ಹುಚ್ಚು ಪ್ರೀತಿಯಿಂದಾಗಿ 8ನೇ ತರಗತಿ ವಿದ್ಯಾರ್ಥಿನಿ ಹಾಗೂ ಬಸ್ ಡ್ರೈವರ್ ರೈಲಿಗೆ ಸಿಲುಕಿ ಆತ್ಮಹತ್ಯೆಗೆ ಶರಣಾಗಿರುವ ಕಳವಳಕಾರಿ ಘಟನೆ ನಡೆದಿದೆ.
ಚಿಕ್ಕಮಗಳೂರು ಜಿಲ್ಲೆಯ ಅಜ್ಜಂಪುರ ತಾಲೂಕು ಬಂಕನಕಟ್ಟೆ ಸಮೀಪ ಘಟನೆ ನಡೆದಿದ್ದು, ರೈಲಿಗೆ ಅಡ್ಡಲಾಗಿ ನಿಂತು ಡ್ರೈವರ್ ಸಂತೋಷ್ (38) ಹಾಗೂ 14 ವರ್ಷದ 8ನೇ ತರಗತಿ ವಿದ್ಯಾರ್ಥಿನಿ ಮೃತಪಟ್ಟಿದ್ದಾರೆ.
ಗಿರಿಯಾಪುರ ಗ್ರಾಮದ ಖಾಸಗಿ ಶಾಲೆಯಲ್ಲಿ 8ನೇ ತರಗತಿ ಓದುತ್ತಿದ್ದ ವಿದ್ಯಾರ್ಥಿನಿಯನ್ನು ಬಸ್ ಡ್ರೈವರ್ ಸಂತೋಷ್ ಪ್ರೀತಿಸುವಂತೆ ಪೀಡಿಸುತ್ತಿದ್ದ.ಬಸ್ ಡ್ರೈವರ್ ನೀಡುತ್ತಿದ್ದ ಕಿರುಕುಳದ ಸಂಬಂಧ ವಿದ್ಯಾರ್ಥಿನಿ ಪೋಷಕರು ಶಾಲಾ ಆಡಳಿತ ಮಂಡಳಿ ಗಮನಕ್ಕೆ ತಂದಿದ್ದರು.
ಭಾನುವಾರ ರಾತ್ರಿ ವಿದ್ಯಾರ್ಥಿನಿ ಸ್ನೇಹಿತೆಯರ ಜತೆ ನ್ಯೂ ಇಯರ್ ಪಾರ್ಟಿಗೆ ಹೋಗುವುದಾಗಿ ಮನೆಯಲ್ಲಿ ತಿಳಿಸಿ ಬಂದಿದ್ದಳು. ಈ ವೇಳೆ ಸಂತೋಷ್ ಆಕೆಯನ್ನು ಕರೆದೊಯ್ದು ಮಧ್ಯರಾತ್ರಿ ರೈಲಿಗೆ ಸಿಲುಕಿ ಆತ್ಮಹತ್ಯೆ ಮಾಡಿಕೊಂಡಿದ್ದು, ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ದೂರು ನೀಡಿದರೂ ಕ್ರಮ ಕೈಗೊಳ್ಳದ ಶಾಲಾ ಆಡಳಿತ ಮಂಡಳಿ ವಿರುದ್ದ ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದು, ಮೃತದೇಹಗಳ ಮರಣೋತ್ತರ ಪರೀಕ್ಷೆಗೆ ಚಿಕ್ಕಮಗಳೂರು ಮಲ್ಲೇಗೌಡ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ.ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
About The Author
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್