w
Headlines
Home » HOSANAGARA | ಅಕ್ರಮ ಮರಳು ಸಾಗಾಟ – ಎರಡು ಟಿಪ್ಪರ್ ಲಾರಿ ವಶಕ್ಕೆ.!!

HOSANAGARA | ಅಕ್ರಮ ಮರಳು ಸಾಗಾಟ – ಎರಡು ಟಿಪ್ಪರ್ ಲಾರಿ ವಶಕ್ಕೆ.!!

ಹೊಸನಗರ : ಅಕ್ರಮ ಮರಳು ಸಾಗಾಟ – ಎರಡು ಟಿಪ್ಪರ್ ಲಾರಿ ವಶಕ್ಕೆ.!!


ಹೊಸನಗರ :  ಅಕ್ರಮವಾಗಿ ಮರಳು ಸಾಗಿಸುತಿದ್ದ ಎರಡು ಟಿಪ್ಪರ್ ಲಾರಿಯನ್ನು ಹೊಸನಗರ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ತಾಲೂಕಿನಾದ್ಯಂತ ವಿವಿಧ ಪ್ರದೇಶದಲ್ಲಿ ಅಕ್ರಮ ಮರಳು ಗಣಿಗಾರಿಕೆ ನಡೆಯುತ್ತಿರುವ ಹಿನ್ನಲೆಯಲ್ಲಿ ಹೊಸನಗರ ಪೊಲೀಸ್ ಠಾಣೆ ಪಿಎಸ್‌ಐ ಶಿವಾನಂದ್ ಕೆ ನೇತೃತ್ವದ ಸಿಬ್ಬಂದಿಗಳ ತಂಡ ಎರಡು ಟಿಪ್ಪರ್ ಲಾರಿಯನ್ನು ವಶಕ್ಕೆ ಪಡೆದಿರುತ್ತಾರೆ.

ಕ್ಷಿಪ್ರ ಕಾರ್ಯಾಚರಣೆ ನಡೆಸಿ ಸಾಗರದ ಚಂದ್ರು ಎಂಬಾತನಿಗೆ ಸೇರಿದ(KA 19 AB 9021) ಮತ್ತು ಸುತ್ತಾ ಗ್ರಾಮದ ವಿಶ್ವ ಎಂಬಾತನ (KA 15 4795) ಟಿಪ್ಪರ್ ಲಾರಿಯನ್ನು ವಶಕ್ಕೆ ಪಡೆದಿದ್ದಾರೆ.

ಕಾರ್ಯಾಚರಣೆಯಲ್ಲಿ ಪೊಲೀಸ್ ಸಿಬ್ಬಂದಿಗಳಾದ ಗಂಗಪ್ಪ , ಸುನೀಲ್ ಹಾಗೂ ಅವಿನಾಶ್ ಪಾಲ್ಗೊಂಡಿದ್ದರು.

Leave a Reply

Your email address will not be published. Required fields are marked *

  1. You cannot copy content of this page⚠️ Legal Warning: This article is protected under copyright law. Any unauthorized copying, screenshotting, reproduction, or publication on websites, social media, YouTube, or other platforms without permission may result in legal action. © POSTMAN NEWS Kannada.