ಹೋರಿ ಬೆದರಿಸುವ ಸ್ಪರ್ಧೆ – ಸ್ಪರ್ಧೆ ವೀಕ್ಷಿಸುತಿದ್ದ ಯುವಕ ಸಾವು |
ಶಿಕಾರಿಪುರ(shikaripura) ತಾಲೂಕಿನ ತರಲಘಟ್ಟ ಗ್ರಾಮದಲ್ಲಿ ಭಾನುವಾರ ಆಯೋಜಿಸಿದ್ದ ರಾಜ್ಯ ಮಟ್ಟದ ಹೋರಿ ಬೆದರಿಸುವ ಸ್ಪರ್ಧೆ( Bull bully competition) ವೇಳೆ, ಹೋರಿ ತಿವಿದು ಯುವಕನೊಬ್ಬ ಮೃತಪಟ್ಟಿದ್ದಾರೆ.
ತಾಲೂಕಿನ ತರಲಘಟ್ಟ ಗ್ರಾಮದಲ್ಲಿ ಭಾನುವಾರ ಆಯೋಜಿಸಿದ್ದ ರಾಜ್ಯ ಮಟ್ಟದ ಹೋರಿ ಬೆದರಿಸುವ ಸ್ಪರ್ಧೆ ವೇಳೆ, ಹೋರಿ ತಿವಿದು ಯುವಕನೊಬ್ಬ ಮೃತಪಟ್ಟಿದ್ದಾರೆ.
ಮೃತ ಯುವಕನನ್ನು ಶಿಕಾರಿಪುರ ತಾಲೂಕಿನ ಈಸೂರು(esuru) ಗ್ರಾಮದ ರಾಮು(26) ಎಂದು ಗುರುತಿಸಲಾಗಿದೆ.
ಹೋರಿ ಬೆದರಿಸುವ ಸ್ಪರ್ಧೆ ವೀಕ್ಷಣೆಗೆ ಬಂದಿದ್ದ ರಾಮು ಹೋರಿ ಕುತ್ತಿಗೆಗೆ ತಿವಿದ ಕಾರಣ ಗಂಭೀರವಾಗಿ ಗಾಯಗೊಂಡಿದ್ದರು. ಕೂಡಲೇ ಅವರನ್ನು ಶಿಕಾರಿಪುರ ಸರ್ಕಾರಿ ಆಸ್ಪತ್ರೆಗೆ ಸ್ನೇಹಿತರು ಕರೆದೊಯ್ದಿದ್ದರು. ಆದರೆ ಆಸ್ಪತ್ರೆಗೆ ಬರುವಷ್ಟರಲ್ಲಿ ಯುವಕ ಮೃತಪಟ್ಟಿರುವುದಾಗಿ ವೈದ್ಯರು ಹೇಳಿದ್ದಾರೆ.
ಈ ಘಟನೆ ಸಂಬಂಧ ಶಿಕಾರಿಪುರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕಳೆದ ವರ್ಷ ಕೂಡ ಇದೇ ಗ್ರಾಮದಲ್ಲಿ ಹೋರಿ ಬೆದರಿಸುವ ಸ್ವರ್ಧೆಯಲ್ಲಿ ಹೋರಿ ತಿವಿದು ವ್ಯಕ್ತಿಯೊಬ್ಬರು ಮೃತಪಟ್ಟಿದ್ದರು.