ಬಿಜೆಪಿ ರಾಜ್ಯ ಉಪಾಧ್ಯಕ್ಷರಾಗಿ ಸ್ವಕ್ಷೇತ್ರಕ್ಕೆ ಆಗಮಿಸಿದ ಹರತಾಳು ಹಾಲಪ್ಪನವರಿಗೆ ಅದ್ದೂರಿ ಸ್ವಾಗತ
ಆನಂದಪುರ : ರಾಜ್ಯ ಬಿಜೆಪಿ ಉಪಾಧ್ಯಕ್ಷರಾಗಿ ನೇಮಕವಾಗಿ ಆನಂದಪುರಕ್ಕೆ ಆಗಮಿಸಿದ ಮಾಜಿ ಸಚಿವ ಹರತಾಳು ಹಾಲಪ್ಪನವರಿಗೆ ಪಕ್ಷದ ಕಾರ್ಯಕರ್ತರು ಪಟಾಕಿ ಸಿಡಿಸಿ ಅದ್ದೂರಿಯಾಗಿ ಸ್ವಾಗತ ಕೋರಿದರು.
ಆನಂದಪುರ ಬಿಜೆಪಿ ಮಹಾಶಕ್ತಿ ಕೇಂದ್ರದಿಂದ ಹಮ್ಮಿಕೊಂಡಿದ್ದ ಅಭಿನಂದನಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಈ ಸಂಧರ್ಭದಲ್ಲಿ ಪಕ್ಷದ ಕಾರ್ಯಕರ್ತರು ಕಾರ್ಯಕರ್ತರು ವಿಜಯೇಂದ್ರ, ಯಡಿಯೂರಪ್ಪ ಹಾಗೂ ಹರತಾಳು ಹಾಲಪ್ಪ ರವರ ಘೋಷಣೆಗಳನ್ನು ಕೂಗಿದರು.
ಈ ಸಂಧರ್ಭದಲ್ಲಿ ಮಾತನಾಡಿದ ಹರತಾಳು ಹಾಲಪ್ಪ ಮೋದಿ ,ಯಡಿಯೂರಪ್ಪ ನಾಯಕತ್ವದಲ್ಲಿ ವಿಜಯೇಂದ್ರ ರಾಜ್ಯಾಧಕ್ಷರಾಗಿ ಆಯ್ಕೆಯಾದ ನಂತರದಲ್ಲಿ ಯುವ ಕಾರ್ಯಕರ್ತರಲ್ಲಿ ಹುಮ್ಮಸ್ಸು ಹೆಚ್ಚಾಗಿದೆ. ಕ್ಷೇತ್ರದಾದ್ಯಂತ ದೌರ್ಜನ್ಯಗಳು , ಪಕ್ಷಪಾತಗಳು ಹೆಚ್ಚಾಗಿದ್ದು ಮುಂದಿನ ದಿನಗಳಲ್ಲಿ ಅದರ ವಿರುದ್ದ ಒಟ್ಟಾಗಿ ಹೋರಾಟ ನಡೆಸೋಣ ಎಂದರು.
ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಮೋದಿಯವರನ್ನು ಮತ್ತೊಮ್ಮೆ ಪ್ರಧಾನಿ ಮಾಡುವ ನಿಟ್ಟಿನಲ್ಲಿ ಶ್ರಮಿಸೋಣ , 500 ವರ್ಷದ ಹೋರಾಟದ ಫಲವಾಗಿ ಜನವರಿ 22 ರಂದು ರಾಮ ಮಂದಿರ ಉದ್ಘಾಟನೆಯಾಗುತಿದ್ದು ಈ ಹಿನ್ನಲೆಯಲ್ಲಿ ಪ್ರತಿ ಮನೆ ಮನೆಗೂ ತೆರಳಿ ಮಂತ್ರಾಕ್ಷತೆ ತಲುಪಿಸುವ ಕೆಲಸ ಮಾಡೋಣ ಎಂದರು.
ಈ ಸಂಧರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷರಾದ ಟಿ ಡಿ ಮೇಘರಾಜ್, ಜಿಪಂ ಮಾಜಿ ಸದಸ್ಯ ರತ್ನಾಕರ ಹೊನಗೋಡ್,ಗ್ರಾಪಂ ಅಧ್ಯಕ್ಷ ಮೋಹನ್ ಕುಮಾರ್ ಹಾಗೂ ಪಕ್ಷದ ಪ್ರಮುಖರಾದ ಶಾಂತಕುಮಾರ್ ಭರ್ಮಪ್ಪ ,ರೇವಪ್ಪ , ಜ್ಯೋತಿ ರಘು, ಚೇತನ ರಾಘವೇಂದ್ರ. ಲೋಕಪ್ಪ , ಹಾಗೂ ಪಕ್ಷದ ಕಾರ್ಯಕರ್ತರು ಹಾಜರಿದ್ದರು
About The Author
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್