ಬೈಕ್ ಅಪಘಾತದಲ್ಲಿ ಅಂತಿಮ ವರ್ಷದ ಬಿ.ಕಾಂ ವಿದ್ಯಾರ್ಥಿ ಸಾವು | Crime News

ಬೈಕ್ ಅಪಘಾತದಲ್ಲಿ ಅಂತಿಮ ವರ್ಷದ ಬಿ.ಕಾಂ ವಿದ್ಯಾರ್ಥಿ ಸಾವು


ಶಿವಮೊಗ್ಗ(Shivamogga) ನಗರದ ಖಾಸಗಿ ಕಾಲೇಜಿನ ಅಂತಿಮ ವರ್ಷದ ಬಿಕಾಂ ವಿದ್ಯಾರ್ಥಿಯೊಬ್ಬ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿರುವ ಘಟನೆ ನಡೆದಿದೆ.

ನಗರದ ATNCC ಕಾಲೇಜಿನ ವಿದ್ಯಾರ್ಥಿ ಪ್ರಜ್ವಲ್(20) ಸ್ನೇಹಿತರೊಂದಿಗೆ ನಗರದ ಹೊರವಲಯದ ಹೋಟೇಲ್ ನಲ್ಲಿ ಊಟ ಮುಗಿಸಿಕೊಂಡು ಹಿಂದಿರುಗುವಾಗ ಬೈಕ್ ಮರಕ್ಕೆ ಡಿಕ್ಕಿಯಾದ ಪರಿಣಾಮ ತಲೆಗೆ ತೀವ್ರವಾಗಿ ಗಾಯಗಳಾಗಿದ್ದವು.

ದ್ವಿಚಕ್ರ ವಾಹನದಲ್ಲಿ ಸ್ನೇಹಿತ ಪವನ್ ನೊಂದಿಗೆ ತೆರಳಿದ ಪ್ರಜ್ವಲ್ ಅತಿ ವೇಗ ಮತ್ತು ಅಜಾಗರೂಕತೆಯಿಂದ ಚಲಾಯಿಸಿದ ಪರಿಣಾಮ ಮರಕ್ಕೆ ಡಿಕ್ಕಿ ಹೊಡೆದಿದ್ದಾನೆ.

ಸ್ಥಳೀಯರು ತಕ್ಷಣವೇ ಅಂಬ್ಯುಲೆನ್ಸ್ ನಲ್ಲಿ ಪವನ್ ಮತ್ತು ಪ್ರಜ್ವಲ್ ನನ್ನು ಆಸ್ಪತ್ರೆಗೆ ಕಳುಹಿಸಿಕೊಟ್ಟಿದ್ದಾರೆ. ಆದರೆ ಅಷ್ಟರಲ್ಲಾಗಲೇ ಪ್ರಜ್ವಲ್ ಪ್ರಾಣಪಕ್ಷಿ ಹಾರಿಹೋಗಿತ್ತು.

ಸ್ನೇಹಿತ ಪವನ್ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತಿದ್ದಾನೆ. ತುಂಗನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Share
Published by
ರಫ಼ಿ ರಿಪ್ಪನ್ ಪೇಟೆ

Recent Posts

ಚಾಲಕನ ನಿಯಂತ್ರಣ ತಪ್ಪಿ ಶಾಲಾ ಬಸ್ ಅಪಘಾತ – ತಪ್ಪಿದ ಭಾರಿ ಅನಾಹುತ

ಚಾಲಕನ ನಿಯಂತ್ರಣ ತಪ್ಪಿ ಶಾಲಾ ಬಸ್ ಅಪಘಾತ – ತಪ್ಪಿದ ಭಾರಿ ಅನಾಹುತ A school bus lost control…

3 hours ago

ಶಿಕ್ಷಕರ ಗೌರವದ ಹೆಸರಿನಲ್ಲಿ ರಾಜಕೀಯ ಬೇಡ; ಬಿಜೆಪಿ ವಿರುದ್ಧ ಕಾಂಗ್ರೆಸ್ ವಾಗ್ದಾಳಿ

ಶಿಕ್ಷಕರ ಗೌರವದ ಹೆಸರಿನಲ್ಲಿ ರಾಜಕೀಯ ಬೇಡ; ಬಿಜೆಪಿ ವಿರುದ್ಧ ಕಾಂಗ್ರೆಸ್ ವಾಗ್ದಾಳಿ Congress leaders in Sagar have hit…

4 hours ago

ಶಿಕ್ಷಣ ಸೇವೆಗೆ ಸಂದ ಪ್ರತಿಷ್ಠಿತ ಗೌರವ; ಅರಸಾಳಿನ ಸುಮಾ ಎಸ್.ಗೆ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕಿ ಪ್ರಶಸ್ತಿ

ಶಿಕ್ಷಣ ಸೇವೆಗೆ ಸಂದ ಪ್ರತಿಷ್ಠಿತ ಗೌರವ; ಅರಸಾಳಿನ ಸುಮಾ ಎಸ್.ಗೆ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕಿ ಪ್ರಶಸ್ತಿ Summa S.…

8 hours ago

ರಿಪ್ಪನ್‌ಪೇಟೆ ಸುತ್ತಮುತ್ತ ನಾಳೆ ಕರೆಂಟ್ ಇಲ್ಲ! ಯಾವೆಲ್ಲ ಪ್ರದೇಶಗಳಿಗೆ ವಿದ್ಯುತ್ ವ್ಯತ್ಯಯ? ಈ ಸುದ್ದಿ ನೋಡಿ

ರಿಪ್ಪನ್‌ಪೇಟೆ ಸುತ್ತಮುತ್ತ ನಾಳೆ ಕರೆಂಟ್ ಇಲ್ಲ! ಯಾವೆಲ್ಲ ಪ್ರದೇಶಗಳಿಗೆ ವಿದ್ಯುತ್ ವ್ಯತ್ಯಯ? ಈ ಸುದ್ದಿ ನೋಡಿ Power outage in…

12 hours ago

ಹಿರಿಯ ನಾಗರಿಕರಿಂದ ನಿವೃತ್ತ ಸರ್ಕಾರಿ ನೌಕರರಿಗೆ ವಿಶೇಷ ಸನ್ಮಾನ

ಹಿರಿಯ ನಾಗರಿಕರಿಂದ ನಿವೃತ್ತ ಸರ್ಕಾರಿ ನೌಕರರಿಗೆ ವಿಶೇಷ ಸನ್ಮಾನ Retired government employees were specially honoured by senior…

14 hours ago

ದೇಶದ ಅಭಿವೃದ್ಧಿಯಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಮಹತ್ವದ್ದು: ಶಾಸಕ ಬೇಳೂರು ಗೋಪಾಲಕೃಷ್ಣ

ದೇಶದ ಅಭಿವೃದ್ಧಿಯಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಮಹತ್ವದ್ದು: ಶಾಸಕ ಬೇಳೂರು ಗೋಪಾಲಕೃಷ್ಣ ಶಾಲೆ ಬಿಟ್ಟ ಮಕ್ಕಳನ್ನು ಮರಳಿ ಕರೆತಂದರೆ ₹10…

1 day ago