತರಾ ಕಾದು ನೋಡಬೇಕಾಗಿದೆ……


🔵ರಫ಼ಿ ರಿಪ್ಪನ್‌ಪೇಟೆ
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಚಾಲಕನ ನಿಯಂತ್ರಣ ತಪ್ಪಿ ಶಾಲಾ ಬಸ್ ಅಪಘಾತ – ತಪ್ಪಿದ ಭಾರಿ ಅನಾಹುತ

ಚಾಲಕನ ನಿಯಂತ್ರಣ ತಪ್ಪಿ ಶಾಲಾ ಬಸ್ ಅಪಘಾತ – ತಪ್ಪಿದ ಭಾರಿ ಅನಾಹುತ A school bus lost control…

2 hours ago

ಶಿಕ್ಷಕರ ಗೌರವದ ಹೆಸರಿನಲ್ಲಿ ರಾಜಕೀಯ ಬೇಡ; ಬಿಜೆಪಿ ವಿರುದ್ಧ ಕಾಂಗ್ರೆಸ್ ವಾಗ್ದಾಳಿ

ಶಿಕ್ಷಕರ ಗೌರವದ ಹೆಸರಿನಲ್ಲಿ ರಾಜಕೀಯ ಬೇಡ; ಬಿಜೆಪಿ ವಿರುದ್ಧ ಕಾಂಗ್ರೆಸ್ ವಾಗ್ದಾಳಿ Congress leaders in Sagar have hit…

3 hours ago

ಶಿಕ್ಷಣ ಸೇವೆಗೆ ಸಂದ ಪ್ರತಿಷ್ಠಿತ ಗೌರವ; ಅರಸಾಳಿನ ಸುಮಾ ಎಸ್.ಗೆ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕಿ ಪ್ರಶಸ್ತಿ

ಶಿಕ್ಷಣ ಸೇವೆಗೆ ಸಂದ ಪ್ರತಿಷ್ಠಿತ ಗೌರವ; ಅರಸಾಳಿನ ಸುಮಾ ಎಸ್.ಗೆ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕಿ ಪ್ರಶಸ್ತಿ Summa S.…

7 hours ago

ರಿಪ್ಪನ್‌ಪೇಟೆ ಸುತ್ತಮುತ್ತ ನಾಳೆ ಕರೆಂಟ್ ಇಲ್ಲ! ಯಾವೆಲ್ಲ ಪ್ರದೇಶಗಳಿಗೆ ವಿದ್ಯುತ್ ವ್ಯತ್ಯಯ? ಈ ಸುದ್ದಿ ನೋಡಿ

ರಿಪ್ಪನ್‌ಪೇಟೆ ಸುತ್ತಮುತ್ತ ನಾಳೆ ಕರೆಂಟ್ ಇಲ್ಲ! ಯಾವೆಲ್ಲ ಪ್ರದೇಶಗಳಿಗೆ ವಿದ್ಯುತ್ ವ್ಯತ್ಯಯ? ಈ ಸುದ್ದಿ ನೋಡಿ Power outage in…

11 hours ago

ಹಿರಿಯ ನಾಗರಿಕರಿಂದ ನಿವೃತ್ತ ಸರ್ಕಾರಿ ನೌಕರರಿಗೆ ವಿಶೇಷ ಸನ್ಮಾನ

ಹಿರಿಯ ನಾಗರಿಕರಿಂದ ನಿವೃತ್ತ ಸರ್ಕಾರಿ ನೌಕರರಿಗೆ ವಿಶೇಷ ಸನ್ಮಾನ Retired government employees were specially honoured by senior…

13 hours ago

ದೇಶದ ಅಭಿವೃದ್ಧಿಯಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಮಹತ್ವದ್ದು: ಶಾಸಕ ಬೇಳೂರು ಗೋಪಾಲಕೃಷ್ಣ

ದೇಶದ ಅಭಿವೃದ್ಧಿಯಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಮಹತ್ವದ್ದು: ಶಾಸಕ ಬೇಳೂರು ಗೋಪಾಲಕೃಷ್ಣ ಶಾಲೆ ಬಿಟ್ಟ ಮಕ್ಕಳನ್ನು ಮರಳಿ ಕರೆತಂದರೆ ₹10…

1 day ago