ಮಗನೊಂದಿಗೆ ಸೇರಿಕೊಂಡು ಪತಿಯನ್ನು ಕೊಂದ ಪತ್ನಿ – ಅಸ್ವಾಭಾವಿಕ ಸಾವು ಪ್ರಕರಣಕ್ಕೆ ಬಿಗ್ ಟ್ವಿಸ್ಟ್ | Crime News

ಮಗನೊಂದಿಗೆ ಸೇರಿಕೊಂಡು ಪತಿಯನ್ನು ಕೊಂದ ಪತ್ನಿ – ಅಸ್ವಾಭಾವಿಕ ಸಾವು ಪ್ರಕರಣಕ್ಕೆ ಬಿಗ್ ಟ್ವಿಸ್ಟ್


ಶಿವಮೊಗ್ಗ ಜಿಲ್ಲೆಯ ಭದ್ರಾವತಿಯ ಸೀಗೆಬಾಗಿಯ ಈಶ್ವರ ದೇವಸ್ಥಾನದ ಬಳಿ ಇತ್ತೀಚೆಗೆ ಅಪರಿಚಿತ ಮೃತ ದೇಹವೊಂದು ಪತ್ತೆಯಾಗಿದ್ದು ಈ ಪ್ರಕರಣ ಈಗ ತಿರುವು ಪಡೆದುಕೊಂಡಿದೆ. ಪತ್ನಿ ಮತ್ತು ಪುತ್ರನಿಂದಲೇ ತಂದೆಯ ಕೊಲೆ ಮಾಡಿರುವುದು ಬೆಳಕಿಗೆ ಬಂದಿದೆ.

ಘಟನೆಯ ಹಿನ್ನಲೆ :

ಸೊರಬ ತಾಲೂಕಿನ ಯಲವಾಲ ಗ್ರಾಮದ ನಿವಾಸಿಯಾಗಿದ್ದ ಮೌನೇಶಪ್ಪ(50) ಎರಡು ಮದುವೆಯಾಗಿದ್ದರು. ಮೊದಲನೇ ಪತ್ನಿ ಮಂಜುಳಾರವರ ಜೊತೆಗಿದ್ದ ಮೌನೇಶಪ್ಪ ಬ್ಯಾಡಗಿ ತಾಲೂಕಿನ ಮಸಣಗಿಯಲ್ಲಿ ವಾಸವಾಗಿದ್ದರು. ಎರಡನೇ ಪತ್ನಿಗೆ ಎರಡು ಮಕ್ಕಳು ಮತ್ತು ಮೊದಲನೇ ಹೆಂಡತಿ ಮಂಜುಳಾರಿಗೆ ಶಂಭು ಎಂಬ ಮಗನಿದ್ದನು.

ಪತ್ನಿ ಮಂಜುಳಾ ಮತ್ತು ಮೌನೇಶಪ್ಪ ನಡುವೆ ಜಗಳ ನಡೆಯುತ್ತಿತ್ತು ಎಂದು ದೂರಿನಲ್ಲಿ ದಾಖಲಾಗಿದೆ. ಮೌನೇಶಪ್ಪ ಜಗಳವಾದಾಗ ಮನೆಬಿಟ್ಟು ಹೋಗುವುದು ಮತ್ತು ವಾಪಾಸಾಗುವುದು ಮಾಮೂಲಿಯಾಗಿತ್ತು. ಜಗಳದ ಕುರಿತು ಮೌನೇಶಪ್ಪ ತನ್ನ ಅಳಿಯ ರಾಜಶೇಖರ್ ಮಲ್ಲಪ್ಪ ಕಬ್ಬೂರು ಬಳಿ ಹೇಳಿಕೊಂಡಿದ್ದರು.

ಯಾವಾಗ ಒಂದು ವರ್ಷದಿಂದ ಮನೆಗೆ ವಾಪಾಸ್ ಆಗದ ಮೌನೇಶಪ್ಪನ ಅಳಿಯ ರಾಜಶೇಖರ್ ಮಲ್ಲಪ್ಪ ಕಬ್ಬೂರು ಮತ್ತೋರ್ವ ಮಾವ ಕರೆ ಮಾಡಿ ಕೇಳಿದಾಗ ಮಂಜುಳಮ್ಮ ಏರು ಧ್ವನಿಯಲ್ಲಿ  ಪದೇ ಪದೇ ಕರೆ ಮಾಡಬೇಡಿ ಎಂದು  ತಿಳಿಸಿರುತ್ತಾರೆ.

ಇತ್ತ ಮಂಜುಳ ಮತ್ತು ಶಂಭು ಬ್ಯಾಡಗಿ ಪೊಲೀಸ್ ಠಾಣೆಯಲ್ಲಿ ಪತಿ ಮೌನೇಶಪ್ಪ ಕಾಣೆಯಾಗಿರುವುದಾಗಿ ದೂರು ದಾಖಲಿಸಿದ್ದರು. ಇತ್ತ ಭದ್ರಾವತಿಯ ಸೀಗೆಬಾಗಿ ಈಶ್ವರ ದೇವಾಲಯದ ಬಳಿ ಅಪರಿಚಿತ ಶವವೊಂದು ಪತ್ತೆಯಾಗಿರುತ್ತದೆ.

ಭದ್ರಾವತಿ ಓಲ್ಡ್ ಟೌನ್ ಪೊಲೀಸರು ಅಪರಿಚಿತ ಶವ ಪತ್ತೆಯಾದ ಬೆನ್ನಲ್ಲೇ ಯುಡಿಆರ್ ದಾಖಲಿಸಿಕೊಂಡಿದ್ದರು.

ಪ್ರಕರಣದ ಬೆನ್ನತ್ತಿದ ಪೊಲೀಸರು :

ಬ್ಯಾಡಗಿ ಪೊಲೀಸರು ನಾಪತ್ತೆ ಪ್ರಕರಣ ಬೆನ್ನುಹತ್ತಿಕೊಂಡು ಬಂದು ಪ್ರಕರಣ ಬೇಧಿಸಿದ್ದಾರೆ. ಮಂಜುಳ ಮತ್ತು ಪುತ್ರ ಶಂಭು ಇಬ್ಬರು ಆರೋಪಿಗಳು ಆಯನೂರಿನಲ್ಲಿ ಕೆಲಸಕ್ಕೆ ಬಂದಿದ್ದು ಅಲ್ಲೊಬ್ಬ ಎಳನೀರು ಕೊಚ್ಚುವ  ಶಿವರಾಜ್ ಎಂಬುವನ ಸಹಾಯದಿಂದ ಮೌನೇಶಪ್ಪನ ಕೊಲೆ ಮಾಡಿರುವುದು ಪತ್ತೆಯಾಗಿದೆ. ಮಂಜುಳ, ಪುತ್ರ ಶಂಭು ಹಾಗೂ ಶಿವರಾಜ್ ಎಂಬುವರನ್ನ ಬಂಧಿಸಲಾಗಿದೆ.
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ರಿಪ್ಪನ್‌ಪೇಟೆ ಪಟ್ಟಣದ ನಾಲ್ಕು ರಸ್ತೆಗಳಿಗೆ ಬೆಳಕಿನ ಭಾಗ್ಯ: ಬೇಳೂರು ಗೋಪಾಲಕೃಷ್ಣರಿಂದ ಚಾಲನೆ

ರಿಪ್ಪನ್‌ಪೇಟೆ ಪಟ್ಟಣದ ನಾಲ್ಕು ರಸ್ತೆಗಳಿಗೆ ಬೆಳಕಿನ ಭಾಗ್ಯ: ಬೇಳೂರು ಗೋಪಾಲಕೃಷ್ಣರಿಂದ ಚಾಲನೆ “ಕೊಟ್ಟ ಮಾತಿನಂತೆ ವಿದ್ಯುತ್ ದೀಪ ಅಳವಡಿಸಿದ್ದೇನೆ” —…

9 hours ago

ರಿಪ್ಪನ್‌ಪೇಟೆಯಲ್ಲಿ 59ನೇ ವರ್ಷದ ಗಣಪತಿ ಪ್ರತಿಷ್ಠಾಪನಾ ಭವ್ಯ ಮೆರವಣಿಗೆ

ರಿಪ್ಪನ್‌ಪೇಟೆಯಲ್ಲಿ 59ನೇ ವರ್ಷದ ಗಣಪತಿ ಪ್ರತಿಷ್ಠಾಪನಾ ಭವ್ಯ ಮೆರವಣಿಗೆ Ripponpete celebrates the 59th annual Ganapati festival with…

10 hours ago

ಕಾಡುಪ್ರಾಣಿ ತಪ್ಪಿಸಲು ಹೋಗಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಕಾರು – ತಪ್ಪಿದ ಭಾರಿ ಅನಾಹುತ

ಕಾಡುಪ್ರಾಣಿ ತಪ್ಪಿಸಲು ಹೋಗಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಕಾರು – ತಪ್ಪಿದ ಭಾರಿ ಅನಾಹುತ A car crashed into…

2 days ago

ರಿಪ್ಪನ್‌ಪೇಟೆಯಲ್ಲಿ 59ನೇ ಗಣೇಶೋತ್ಸವಕ್ಕೆ ಭರದ ಸಿದ್ದತೆ : ಸೆ.14ರಿಂದ 11 ದಿನಗಳ ಸಾಂಸ್ಕೃತಿಕ ಸಂಭ್ರಮ

ರಿಪ್ಪನ್‌ಪೇಟೆಯಲ್ಲಿ 59ನೇ ಗಣೇಶೋತ್ಸವಕ್ಕೆ ಭರದ ಸಿದ್ದತೆ : ಸೆ.14ರಿಂದ 11 ದಿನಗಳ ಸಾಂಸ್ಕೃತಿಕ ಸಂಭ್ರಮ Rippanpete Ganeshotsava 2026: Karnataka…

2 days ago

ಹೊಸನಗರದಲ್ಲಿ ಸೆ.14ರಿಂದ 28ರವರೆಗೆ 8ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ: ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಿದ್ಧತೆ

ಹೊಸನಗರದಲ್ಲಿ ಸೆ.14ರಿಂದ 28ರವರೆಗೆ 8ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ: ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಿದ್ಧತೆ Hosanagara Hindu Mahasabha…

2 days ago

ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ

ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ Forest mobile squad seizes…

2 days ago