ರಿಪ್ಪನ್‌ಪೇಟೆ : 75ನೇ ಗಣರಾಜ್ಯೋತ್ಸವ ಕಾರ್ಯಕ್ರಮವು ರಿಪ್ಪನ್‌ಪೇಟೆಯ ವಿವಿಧೆಡೆಯಲ್ಲಿ ಸಂಭ್ರಮ ಸಡಗರದೊಂದಿಗೆ ವಿಜೃಂಭಣೆಯಿಂದ ಜರುಗಿತು.
ಗ್ರಾಮ ಪಂಚಾಯ್ತಿ ಕಛೇರಿಯಲ್ಲಿ ಗ್ರಾಮಾಧ್ಯಕ್ಷೆ ಧನಲಕ್ಷ್ಮಿ ಧ್ವಜಾರೋಹಣ ನೆರವೇರಿಸಿ ಧ್ವಜ ವಂದನೆ ಸ್ವಿಕರಿಸಿದರು. ಪೊಲೀಸ್ ಠಾಣೆಯಲ್ಲಿ ಪಿ.ಎಸ್.ಐ ಪ್ರವೀಣ್‌ಕುಮಾರ್ ಎಸ್.ಪಿ, ನಾಡಕಛೇರಿಯಲ್ಲಿ ಉಪತಹಶೀಲ್ದಾರ್ ಹುಚ್ಚರಾಯಪ್ಪ, ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವೈದ್ಯಾಧಿಕಾರಿಗಳು, ಕೆನರಾ ಬ್ಯಾಂಕ್‌ನಲ್ಲಿ ಬ್ಯಾಂಕ್ ವ್ಯವಸ್ಥಾಪಕ ದೇವರಾಜ್, ಜುಮ್ಮಾ ಮಸೀದಿಯಲ್ಲಿ ಧರ್ಮಗುರುಗಳು, ಕೃಷಿ ಇಲಾಖೆಯಲ್ಲಿ ಸಹಾಯಕ ಕೃಷಿ ಅಧಿಕಾರಿಗಳು, ಬಿ.ಸಿ.ಎಂ ಬಾಲಕಿಯರ ವಿದ್ಯಾರ್ಥಿ ನಿಲಯದಲ್ಲಿ ಗ್ರಾಮ ಪಂಚಾಯ್ತಿ ಅಧ್ಯಕ್ಷೆ ಧನಲಕ್ಷ್ಮಿ, ಎಸ್.ಸಿ.ಎಸ್.ಟಿ, ಹಾಸ್ಟೆಲ್‌ನಲ್ಲಿ ಮೇಲ್ವಿಚಾರಕ ರಾಘವೇಂದ್ರ, ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಎಸ್.ಡಿ.ಎಂ.ಸಿ.ಅಧ್ಯಕ್ಷ ಮಂಜಪ್ಪ, ಬರುವೆ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆಯಲ್ಲಿನ ಎಸ್.ಡಿ.ಎಂ.ಸಿ. ಅಧ್ಯಕ್ಷ ರಾಘವೇಂದ್ರ, ಪಶು ಆಸ್ಪತ್ರೆಯಲ್ಲಿ ವೈದ್ಯಾಧಿಕಾರಿಗಳು, ಸರ್ಕಾರಿ ಪ್ರೌಢಶಾಲೆಯಲ್ಲಿ ಎಸ್.ಡಿ.ಎಂ.ಸಿ. ಅಧ್ಯಕ್ಷ ಗುರುರಾಜ, ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಾಚಾರ್ಯ ಎ.ಮಂಜುನಾಥ ಧ್ವಜಾರೋಹಣ ನೆರವೇರಿಸಿದರು.
ಸರ್ಕಾರಿ ಪ್ರಥಮದರ್ಜೆ ಕಾಲೇಜ್‌ನಲ್ಲಿ ಪ್ರಾಚಾರ್ಯ ಟಿ.ಚಂದ್ರಶೇಖರ್, ಶ್ರೀಬಸವೇಶ್ವರ ವಿದ್ಯಾಲಯದಲ್ಲಿ, ಗುಡ್‌ಶಫರ್ಡ್ ಶಾಲೆ, ಮೇರಿ ಮಾತಾ ಪ್ರೌಢಶಾಲೆಯಲ್ಲಿ, ಶ್ರೀಶಾರದ ರಾಮಕೃಷ್ಣ ವಿದ್ಯಾಲಯದಲ್ಲಿ ಹಾಗೂ ಅರಸಾಳು ವಲಯ ಅರಣ್ಯಾಧಿಕಾರಿಗಳ ಕಛೇರಿಯಲ್ಲಿ ಆರ್.ಎಫ್.ಓ ಬಾಬುರಾಜೇಂದ್ರ ಪ್ರಸಾದ್ ಧ್ವಜಾರೋಹಣ ನೆರವೇರಿಸಿದರು.
ಹಾಗೇಯೆ ಹೆದ್ದಾರಿಪುರ,ಕೋಡೂರು, ಅಮೃತ , ಬೆಳ್ಳೂರು , ಬಾಳೂರು , ಅರಸಾಳು, ಹರತಾಳು, ಹಾಗೂ ಚಿಕ್ಕಜೇನಿ ಗ್ರಾಮ ಪಂಚಾಯ್ತಿಯಲ್ಲಿ ಪಂಚಾಯತಿ ಅಧ್ಯಕ್ಷರು 75ನೇ ಗಣರಾಜ್ಯೋತ್ಸವದ ಧ್ವಜಾರೋಹಣಗೈದು ಸಂಭ್ರಮ ಸಡಗರದೊಂದಿಗೆ ಆಚರಿಸಿದರು.
ರಫ಼ಿ ರಿಪ್ಪನ್ ಪೇಟೆನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್