ಧರ್ಮಸಾಮರಸ್ಯ, ಸ್ವಾವಲಂಬನೆ, ಕರ್ತವ್ಯ ತತ್ಫರತೆಯಿಂದ ಭಾರತ ರಾಷ್ಟ್ರದ ಔನತ್ಯ ಶತಃಸಿದ್ಧ | ಹೊಂಬುಜ ಶ್ರೀಗಳು
ಪ್ರತಿಯೋರ್ವರೂ ಭಾರತದ ಸಂವಿಧಾನದ ಪರಿವ್ಯಾಪ್ತಿಯಲ್ಲಿ ರಾಷ್ಟ್ರದ ಭಾವೈಕ್ಯತೆ, ಸಮಗ್ರತೆಯನ್ನು ಗೌರವಯುತವಾಗಿ ಸಂರಕ್ಷಿಸಬೇಕು. ಪ್ರಜಾಪ್ರಭುತ್ವವು ರಾಷ್ಟ್ರದ ಆಡಳಿತ ನಿರ್ವಹಣೆಗೆ ಮಾತ್ರ ಸೀಮಿತವಾಗಿರದೇ ಧರ್ಮ ಸಹಿಷ್ಣುತೆ, ಅಹಿಂಸಾತ್ಮಕ ಜೀವನ ಮೌಲ್ಯಗಳನ್ನು ರೂಢಿಸಿಕೊಳ್ಳಲು ದಾರಿದೀಪವಾಗಿದೆ ಎಂದು ಹೊಂಬುಜ ಜೈನ ಮಠದ ಪೀಠಾಧೀಶರಾದ ಪರಮಪೂಜ್ಯ ಜಗದ್ಗುರು ಸ್ವಸ್ತಿಶ್ರೀ ಡಾ. ದೇವೇಂದ್ರಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮಿಗಳವರು ಶುಭ ಸಂದೇಶ ನೀಡಿದರು.
ದೇಶದ ಸಮಗ್ರತೆ, ಸಶಕ್ತ ಭಾರತೀಯರೆಲ್ಲರ ಆರೋಗ್ಯದಾಯಕ ಸಾಮಾಜಿಕ, ಶೈಕ್ಷಣಿಕ, ವೈಜ್ಞಾನಿಕ, ಔದ್ಯೋಗಿಕ ಕ್ಷೇತ್ರ ನವಮನ್ವಂತರದಲ್ಲಿ ಉದ್ದೀಪನಗೊಳ್ಳಲಿ ಎಂದು ಆಶಿಸಿದರು.
ಗಣತಂತ್ರವು ಭಾರತೀಯ ಸನಾತನ ಧರ್ಮ ಜೈನರ ಕೊಡುಗೆ. 24ನೇ ತೀರ್ಥಂಕರ ಶ್ರೀ ಮಹಾವೀರ ಸ್ವಾಮಿಯವರು ದೇಶದೆಲ್ಲೆಡೆ ಗಣತಂತ್ರದ ಮೂಲ ಪುರುಷರೆಂದು ದಾಖಲಾಗಿದ್ದು, ಗ್ರಾಮ ಸ್ವರಾಜ್ಯ, ಆಡಳಿತ ವಿಕೇಂದ್ರಿಕರಣದ ಫಲವು ಅಸಮಾನತೆ, ಸಂಘರ್ಷ ನಿವಾರಿಸುತ್ತದೆ ಎಂಬ ಉಲ್ಲೇಖವನ್ನು ಶ್ರೀಗಳವರು ವಿವರಿಸಿದರು.
ಹುಂಚ ಪರಂಜ್ಯೋತಿ ಆಂಗ್ಲಮಾಧ್ಯಮ ಶಾಲೆಯಲ್ಲಿ ಧ್ವಜಾರೋಹಣ, ವಿದ್ಯಾರ್ಥಿಗಳ ಸಾಮೂಹಗಾನ ಜರುಗಿತು. ಶಾಲಾ ಮುಖ್ಯೋಪಾಧ್ಯಾಯಿನಿ ಪದ್ಮಾವತಿ, ಶಿಕ್ಷಕಿಯರು ಇದ್ದರು.
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್