ಕರ್ನಾಟಕ ರಾಜ್ಯ NPS ನೌಕರರ ಸಂಘ ಹೊಸನಗರ ಘಟಕದ ವತಿಯಿಂದ ಶಾಸಕ ಬೇಳೂರು ಗೋಪಾಲಕೃಷ್ಣ ರವರಿಗೆ ಮನವಿ ಸಲ್ಲಿಕೆ

ಕರ್ನಾಟಕ ರಾಜ್ಯ NPS ನೌಕರರ ಸಂಘ ಹೊಸನಗರ ಘಟಕದ ವತಿಯಿಂದ ಶಾಸಕ ಬೇಳೂರು ಗೋಪಾಲಕೃಷ್ಣ ರವರಿಗೆ ಮನವಿ ಸಲ್ಲಿಕೆ


ಕರ್ನಾಟಕ ರಾಜ್ಯ KSGNPSEA ಸಂಘದ ನಿರ್ದೇಶನದಂತೆ ಸಂಘದ ನಡೆ ಜನಪ್ರತಿನಿಧಿಗಳ ಕಡೆ ಅಭಿಯಾನದಡಿಯಲ್ಲಿ ಇಂದು ರಿಪ್ಪನ್‌ಪೇಟೆಯಲ್ಲಿ ಸಾಗರ ಕ್ಷೇತ್ರದ ಶಾಸಕ ಬೇಳೂರು ಗೋಪಾಲ ಕೃಷ್ಣರವರನ್ನು ಭೇಟಿ ಮಾಡಿ ಮುಂಬರುವ  ಸಚಿವ ಸಂಪುಟ ಸಭೆಯಲ್ಲಿ NPS ರದ್ದು ಮಾಡುವಂತೆ ಮುಖ್ಯಮಂತ್ರಿಗಳನ್ನು ಒತ್ತಾಯ ಮಾಡುವಂತೆ ಹೊಸನಗರ ತಾಲೂಕು ಎನ್ಪಿಎಸ್ ನೌಕರರ ಸಂಘದ ವತಿಯಿಂದ ಮನವಿ ಸಲ್ಲಿಸಲಾಯಿತು.


ಮನವಿ ಸ್ವೀಕರಿಸಿದ ಶಾಸಕರು ಸಕಾರಾತ್ಮಕ ಸ್ಪಂದಿಸಿ ಶಾಸಕಾಂಗ ಸಭೆಯಲ್ಲಿ  ಮುಖ್ಯಮಂತ್ರಿಗಳ ಗಮನ ಸೆಳೆಯುವುದಾಗಿ ಹಾಗೂ ನಮ್ಮ ಸರ್ಕಾರ ನಿಶ್ಚಿತಾ ಹಳೆ ಪಿಂಚಣಿಯನ್ನು ಮರು ಜಾರಿ ಮಾಡಲು ಬದ್ದವಾಗಿದೆ ಎಂದು ಹೇಳಿದರು.

ಈ ಸಂಧರ್ಭದಲ್ಲಿ ರಾಜ್ಯ ಘಟಕದ ಉಪಾಧ್ಯಕ್ಷರಾದ
ಡಾ. ರಜನಿಕಾಂತ ಎಸ್. ಟಿ., ತಾಲೂಕು ಅಧ್ಯಕ್ಷರಾದ ಮಾಲತೇಶ ಎಂ ಹಾಗೂ ತಾಲೂಕು ಪದಾಧಿಕಾರಿಗಳು ಹಾಗೂ ತಾಲೂಕು NPS ನೌಕರರು ಉಪಸ್ಥಿತರಿದ್ದರು.

ಮನವಿ ಪತ್ರದ ಸಾರಾಂಶ :

ವಿಷಯ: ಕಾಂಗ್ರೆಸ್ ಪಕ್ಷದ ಪ್ರಣಾಳಿಕೆಯಲ್ಲಿ ನೀಡಿರುವ ಭರವಸೆಯಂತೆ NPS ರದ್ದುಗೊಳಿಸಿ, ಹಳೆಯ ಪಿಂಚಣಿ ಯೋಜನೆಯನ್ನು ಮರುಸ್ಥಾಪಿಸುವ ಕುರಿತು.

ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ, ಕರ್ನಾಟಕ ರಾಜ್ಯ ಸರ್ಕಾರಿ NPS ನೌಕರರ ಸಂಘವು ದಿನಾಂಕ:13.10.2022 ರಿಂದ ಒಂದು ತಿಂಗಳು OPS ಸಂಕಲ್ಪ ಯಾತ್ರೆಯನ್ನು ಹಾಗೂ 14 ದಿನಗಳ ಕಾಲ OPS ಜಾರಿಗಾಗಿ ಫ್ರೀಡಂ ಪಾರ್ಕ್‌ನಲ್ಲಿ ಅಹೋ ರಾತ್ರಿ ಧರಣಿ ನಡೆಸಲಾಗಿತ್ತು ಹಾಗೂ ಜನವರಿ ತಿಂಗಳಿಂದ ಮೂರು ತಿಂಗಳ ಕಾಲ Vote for OPS ಅಭಿಯಾನವನ್ನು ನಡೆಸಲಾಗಿತ್ತು. ಈ ಅವಧಿಯಲ್ಲಿ ತಾವು ಹಾಗೂ ತಮ್ಮ ಪಕ್ಷ ನಿರಂತರವಾಗಿ ನಮ್ಮ ನೋವಿಗೆ ಸ್ಪಂದಿಸಿರುತ್ತೀರಿ.

ಮುಂದುವರೆದು, ತಮ್ಮ ಸರ್ಕಾರವು ಅಧಿಕಾರ ವಹಿಸಿಕೊಂಡ ತಕ್ಷಣ ನಮ್ಮ ಪದಾಧಿಕಾರಿಗಳೊಂದಿಗೆ ದಿನಾಂಕ:13.06.2023 ರಂದು ಗ್ರಹ ಕಛೇರಿ ಕೃಷ್ಣಾದಲ್ಲಿ ಮಾನ್ಯ ಮುಖ್ಯಮಂತ್ರಿಯವರು ಸಭೆ ನಡೆಸಿ, NPS ಯೋಜನೆಯನ್ನು ರದ್ದುಗೊಳಿಸುವ ಭರವಸೆಯನ್ನು ನೀಡಿದ್ದರು. ಮುಂದುವರೆದು, NPS ನೌಕರರ ಸಮಾವೇಶ ನಡೆಸಲು ಸೂಕ್ತ ದಿನಾಂಕ ನೀಡುವುದಾಗಿ ಸಹ ತಿಳಿಸಿರುತ್ತಾರೆ. ನುಡಿದಂತೆ ನಡೆದ ತಮ್ಮ ಸರ್ಕಾರದ ಭದ್ರತೆ ಹಾಗೂ ಸರ್ಕಾರಿ ನೌಕರರ ನೋವಿಗೆ ಸ್ಪಂದಿಸಿರುವ ತಮಗೆ ಸಂಘವು ಋಣಿಯಾಗಿರುತ್ತದೆ. ಮುಖ್ಯಮಂತ್ರಿಯವರು ದಿನಾಂಕ:06.01.2024 ರಂದು ಸಂಘದ ಪದಾಧಿಕಾರಿಗಳೊಂದಿಗೆ ನಡೆಸಿದ ಸಭೆಯಲ್ಲಿ ಮುಂದಿನ ಸಂಪುಟ ಸಭೆಯಲ್ಲಿ NPS ಯೋಜನೆಯ ರದ್ದತಿಯ ವಿಷಯವನ್ನು ಸಂಪುಟದ ಸಹದ್ಯೋಗಿಗಳೊಂದಿಗೆ ಚರ್ಚಿಸಿ ತೀರ್ಮಾನ ಕೈಗೊಳ್ಳುವುದಾಗಿ ತಿಳಿಸಿರುತ್ತಾರೆ.

ಪ್ರಸ್ತುತ, ತಾವು ರಾಜ್ಯದ ಶಾಸಕರಾಗಿ ನೊಂದವರಿಗೆ ಸಾಮಾಜಿಕ ನ್ಯಾಯ ಒದಗಿಸುವ ಹಂಬಲದೊಂದಿಗೆ ತಮ್ಮ ಸರ್ಕಾರ ನೀಡಿರುವ ಐದು ಭರವಸೆಗಳನ್ನು ಯಶಸ್ವಿಯಾಗಿ ಈಡೇರಿಸಿರುತ್ತೀರಿ. ಇದು ಜನಮನ್ನಣೆಗೆ ಪಾತ್ರವಾಗಿದೆ. ಪುಸ್ತುತ 2 ಲಕ್ಷದ 65 ಸಾವಿರ NPS ನೌಕರರ ಹಾಗೂ ಅಷ್ಟ ಸಂಖ್ಯೆಯ ನಿಗಮ ಮಂಡಳಿ ಅನುದಾನಿತ ಹಾಗೂ ಸ್ವಾಯತ್ತ ಸಂಸ್ಥೆಗಳ ನೌಕರರು NPS ರದ್ಧತಿಯ ಘೋಷಣೆಯನ್ನು ಎದುರು ನೋಡುತ್ತಿದ್ದೇವೆ. NPS ರದ್ದತಿಯಿಂದ ಮೇಲಿನ ಐದು ಜನಪರ ಭರವಸೆಗಳನ್ನು ಅನುಷ್ಠಾನಗೊಳಿಸಲು ವಾರ್ಷಿಕವಾಗಿ ರೂ.1875,00 ಕೋಟಿಗಳ ಅನುದಾನ ಲಭ್ಯವಾಗಲಿದೆ. ಹಾಗೇಯೇ NSDLನಲ್ಲಿ ಶೇಖರಣೆಯಾಗಿರುವ ರೂ.18655.00 ಕೋಟಿಗಳಷ್ಟು ಹಣ ಅಭಿವೃದ್ಧಿ ಕಾರ್ಯಗಳಿಗೆ ಲಭ್ಯವಾಗಲಿದೆ (ಮಾಹಿತಿಯನ್ನು ಲಗತ್ತಿಸಿದೆ). ಆದುದರಿಂದ, ರಾಜಸ್ಥಾನ, ಛತ್ತಿಸ್ಕಡ, ಜಾರ್ಖಂಡ್ ಹಾಗೂ ಹಿಮಾಚಲ ಪ್ರದೇಶದ ಸರ್ಕಾರಗಳು  NPS ಯೋಜನೆಯನ್ನು ರದ್ದುಗೊಳಿಸಿರುವಂತೆಯೇ ಕರ್ನಾಟಕದಲ್ಲಿಯೂ NPS ಯೋಜನೆಯನ್ನು ರದ್ದುಗೊಳಿಸುವಂತೆ ತಮ್ಮನ್ನು ಸಂಘವು ವಿನಯಪೂರ್ವಕವಾಗಿ ಒತ್ತಾಯಿಸುತ್ತದೆ.
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಚಾಲಕನ ನಿಯಂತ್ರಣ ತಪ್ಪಿ ಶಾಲಾ ಬಸ್ ಅಪಘಾತ – ತಪ್ಪಿದ ಭಾರಿ ಅನಾಹುತ

ಚಾಲಕನ ನಿಯಂತ್ರಣ ತಪ್ಪಿ ಶಾಲಾ ಬಸ್ ಅಪಘಾತ – ತಪ್ಪಿದ ಭಾರಿ ಅನಾಹುತ A school bus lost control…

3 hours ago

ಶಿಕ್ಷಕರ ಗೌರವದ ಹೆಸರಿನಲ್ಲಿ ರಾಜಕೀಯ ಬೇಡ; ಬಿಜೆಪಿ ವಿರುದ್ಧ ಕಾಂಗ್ರೆಸ್ ವಾಗ್ದಾಳಿ

ಶಿಕ್ಷಕರ ಗೌರವದ ಹೆಸರಿನಲ್ಲಿ ರಾಜಕೀಯ ಬೇಡ; ಬಿಜೆಪಿ ವಿರುದ್ಧ ಕಾಂಗ್ರೆಸ್ ವಾಗ್ದಾಳಿ Congress leaders in Sagar have hit…

4 hours ago

ಶಿಕ್ಷಣ ಸೇವೆಗೆ ಸಂದ ಪ್ರತಿಷ್ಠಿತ ಗೌರವ; ಅರಸಾಳಿನ ಸುಮಾ ಎಸ್.ಗೆ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕಿ ಪ್ರಶಸ್ತಿ

ಶಿಕ್ಷಣ ಸೇವೆಗೆ ಸಂದ ಪ್ರತಿಷ್ಠಿತ ಗೌರವ; ಅರಸಾಳಿನ ಸುಮಾ ಎಸ್.ಗೆ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕಿ ಪ್ರಶಸ್ತಿ Summa S.…

8 hours ago

ರಿಪ್ಪನ್‌ಪೇಟೆ ಸುತ್ತಮುತ್ತ ನಾಳೆ ಕರೆಂಟ್ ಇಲ್ಲ! ಯಾವೆಲ್ಲ ಪ್ರದೇಶಗಳಿಗೆ ವಿದ್ಯುತ್ ವ್ಯತ್ಯಯ? ಈ ಸುದ್ದಿ ನೋಡಿ

ರಿಪ್ಪನ್‌ಪೇಟೆ ಸುತ್ತಮುತ್ತ ನಾಳೆ ಕರೆಂಟ್ ಇಲ್ಲ! ಯಾವೆಲ್ಲ ಪ್ರದೇಶಗಳಿಗೆ ವಿದ್ಯುತ್ ವ್ಯತ್ಯಯ? ಈ ಸುದ್ದಿ ನೋಡಿ Power outage in…

12 hours ago

ಹಿರಿಯ ನಾಗರಿಕರಿಂದ ನಿವೃತ್ತ ಸರ್ಕಾರಿ ನೌಕರರಿಗೆ ವಿಶೇಷ ಸನ್ಮಾನ

ಹಿರಿಯ ನಾಗರಿಕರಿಂದ ನಿವೃತ್ತ ಸರ್ಕಾರಿ ನೌಕರರಿಗೆ ವಿಶೇಷ ಸನ್ಮಾನ Retired government employees were specially honoured by senior…

15 hours ago

ದೇಶದ ಅಭಿವೃದ್ಧಿಯಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಮಹತ್ವದ್ದು: ಶಾಸಕ ಬೇಳೂರು ಗೋಪಾಲಕೃಷ್ಣ

ದೇಶದ ಅಭಿವೃದ್ಧಿಯಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಮಹತ್ವದ್ದು: ಶಾಸಕ ಬೇಳೂರು ಗೋಪಾಲಕೃಷ್ಣ ಶಾಲೆ ಬಿಟ್ಟ ಮಕ್ಕಳನ್ನು ಮರಳಿ ಕರೆತಂದರೆ ₹10…

1 day ago