Accident | ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿ – ಓರ್ವ ಸ್ಥಳದಲ್ಲಿಯೇ ಸಾವು
ಸಿಮೆಂಟ್ ಲಾರಿ ಪಲ್ಟಿಯಾಗಿ ಓರ್ವ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಕಾರ್ಗಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಗುರುವಾರ ಸಂಜೆ ಸುಮಾರು 04:30 ಗಂಟೆಯ ಹೊತ್ತಿನಲ್ಲಿ ಸಿಮೆಂಟ್ ಚೀಲಗಳನ್ನೂ ತುಂಬಿದ ಲಾರಿ ವಾಹನ ಸಂಖ್ಯೆಯ KA 15 A 1383 ಲಾರಿಯೂ ಆಕಸ್ಮಿಕವಾಗಿ ಇಡುವಾಣಿ ಸಮೀಪದ ಅಪಾಯಕಾರಿ ತಿರುವಿನಲ್ಲಿ ಪಲ್ಟಿಯಾಗಿತ್ತು.
ಅಪಘಾತದಲ್ಲಿ ತಾಳಗುಪ್ಪ ಅಂಬೇಡ್ಕರ್ ಕಾಲೋನಿ ನಿವಾಸಿ ರಾಮು ಎಂಬಾತ ಸ್ಥಳದಲ್ಲೇ ಮೃತ ಪಟ್ಟಿದ್ದಾನೆ.
ಚಾಲಕ ಸೇರಿ ಇನ್ನೂ ಉಳಿದವರು ಸ್ಥಳೀಯ ಆಸ್ಪತ್ರೆಗೆ ದಾಖಲಾಗಿರುವ ಮಾಹಿತಿ ಲಭ್ಯವಾಗಿದೆ.
ಅಪಘಾತ ಸ್ಥಳಕ್ಕೆ ಕಾರ್ಗಲ್ ಠಾಣಾ ಪೊಲೀಸರು ದೌಡಾಯಿಸಿದ್ದು ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ.