w
Headlines
Home » ರಿಪ್ಪನ್‌ಪೇಟೆಯ ವಿವಿಧೆಡೆ 75ನೇ ಗಣರಾಜ್ಯೋತ್ಸವ ಸಂಭ್ರಮ

ರಿಪ್ಪನ್‌ಪೇಟೆಯ ವಿವಿಧೆಡೆ 75ನೇ ಗಣರಾಜ್ಯೋತ್ಸವ ಸಂಭ್ರಮ

ರಿಪ್ಪನ್‌ಪೇಟೆ : 75ನೇ ಗಣರಾಜ್ಯೋತ್ಸವ ಕಾರ್ಯಕ್ರಮವು ರಿಪ್ಪನ್‌ಪೇಟೆಯ ವಿವಿಧೆಡೆಯಲ್ಲಿ ಸಂಭ್ರಮ ಸಡಗರದೊಂದಿಗೆ ವಿಜೃಂಭಣೆಯಿಂದ ಜರುಗಿತು.

ಗ್ರಾಮ ಪಂಚಾಯ್ತಿ ಕಛೇರಿಯಲ್ಲಿ ಗ್ರಾಮಾಧ್ಯಕ್ಷೆ ಧನಲಕ್ಷ್ಮಿ ಧ್ವಜಾರೋಹಣ ನೆರವೇರಿಸಿ ಧ್ವಜ ವಂದನೆ ಸ್ವಿಕರಿಸಿದರು. ಪೊಲೀಸ್ ಠಾಣೆಯಲ್ಲಿ ಪಿ.ಎಸ್.ಐ ಪ್ರವೀಣ್‌ಕುಮಾರ್ ಎಸ್.ಪಿ, ನಾಡಕಛೇರಿಯಲ್ಲಿ ಉಪತಹಶೀಲ್ದಾರ್ ಹುಚ್ಚರಾಯಪ್ಪ, ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವೈದ್ಯಾಧಿಕಾರಿಗಳು, ಕೆನರಾ ಬ್ಯಾಂಕ್‌ನಲ್ಲಿ ಬ್ಯಾಂಕ್ ವ್ಯವಸ್ಥಾಪಕ ದೇವರಾಜ್, ಜುಮ್ಮಾ ಮಸೀದಿಯಲ್ಲಿ ಧರ್ಮಗುರುಗಳು, ಕೃಷಿ ಇಲಾಖೆಯಲ್ಲಿ ಸಹಾಯಕ ಕೃಷಿ ಅಧಿಕಾರಿಗಳು, ಬಿ.ಸಿ.ಎಂ ಬಾಲಕಿಯರ ವಿದ್ಯಾರ್ಥಿ ನಿಲಯದಲ್ಲಿ ಗ್ರಾಮ ಪಂಚಾಯ್ತಿ ಅಧ್ಯಕ್ಷೆ ಧನಲಕ್ಷ್ಮಿ, ಎಸ್.ಸಿ.ಎಸ್.ಟಿ, ಹಾಸ್ಟೆಲ್‌ನಲ್ಲಿ ಮೇಲ್ವಿಚಾರಕ ರಾಘವೇಂದ್ರ, ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಎಸ್.ಡಿ.ಎಂ.ಸಿ.ಅಧ್ಯಕ್ಷ ಮಂಜಪ್ಪ, ಬರುವೆ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆಯಲ್ಲಿನ ಎಸ್.ಡಿ.ಎಂ.ಸಿ. ಅಧ್ಯಕ್ಷ ರಾಘವೇಂದ್ರ, ಪಶು ಆಸ್ಪತ್ರೆಯಲ್ಲಿ ವೈದ್ಯಾಧಿಕಾರಿಗಳು, ಸರ್ಕಾರಿ ಪ್ರೌಢಶಾಲೆಯಲ್ಲಿ ಎಸ್.ಡಿ.ಎಂ.ಸಿ. ಅಧ್ಯಕ್ಷ ಗುರುರಾಜ, ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಾಚಾರ್ಯ ಎ.ಮಂಜುನಾಥ ಧ್ವಜಾರೋಹಣ ನೆರವೇರಿಸಿದರು.

ಸರ್ಕಾರಿ ಪ್ರಥಮದರ್ಜೆ ಕಾಲೇಜ್‌ನಲ್ಲಿ ಪ್ರಾಚಾರ್ಯ ಟಿ.ಚಂದ್ರಶೇಖರ್, ಶ್ರೀಬಸವೇಶ್ವರ ವಿದ್ಯಾಲಯದಲ್ಲಿ, ಗುಡ್‌ಶಫರ್ಡ್ ಶಾಲೆ, ಮೇರಿ ಮಾತಾ ಪ್ರೌಢಶಾಲೆಯಲ್ಲಿ, ಶ್ರೀಶಾರದ ರಾಮಕೃಷ್ಣ ವಿದ್ಯಾಲಯದಲ್ಲಿ ಹಾಗೂ ಅರಸಾಳು ವಲಯ ಅರಣ್ಯಾಧಿಕಾರಿಗಳ ಕಛೇರಿಯಲ್ಲಿ ಆರ್.ಎಫ್.ಓ ಬಾಬುರಾಜೇಂದ್ರ ಪ್ರಸಾದ್ ಧ್ವಜಾರೋಹಣ ನೆರವೇರಿಸಿದರು.

ಹಾಗೇಯೆ ಹೆದ್ದಾರಿಪುರ,ಕೋಡೂರು, ಅಮೃತ , ಬೆಳ್ಳೂರು , ಬಾಳೂರು , ಅರಸಾಳು, ಹರತಾಳು, ಹಾಗೂ ಚಿಕ್ಕಜೇನಿ ಗ್ರಾಮ ಪಂಚಾಯ್ತಿಯಲ್ಲಿ ಪಂಚಾಯತಿ ಅಧ್ಯಕ್ಷರು 75ನೇ ಗಣರಾಜ್ಯೋತ್ಸವದ ಧ್ವಜಾರೋಹಣಗೈದು ಸಂಭ್ರಮ ಸಡಗರದೊಂದಿಗೆ ಆಚರಿಸಿದರು.

Leave a Reply

Your email address will not be published. Required fields are marked *

  1. You cannot copy content of this page⚠️ Legal Warning: This article is protected under copyright law. Any unauthorized copying, screenshotting, reproduction, or publication on websites, social media, YouTube, or other platforms without permission may result in legal action. © POSTMAN NEWS Kannada.