w
Headlines
Home » ಎಂಟು ತಿಂಗಳ ಹಿಂದೆ ಪ್ರೀತಿಸಿ ಮದುವೆಯಾಗಿದ್ದ ನವ ವಿವಾಹಿತೆ ನೇಣು ಬಿಗಿದುಕೊಂಡು ಆತ್ಮಹತ್ಯೆ | Crime News

ಎಂಟು ತಿಂಗಳ ಹಿಂದೆ ಪ್ರೀತಿಸಿ ಮದುವೆಯಾಗಿದ್ದ ನವ ವಿವಾಹಿತೆ ನೇಣು ಬಿಗಿದುಕೊಂಡು ಆತ್ಮಹತ್ಯೆ | Crime News

ಎಂಟು ತಿಂಗಳ ಹಿಂದೆ ಪ್ರೀತಿಸಿ ಮದುವೆಯಾಗಿದ್ದ ನವ ವಿವಾಹಿತೆ ನೇಣು ಬಿಗಿದುಕೊಂಡು ಆತ್ಮಹತ್ಯೆ | Crime News


ತೀರ್ಥಹಳ್ಳಿ ತಾಲ್ಲೂಕಿನ ನಾಲೂರು ಕೊಳಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ದಾಸನಕೊಡಿಗೆ ಗ್ರಾಮದಲ್ಲಿ ನವವಿವಾಹಿತೆಯೊಬ್ಬರ  ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ‌.


ಶಮಿತಾ ಬಿ.ಯು (24) ಮೃತ ದುರ್ಧೈವಿಯಾಗಿದ್ದಾರೆ.

ಮೃತರ ಪತಿ ವಿದ್ಯಾರ್ಥ್ ಸೋಮೇಶ್ವರ ಅಭಯಾರಣ್ಯ ವ್ಯಾಪ್ತಿಯಲ್ಲಿ ವೃತ್ತಿ ಮಾಡುತ್ತಿದ್ದಾರೆ. ಮಂಗಳವಾರ ರಾತ್ರಿ ಪಾಳಿಯಲ್ಲಿ ಕೆಲಸಕ್ಕೆ ತೆರಳಿದ್ದಾಗ ಈ ಘಟನೆ ನಡೆದಿದೆ. 

ಕಳೆದ ಮಾರ್ಚ್ ನಲ್ಲಿ ಶಮಿತಾ ಹಾಗೂ ವಿದ್ಯಾರ್ಥ್ ಪ್ರೀತಿಸಿ ಮದುವೆಯಾಗಿದ್ದರು. ಮಂಗಳವಾರ ರಾತ್ರಿ ಅತ್ತೆ ಮಾವನಿಗೆ ತಿಳಿಸಿ
ಶರ್ಮಿತಾ ರಾತ್ರಿ ಊಟ ಮಾಡಿ ಮಲಗಲು ಉಪ್ಪರಿಗೆ ಮೇಲೆ ತೆರಳಿದ್ದರು. ಆದರೆ ಬುಧವಾರ ಬೆಳಿಗ್ಗೆ ಬಾಗಿಲು ತೆರೆಯದಿದ್ದ ಹಿನ್ನಲೆಯಲ್ಲಿ ಕುಟುಂಬದವರು, ಕೆಲಸದವರು ಕಿಟಕಿಯಿಂದ ನೋಡಿದಾಗ ಪ್ರಕರಣ ಬೆಳಕಿಗೆ ಬಂದಿದೆ. 

ಯುವತಿಯ ಪೋಷಕರು ಆಗಮಿಸಿದ ನಂತರ ಬಾಗಿಲು ಒಡಯಲಾಗಿದೆ. ಮೃತದೇಹದ ಬಳಿ ಡೆತ್ ನೋಟ್ ಲಭ್ಯವಾಗಿದ್ದು ಆರೋಗ್ಯ ಸಮಸ್ಯೆಯಿಂದ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ ಎಂದು ಬರೆದಿದ್ದಾರೆ ಎನ್ನಲಾಗಿದೆ.

ತೀರ್ಥಹಳ್ಳಿ ಜಯಚಾಮರಾಜೇಂದ್ರ ಆಸ್ಪತ್ರೆಯಲ್ಲಿ ತಹಶೀಲ್ದಾರ್ ಜಕ್ಕನ್ ಗೌಡರ್ ಸಮ್ಮುಖದಲ್ಲಿ ಮರಣೋತ್ತರ ಪರೀಕ್ಷೆ ನಡೆಸಲಾಗಿದೆ.

Leave a Reply

Your email address will not be published. Required fields are marked *

  1. You cannot copy content of this page⚠️ Legal Warning: This article is protected under copyright law. Any unauthorized copying, screenshotting, reproduction, or publication on websites, social media, YouTube, or other platforms without permission may result in legal action. © POSTMAN NEWS Kannada.