ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿಯಲ್ಲಿ ಗಾಯಗೊಂಡಿದ್ದ ವ್ಯಕ್ತಿ ಸಾವು !
ಹೊಸನಗರ(Hosanagara) : ಕಳೆದ ಒಂದೂವರೆ ತಿಂಗಳ ಹಿಂದೆ ಎರಡು ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಗಾಯಗೊಂಡಿದ್ದ ವ್ಯಕ್ತಿ ಬುಧವಾರ ಮಂಗಳೂರಿನ(Manglore) ವೆನ್ಲಾಕ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದ ಘಟನೆ ನಡೆದಿದೆ.
ಅರಸಾಳು(arasalu) ಗ್ರಾಪಂ ವ್ಯಾಪ್ತಿಯ ಬಸವಾಪುರ(basavapura) ಗ್ರಾಮದ ಶ್ರೀನಾಥ್ (33) ಮೃತ ವ್ಯಕ್ತಿ. ಕಳೆದ ಡಿಸೆಂಬರ್ 2 ಕೊಳವಂಕ ಗ್ರಾಮದ ಬಳಿ ಎರಡು ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿತ್ತು. ಶ್ರೀನಾಥ್ ರವರ ತಲೆ ಮತ್ತು ಕಣ್ಣಿನ ಭಾಗಕ್ಕೆ ಗಾಯವಾಗಿತ್ತು. ಸ್ಥಳೀಯರು ಗಾಯಾಳುವನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆ ಕರೆದೊಯ್ದು ಸಣ್ಣಪುಟ್ಟ ಗಾಯಗಳಾಗಿದ್ದರಿಂದ ಹೊರರೋಗಿ ವಿಭಾಗದಲ್ಲಿ ಚಿಕಿತ್ಸೆ ಕೊಡಿಸಿ ವಾಪಾಸ್ ಆಗಿದ್ದರು.
ನಂತರ ಶ್ರೀನಾಥ್ ಮನೆಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದು ಸುಮಾರು 20 ದಿನಗಳ ನಂತರ ಆರೋಗ್ಯದಲ್ಲಿ ಏರುಪೇರಾಗಿ ಆಗಾಗ್ಗೆ ಜ್ವರ ಮತ್ತು ತಲೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಶಿವಮೊಗ್ಗ ಮೆಟ್ರೋ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಅಲ್ಲಿನ ವೈದ್ಯರ ಸಲಹೆ ಮೇರೆಗೆ ಜ.5 ರಂದು ಉಡುಪಿಯ ಮಣಿಪಾಲ(manipal) ಕೆಎಂಸಿ ಆಸ್ಪತ್ರೆಗೆ ರವಾನಿಸಲಾಗಿತ್ತು. ಆದರೆ ಆರೋಗ್ಯ ಸ್ಥಿತಿ ಇನ್ನೂ ಗಂಭೀರವಾಗಿದ್ದರಿಂದ ಕಳೆದ ಎರಡು ದಿನಗಳ ಹಿಂದೆ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ರವಾನಿಸಲಾಗಿತ್ತು. ದುರಾದೃಷ್ಟವಶಾತ್ ಚಿಕಿತ್ಸೆ ಫಲಕಾರಿಯಾಗದೆ ಬುಧವಾರ ಮಧ್ಯಾಹ್ನ ಶ್ರೀನಾಥ್ ಕೊನೆಯುಸಿರೆಳೆದರು.
ಮೃತರು ಒಂದೂವರೆ ವರ್ಷದ ಹಿಂದಷ್ಟೇ ವಿವಾಹವಾಗಿದ್ದು ಪತ್ನಿ, 9 ತಿಂಗಳ ಪುತ್ರ, ತಾಯಿ ಮತ್ತು ಸಹೋದರಿ, ಸಹೋದರ ಸೇರಿದಂತೆ ಅಪಾರ ಬಂಧು-ಬಳಗವನ್ನು ಅಗಲಿದ್ದು ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು. ಗುರುವಾರ ಮಧ್ಯಾಹ್ನದ ಸ್ವಗ್ರಾಮ ಬಸವಾಪುರದಲ್ಲಿ ಅಂತ್ಯಸಂಸ್ಕಾರ ನೆರವೇರಿತು.
ಈ ಘಟನೆ ಸಂಬಂಧ ರಿಪ್ಪನ್‌ಪೇಟೆ(Ripponpete) ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ರಫ಼ಿ ರಿಪ್ಪನ್ ಪೇಟೆನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್