Hosanagara | ಬೈಕ್ ಹಾಗೂ ಲಾರಿ ನಡುವೆ ಅಪಘಾತ ಪ್ರಕರಣ – ಬೈಕ್ ಸವಾರ ಗರ್ತಿಕೆರೆಯ ಶಮಂತ್ ಸ್ಥಳದಲ್ಲಿಯೇ ಸಾವು

Hosanagara | ಬೈಕ್ ಹಾಗೂ ಲಾರಿ ನಡುವೆ ಅಪಘಾತ ಪ್ರಕರಣ – ಬೈಕ್ ಸವಾರ ಗರ್ತಿಕೆರೆಯ ಶಮಂತ್ ಸ್ಥಳದಲ್ಲಿಯೇ ಸಾವು
ಹೊಸನಗರ ಸಮೀಪದ ಮಾವಿನಹೊಳೆ ಕ್ರಾಸ್ ನಲ್ಲಿ ಕಂಟೇನರ್ ಲಾರಿ ಮತ್ತು ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತ ಪ್ರಕರಣದಲ್ಲಿ ಮೃತಪಟ್ಟ ಯುವಕನನ್ನು ಗರ್ತಿಕೆರೆ ಮೂಲದ ಸುಮಂತ್ ಎಂದು ಗುರುತಿಸಲಾಗಿದೆ.

ಹೊಸನಗರ ಕಡೆಯಿಂದ ಸಾಗರ ಕಡೆಗೆ ತೆರಳುತ್ತಿದ್ದ ಕಂಟೇನರ್ ಲಾರಿ ಮತ್ತು ಸಾಗರ ಕಡೆಯಿಂದ ಹೊಸನಗರ ಕಡೆಗೆ ಬರುತ್ತಿದ್ದ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರ ಸುಮಂತ್(25) ಮೃತಪಟ್ಟ ಘಟನೆ ನಡೆದಿತ್ತು

ಗರ್ತಿಕೆರೆಯ ಕಮ್ಮಚ್ಚಿ ರಸ್ತೆ ನಿವಾಸಿ ಸುಮಂತ್ (25) ಮಾರುತಿಪುರ ಗ್ರಾಪಂ ವ್ಯಾಪ್ತಿಯ ಚಿಕ್ಕಮಣತಿ ಗ್ರಾಮದ ಮುತ್ತೂರಿನಲ್ಲಿರುವ ಅಕ್ಕನ ಮನೆಗೆ ತಾಯಿ ಮಾಡಿಕೊಟ್ಟ ಮಜ್ಜಿಗೆ ಮೆಣಸಿನಕಾಯಿ ಕೊಡಲು ತೆರಳುತಿದ್ದಾಗ ಈ ದುರ್ಘಟನೆ ನಡೆದಿದೆ.

ಕೆಲವು ವರ್ಷಗಳ ಹಿಂದೆ ತಂದೆಯನ್ನು ಕಳೆದುಕೊಂಡಿದ್ದ ಸುಮಂತ್ ಈತ ತಾಯಿಯೊಂದಿಗೆ ಗರ್ತಿಕೆರೆಯ ಕಮ್ಮಚ್ಚಿ ರಸ್ತೆಯಲ್ಲಿ  ವಾಸಿಸುತ್ತಿದ್ದನು.
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಕಡವೆ ಬೇಟೆ ಮಾಡಿ ಮಾಂಸ ಕತ್ತರಿಸುತ್ತಿದ್ದಾಗಲೇ ದಾಳಿ! ಮೂವರ ಬಂಧನ | 70 ಕೆ.ಜಿ. ಮಾಂಸ , ಬಂದೂಕು ಜಪ್ತಿ

ಕಡವೆ ಬೇಟೆ ಮಾಡಿ ಮಾಂಸ ಕತ್ತರಿಸುತ್ತಿದ್ದಾಗಲೇ ದಾಳಿ! ಮೂವರ ಬಂಧನ | 70 ಕೆ.ಜಿ. ಮಾಂಸ , ಬಂದೂಕು ಜಪ್ತಿ…

5 hours ago

ಬೇಕರಿ ಉತ್ಪನ್ನಗಳ ತಯಾರಿಕೆಯಲ್ಲಿ ಕೌಶಲ್ಯಾಭಿವೃದ್ಧಿ ತರಬೇತಿ: ಅರ್ಜಿ ಆಹ್ವಾನ

ಬೇಕರಿ ಉತ್ಪನ್ನಗಳ ತಯಾರಿಕೆಯಲ್ಲಿ ಕೌಶಲ್ಯಾಭಿವೃದ್ಧಿ ತರಬೇತಿ: ಅರ್ಜಿ ಆಹ್ವಾನ One-month skill development training on bakery product preparation…

22 hours ago

ತೀರ್ಥಹಳ್ಳಿ ಪೊಲೀಸ್ ಠಾಣೆಯ ಗಣಪತಿ ವಿಸರ್ಜನೆ ; ಚಂಡೆ ಸದ್ದಿಗೆ ಡಿವೈಎಸ್‌ಪಿ ಭಾನುಪ್ರಕಾಶ್, ಸಿಪಿಐ ಇಮ್ರಾನ್ ಹೆಜ್ಜೆ

ತೀರ್ಥಹಳ್ಳಿ ಪೊಲೀಸ್ ಠಾಣೆಯ ಗಣಪತಿ ವಿಸರ್ಜನೆ ; ಚಂಡೆ ಸದ್ದಿಗೆ ಡಿವೈಎಸ್‌ಪಿ ಭಾನುಪ್ರಕಾಶ್, ಸಿಪಿಐ ಇಮ್ರಾನ್ ಹೆಜ್ಜೆ Thirthahalli police…

24 hours ago

ಕೋಡೂರು ಗ್ರಾಮದಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಮನೆಗೆ ಬೆಂಕಿ : ಲಕ್ಷಾಂತರ ರೂ. ನಷ್ಟ

ಕೋಡೂರು ಗ್ರಾಮದಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಮನೆಗೆ ಬೆಂಕಿ : ಲಕ್ಷಾಂತರ ರೂ. ನಷ್ಟ House fire reported at Keelambi…

1 day ago

ಶಾಸಕರ ಜೊತೆ ಟ್ರಾಫಿಕ್ ಪೊಲೀಸರ ಡ್ಯಾನ್ಸ್; ವಿಡಿಯೋ ವೈರಲ್, ಇಬ್ಬರ ವರ್ಗಾವಣೆ

ಶಾಸಕರ ಜೊತೆ ಟ್ರಾಫಿಕ್ ಪೊಲೀಸರ ಡ್ಯಾನ್ಸ್; ವಿಡಿಯೋ ವೈರಲ್, ಇಬ್ಬರ ವರ್ಗಾವಣೆ Two traffic police personnel in Shivamogga…

1 day ago

ಬಾವಿಗೆ ಬಿದ್ದು ನಿವೃತ್ತ ಕುಲಪತಿ ಪ್ರೊ. ಎಂ.ಕೆ. ನಾಯ್ಕ್ ಸಾವು

ಬಾವಿಗೆ ಬಿದ್ದು ನಿವೃತ್ತ ಕುಲಪತಿ ಪ್ರೊ. ಎಂ.ಕೆ. ನಾಯ್ಕ್ ಸಾವು Retired Vice Chancellor Prof. M.K. Naik, 63,…

1 day ago