ರಿಪ್ಪನ್ಪೇಟೆ : ಇಲ್ಲಿನ ಜನಸ್ನೇಹಿ ಪಿಎಸ್ಐ ಪ್ರವೀಣ್ ಎಸ್ ಪಿ ಯವರನ್ನು ದಾವಣಗೆರೆ ಜಿಲ್ಲೆಯ ನ್ಯಾಮತಿ ಪೊಲೀಸ್ ಠಾಣೆಗೆ ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾವಣೆಗೊಳಿಸಿ ಸ್ಥಳ ನಿಯುಕ್ತಿಗೊಳಿಸಲಾಗಿದೆ.
ರಿಪ್ಪನ್ಪೇಟೆ ಪೊಲೀಸ್ ಠಾಣೆಗೆ ಬಂಕಾಪುರದಲ್ಲಿ ಕಾರ್ಯ ನಿರ್ವಹಿಸುತ್ತಿರುವ ನಿಂಗಪ್ಪ ಕರಕಣ್ಣನವರ ರವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾವಣೆಗೊಳಿಸಿ ಸ್ಥಳ ನಿಯುಕ್ತಿಗೊಳಿಸಲಾಗಿದೆ.
ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ಈ ಪ್ರಕ್ರಿಯೆ ನಡೆದಿದ್ದು ಚುನಾವಣೆ ನಂತರ ಮರು ವರ್ಗಾವಣೆಯಾಗುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ.
ಲೋಕಸಭಾ ಚುನಾವಣೆ-2024 ಕ್ಕೆ ಸಂಬಂದಿಸಿದಂತೆ ಉಲ್ಲೇಖ [1] ರ ಮಾನ್ಯ ಭಾರತ ಚುನಾವಣಾ ಆಯೋಗದ ಮಾರ್ಗಸೂಚಿಗೊಳಪಟ್ಟು ಹಾಗೂ ಪೊಲೀಸ್ ಪ್ರಧಾನ ಕಛೇರಿಯ ಪತ್ರದಲ್ಲಿನ ನಿರ್ದೇಶನಗಳನ್ವಯ ವರ್ಗಾವಣೆ ಪ್ರಕ್ರಿಯೆಗಳನ್ನು ಕುರಿತು ದಿನಾಂಕ:28/01/2024 ರಂದು ನಡೆಸಲಾದ ಪೊಲೀಸ್ ಸಿಬ್ಬಂದಿ ಮಂಡಳಿಯ ತೀರ್ಮಾನದಂತೆ ಪೂರ್ವ ವಲಯದ ಅಧೀನದಲ್ಲಿ ಬರುವ ಶಿವಮೊಗ್ಗ ಜಿಲ್ಲಾ ಘಟಕಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪಿಎಸ್ಐ ರವರುಗಳನ್ನು ಅವರುಗಳ ಹೆಸರುಗಳ ಮುಂದೆ ನಮೂದಿಸಿರುವ ಸ್ಥಳಕ್ಕೆ ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾವಣೆಗೊಳಿಸಿ ಸ್ಥಳ ನಿಯುಕ್ತಿಗೊಳಿಸಲಾಗಿದೆ.
About The Author
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್