POSTMANNEWS

ನೈಜ ಸುದ್ದಿ ನೇರ ಬಿತ್ತರ..

ಕಾಡಿನಲ್ಲಿ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಯ್ತು ಮೂರು ತಿಂಗಳಿನಿಂದ ನಾಪತ್ತೆಯಾಗಿದ್ದ ವ್ಯಕ್ತಿಯ ಶವ ..!! Crime News

ಕಾಡಿನಲ್ಲಿ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಯ್ತು ಮೂರು ತಿಂಗಳಿನಿಂದ ನಾಪತ್ತೆಯಾಗಿದ್ದ ವ್ಯಕ್ತಿಯ ಶವ !


ತೀರ್ಥಹಳ್ಳಿ: ಮೂರು ತಿಂಗಳ ಹಿಂದೆ ನಾಪತ್ತೆಯಾಗಿದ್ದ ವ್ಯಕ್ತಿಯೊಬ್ಬರ ಶವ ಕೊಳೆತ ಸ್ಥಿತಿಯಲ್ಲಿ ಡಿ.31ರಂದು ಎನ್.ಆರ್.ಪುರ. ತಾಲೂಕು ಕಣಿವೆ ಬಳಿ ಪತ್ತೆಯಾಗಿದೆ. 

ತೀರ್ಥಹಳ್ಳಿ ತಾಲೂಕು ಕೂಡಿಗೆ ಗ್ರಾಮದ ಗೋಪಾಲ್ ಮೃತ ವ್ಯಕ್ತಿಯಾಗಿದ್ದಾರೆ. ಹಲವು ವರ್ಷಗಳ ಕಾಲ ಬಾಂಬೆಯಲ್ಲಿದ್ದು ಬಳಿಕ ಜಮೀನು ಮಾಡಿಕೊಂಡು ಊರಲ್ಲಿ ಇದ್ದರು.

3 ತಿಂಗಳು ಹಿಂದೆ ನಾಪತ್ತೆಯಾಗಿದ್ದ ಗೋಪಾಲ್ ಶವ ಕಾಡಿನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಶವ ಸಂಪೂರ್ಣ ಕೊಳೆತು ಹೋಗಿದ್ದು ಧರಿಸಿರುವ ವಸ್ತ್ರದ ಆಧಾರದ ಮೇಲೆ ಮೃತದೇಹವನ್ನು ಪತ್ತೆಹಚ್ಚಲಾಗಿದೆ.

ಹೆಂಡತಿ ತವರಿಗೆ ತೆರಳಿದ್ದಾಗ ಗೋಪಾಲ್ ಏಕಾಏಕಿ ನಾಪತ್ತೆಯಾಗಿದ್ದರು. ನಂತರ ಹಲವು ಕಡೆ ಹುಡುಕಾಟ ನಡೆಸಿ ನಂತರ ಎನ್. ಆರ್. ಪುರ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಾಗಿತ್ತು.

ಘಟನೆಯ ಬಗ್ಗೆ ಹೆಚ್ಚಿನ ಮಾಹಿತಿ ಪೊಲೀಸರ ತನಿಖೆಯಿಂದ ತಿಳಿದುಬರಬೇಕಾಗಿದೆ.

About The Author

Leave a Reply

Your email address will not be published. Required fields are marked *