ಮಂಗನ ಖಾಯಿಲೆಗೆ(KFD) ಹೊಸನಗರ ತಾಲೂಕಿನ 18 ವರ್ಷದ ಯುವತಿ ಬಲಿ



ಮಂಗನ ಖಾಯಿಲೆಗೆ ಹೊಸನಗರ ತಾಲೂಕಿನ 18 ವರ್ಷದ ಯುವತಿ ಬಲಿ
ಮಂಗನ ಕಾಯಿಲೆ (ಕೆಎಫ್‌ಡಿ) ಯುವತಿಯೊಬ್ಬಳನ್ನು ಬಲಿ ಪಡೆದಿದ್ದು ರಾಜ್ಯದಲ್ಲೇ ಈ ವರ್ಷದ ಮೊದಲ ಪ್ರಕರಣ ಇದಾಗಿದೆ.

ಹೊಸನಗರ ತಾಲೂಕಿನ ಅರಮನೆಕೊಪ್ಪ ಗ್ರಾಪಂ ವ್ಯಾಪ್ತಿಯ ಬಪ್ಪನಮನೆ ಗ್ರಾಮದ ಅನನ್ಯ (18) ಕೆಎಫ್‌ಡಿಗೆ ಬಲಿಯಾದ ಯುವತಿ. ಈಕೆ ಕಳೆದ ಕೆಲ ದಿನಗಳಿಂದ ಜ್ವರದಿಂದ ಬಳಲುತ್ತಿದ್ದು ನಗರ, ಹೊಸನಗರ ಸರ್ಕಾರಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದಿದ್ದರು. ಜ್ವರ ಉಲ್ಬಣಗೊಂಡಿದ್ದರಿಂದ ಕೆಎಫ್‌ಡಿ ಟೆಸ್ಟ್ ಮಾಡಲಾಗಿತ್ತು. ಮೊದಲ ಟೆಸ್ಟ್‌ನಲ್ಲಿ ನೆಗೆಟಿವ್, ಎರಡನೇ ಬಾರಿ ಆರ್‌ಟಿಸಿಪಿಆರ್ ಟೆಸ್ಟ್ ಮಾಡಿದಾಗ ಪಾಸಿಟಿವ್ ಬಂದಿತ್ತು.

ಮೂರು ದಿನಗಳ ಕಾಲ ಮೆಗ್ಗಾನ್ ಆಸ್ಪತ್ರೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗಿದ್ದು ಶುಕ್ರವಾರ ಸಂಜೆ ಉಡುಪಿಯ ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಬಹು ಅಂಗಾಂಶಗಳ ವೈಫಲ್ಯದಿಂದ ಚಿಕಿತ್ಸೆ ಫಲಿಸದೆ ಇಂದು ಬೆಳಗ್ಗೆ ಅನನ್ಯ ಕೊನೆಯುಸಿರೆಳೆದಿದ್ದಾರೆ.

ಹೊಸನಗರ ತಾಲೂಕಿನಲ್ಲಿ ಈ ವರ್ಷದ ಮೊದಲ ಪ್ರಕರಣ ಇದಾಗಿದ್ದು, ಅರಮನೆಕೊಪ್ಪ ವ್ಯಾಪ್ತಿಯಲ್ಲಿ ಈ ಹಿಂದೆ ಕೆಎಫ್‌ಡಿ ಪ್ರಕರಣಗಳು ವರದಿಯಾಗಿಲ್ಲ. ಈ ಬಾರಿ ಶರಾವತಿ ಹಿನ್ನೀರು ತಗ್ಗಿದ ಹಿನ್ನೆಲೆ ಪ್ರಾಣಿಗಳ ಮೂಲಕ ವೈರಸ್‌ಗಳು ವರ್ಗಾವಣೆಯಾಗಿರಬಹುದು ಎನ್ನಲಾಗಿದೆ.

ಅರಮನೆಕೊಪ್ಪ ಗ್ರಾಪಂಗೆ ಹೊಸನಗರ ತಹಶೀಲ್ದಾರ್ ರಶ್ಮಿ ಸೇರಿದಂತೆ ತಾಲೂಕು ಆಡಳಿತ ಅಧಿಕಾರಿಗಳು, ಆರೋಗ್ಯಾಧಿಕಾರಿಗಳು ಭೇಟಿ ನೀಡಿ ಅಗತ್ಯ ಮುಂಜಾಗ್ರತಾ ಕ್ರಮ ಕೈಗೊಂಡಿದ್ದಾರೆ.

ಕಳೆದೊಂದು ತಿಂಗಳಿಂದ ರಾಜ್ಯದಲ್ಲಿ ಮೂರು ಮಂದಿಗೆ (ಚಿಕ್ಕಮಗಳೂರು ಒಂದು, ಶಿವಮೊಗ್ಗ ಎರಡು) ಕೆಎಫ್‌ಡಿ ಸೋಂಕು ಪಾಸಿಟಿವ್ ಆಗಿತ್ತು ಅವರಲ್ಲಿ ಒಬ್ಬರು ಮೃತಪಟ್ಟಿದ್ದಾರೆ.

ಕೆಎಫ್‌ಡಿ ಪಾಸಿಟಿವ್ ಆಗಿದ್ದ ಯುವತಿ ರಕ್ತಹೀನತೆಯಿಂದ ಬಳಲುತ್ತಿದ್ದರು. ಹೀಗಾಗಿ ಚಿಕಿತ್ಸೆಗೆ ಸ್ಪಂದಿಸಲಿಲ್ಲ ಎಂದು ಶಿವಮೊಗ್ಗ ಡಿಹೆಚ್ಒ ಡಾ.ರಾಜೇಶ ಸುರಗಿಹಳ್ಳಿ ತಿಳಿಸಿದ್ದಾರೆ.

ಅರಮನೆಕೊಪ್ಪ ಪ್ರದೇಶದಲ್ಲಿ ಕೊನೆಯ ಬಾರಿಗೆ 2014ರಲ್ಲಿ ಮಂಗನ ಕಾಯಿಲೆ ಕಾಣಿಸಿಕೊಂಡಿತ್ತು. ಈಗ ಮತ್ತೆ ದೃಢಪಟ್ಟಿದೆ. ಹೀಗಾಗಿ ವೈದ್ಯರ ತಂಡವನ್ನು ಅಲ್ಲಿಗೆ ಕಳುಹಿಸಿ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ ಎಂದರು.
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ರಿಪ್ಪನ್‌ಪೇಟೆ ಪಟ್ಟಣದ ನಾಲ್ಕು ರಸ್ತೆಗಳಿಗೆ ಬೆಳಕಿನ ಭಾಗ್ಯ: ಬೇಳೂರು ಗೋಪಾಲಕೃಷ್ಣರಿಂದ ಚಾಲನೆ

ರಿಪ್ಪನ್‌ಪೇಟೆ ಪಟ್ಟಣದ ನಾಲ್ಕು ರಸ್ತೆಗಳಿಗೆ ಬೆಳಕಿನ ಭಾಗ್ಯ: ಬೇಳೂರು ಗೋಪಾಲಕೃಷ್ಣರಿಂದ ಚಾಲನೆ “ಕೊಟ್ಟ ಮಾತಿನಂತೆ ವಿದ್ಯುತ್ ದೀಪ ಅಳವಡಿಸಿದ್ದೇನೆ” —…

8 hours ago

ರಿಪ್ಪನ್‌ಪೇಟೆಯಲ್ಲಿ 59ನೇ ವರ್ಷದ ಗಣಪತಿ ಪ್ರತಿಷ್ಠಾಪನಾ ಭವ್ಯ ಮೆರವಣಿಗೆ

ರಿಪ್ಪನ್‌ಪೇಟೆಯಲ್ಲಿ 59ನೇ ವರ್ಷದ ಗಣಪತಿ ಪ್ರತಿಷ್ಠಾಪನಾ ಭವ್ಯ ಮೆರವಣಿಗೆ Ripponpete celebrates the 59th annual Ganapati festival with…

10 hours ago

ಕಾಡುಪ್ರಾಣಿ ತಪ್ಪಿಸಲು ಹೋಗಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಕಾರು – ತಪ್ಪಿದ ಭಾರಿ ಅನಾಹುತ

ಕಾಡುಪ್ರಾಣಿ ತಪ್ಪಿಸಲು ಹೋಗಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಕಾರು – ತಪ್ಪಿದ ಭಾರಿ ಅನಾಹುತ A car crashed into…

2 days ago

ರಿಪ್ಪನ್‌ಪೇಟೆಯಲ್ಲಿ 59ನೇ ಗಣೇಶೋತ್ಸವಕ್ಕೆ ಭರದ ಸಿದ್ದತೆ : ಸೆ.14ರಿಂದ 11 ದಿನಗಳ ಸಾಂಸ್ಕೃತಿಕ ಸಂಭ್ರಮ

ರಿಪ್ಪನ್‌ಪೇಟೆಯಲ್ಲಿ 59ನೇ ಗಣೇಶೋತ್ಸವಕ್ಕೆ ಭರದ ಸಿದ್ದತೆ : ಸೆ.14ರಿಂದ 11 ದಿನಗಳ ಸಾಂಸ್ಕೃತಿಕ ಸಂಭ್ರಮ Rippanpete Ganeshotsava 2026: Karnataka…

2 days ago

ಹೊಸನಗರದಲ್ಲಿ ಸೆ.14ರಿಂದ 28ರವರೆಗೆ 8ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ: ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಿದ್ಧತೆ

ಹೊಸನಗರದಲ್ಲಿ ಸೆ.14ರಿಂದ 28ರವರೆಗೆ 8ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ: ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಿದ್ಧತೆ Hosanagara Hindu Mahasabha…

2 days ago

ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ

ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ Forest mobile squad seizes…

2 days ago